ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ರಾಜೇಶ್ವರಿ
ಬೆಂಗಳೂರು ಜುಲೈ 24: ಕರೋನಾ ಸಾಂಕ್ರಾಮಿಕದ ಲಾಕ್‌ಡೌನ್ ನಿಂದ ತೀವ್ರ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ನಟಿ ರಾಜೇಶ್ವರಿ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಆಯೋಜಿಸಲಾಗಿರುವ ಇಂಡಿಯನ್ ಆರ್ಟಿಸನ್ಸ್ ಬಜಾರ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಎರಡನೇ ಅಲೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದು ಕರಕುಶಲಕರ್ಮಿಗಳು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಗಾಗ್ಗೆ ಆಯೋಜಿಸಲಾಗುತ್ತಿದ್ದ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಬಹಳಷ್ಟು ಕರಕುಶಲಕರ್ಮಿಗಳಿಗೆ ಅಗತ್ಯ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಒದಗಿಸುತ್ತಿತ್ತು.…