Girl in a jacket

Author kendhooli_editor

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು ಆ,21-ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು,…

ಪಿಓಪಿ ಬಳಸುವುದಿಲ್ಲವೆಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಗೆ ಬರೆಸಿಕೊಳ್ಳಲು ಸೂಚನೆ: ಖಂಡ್ರೆ

ಬೆಂಗಳೂರು, ಆ.21- ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ನಾವು ಶ್ರದ್ಧಾಭಕ್ತಿಯಿಂದ ಆಚರಿಸುವ ಗಣೇಶೋತ್ಸವದಿಂದ ಜಲಚರಗಳಿಗೆ ಮಾರಕವಾಗಬಾರದು. ಈ ನಿಟ್ಟಿನಲ್ಲಿ ಗಣೇಶೋತ್ಸವ ಸಮಿತಿಗಳು ಮತ್ತು ಸಾರ್ವಜನಿಕರು ಪಿಓಪಿ ಗಣಪತಿ ಮೂರ್ತಿಗಳನ್ನು ಖರೀದಿಸದೆ, ಪರಿಸರ ಸ್ನೇಹಿಯಾದ ಮಣ್ಣಿನ ಗಣಪತಿ…

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21-ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ…

ಬಿಜೆಪಿಯಿಂದ ಧರ್ಮಯಾತ್ರೆ’ಗೆ ಚಾಲನೆ

ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ, 20 -ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ‌ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು ಒಳಮೀಸಲಾತಿ ಕುರಿತು ವಿಧಾನ‌ ಪರಿಷತ್‌ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು   ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ…

ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ- ಡಿಕೆಶಿ

ಬೆಂಗಳೂರು, ಆ.16-“ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ…

ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ನಿಧನ

ಬೆಂಗಳೂರು,ಆ,೧೬- ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ (೮೧) ವಿಧಿವಶರಾಗಿದ್ದಾರೆ. ಕೆಲವು ದಿನಗಳ ಹಿಂದೆ ತಮ್ಮ ಹೇಳಿಕೆಗಳಿಂದಲೇ ಸ್ವಾಮೀಜಿ ಸುದ್ದಿ ಮಾಡಿದ್ದರು. ಈ ಹೇಳಿಕೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ತಡರಾತ್ರಿ ವಿಧಿವಶರಾದರು. ಬೆಂಗಳೂರಿನ ಕೆಂಗೇರಿಯಲ್ಲಿ ಮಠವನ್ನು ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಕ ಕ್ಷೇತ್ರಕ್ಕೆ ಸ್ವಾಮೀಜಿ ಅಪಾರ ಕೊಡುಗೆಯನ್ನು ನೀಡಿದ್ದರು. ಶ್ರೀ ಚಂದ್ರಶೇಖರನಾಥ…

ಪ್ಲಾಸ್ಟಿಕ್ ಮ್ಯಾಟ್‌ಅಂಗಡಿಗೆ ಬೆಂಕಹೊತ್ತಿ ಐವರು ಸಜೀವದಹನ

ಬೆಂಗಳೂರು,ಆ,೧೬-ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಹಲಸೂರು ಗೇಟ್ ನ ನಗರ್ತಪೇಟೆಯಲ್ಲಿ ಇಂದು ಮುಂಜಾನೆ ನಡೆದಿದೆ. ದುರ್ಘಟನೆಯಲ್ಲಿ ಮದನ್ (೩೮), ಪತ್ನಿ ಸಂಗೀತಾ (೩೩) ಮಿತೇಶ್ (೮), ವಿಹಾನ್ (೫) ಸಜೀವ ದಹನಗೊಂಡ ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಮುಂಜಾನೆ ೩.೩೦ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಅಂಗಡಿಯಲ್ಲಿ ಬೆಂಕಿ…

ಡಾ. ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ,ಆ,15-ನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಸಂತ, ಜ್ಞಾನ ದಾಸೋಹಿ ಹಾಗೂ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಶಿವೈಕ್ಯರಾಗಿದ್ದಾರೆ. ಅಪ್ಪ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು. ದಾಸೋಹ ಮನೆಯಲ್ಲಿಯೇ…

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.14-“ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ…

ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹ: ಡಿ.ಕೆ. ಶಿವಕುಮಾರ್ ವಾಗ್ದಾಳಿ

*ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚ ಬೆಂಗಳೂರು, ಆ.13-ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು…

ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ನವದೆಹಲಿ,ಆ,13-ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು; 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು…

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,13- ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ…

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು, ಆ,13-ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ…

ಹುಚ್ಚವ್ವನಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

*ವರದಿ :-ಆಂಜನೇಯ ನಾಯಕನಹಟ್ಟಿ ಜಗಳೂರು,ಆ,-ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು‌‌ ಶೀಘ್ರ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿಮಕ್ಕಳು ಶಾಲೆಯ ಮುಂಭಾಗದಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು. ಹುಚ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2013 ರಿಂದಲೂ ಮೂರು ಶಿಕ್ಷಕರು ಮಾತ್ರ ಇದ್ದು. ಸದರಿ ದಿನಾಂಕದ ಶಾಲಾ ಹಾಜರಾತಿಯ ಪ್ರಕಾರ 65 ಮಕ್ಕಳಿದ್ದು ಒಂದರಿಂದ ಎಂಟನೇ ತರಗತಿವರೆಗೆ ತರಗತಿಗಳು ಇರುತ್ತವೆ ಈ ತರಗತಿಗಳಲ್ಲಿ ಕೇವಲ ಮೂರು…

ಅಮೇಜಾನ್ ಓಟಿಟಿಯಲ್ಲಿ ಈ ವಾರ ‘ತಿಮ್ಮನ ಮೊಟ್ಟೆಗಳು’ ಚಿತ್ರ

ಕಳೆದ ಜೂನ್ 27 ಕ್ಕೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ನೋಡುಗರಿಂದ ಒಳ್ಳೆಯ ಅಭಿಪ್ರಾಯ ಪಡೆದಿದ್ದ “ತಿಮ್ಮನ ಮೊಟ್ಟೆಗಳು” ಚಿತ್ರ “ಅಮೇಜಾನ್ ಪ್ರೈಮ್ ವಿಡಿಯೋ”ott ಯಲ್ಲಿ ಈ ವಾರ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ. ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮತ್ತು ಆದರ್ಶ್ ಅಯ್ಯಂಗಾರ್ ನಿರ್ಮಾಣ ಚಿತ್ರಕ್ಕಿದ್ದು ಕಾಳಿಂಗ ಹಾವು ಮತ್ತು ಮನುಷ್ಯನ ಸಂಭಂದವನ್ನು ಪ್ರಕೃತಿ ಜೊತೆಗೆ ಚಿತ್ರಿಸಲಾಗಿದೆ.

ಸಾರಂಗಿ ಚಿತ್ರದಲ್ಲಿ ಎರಡೇ ಪಾತ್ರಗಳು

ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ಮನುಷ್ಯ ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ತರಹದ ಮುಖವಾಡ ಧರಿಸಿ ಜೀವನ ನಡೆಸುತ್ತಿರುತ್ತಾನೆ. ಆದರೆ, ಒಂದು ಅನಿರೀಕ್ಷಿತ ಸನ್ನಿವೇಶ ಎದುರಾದಾಗ ನಾವು ನಮ್ಮ ಮೌಲ್ಯಗಳನ್ನು ಉಳಸಿಕೊಳ್ಳುತ್ತೇವಾ? ಅದರಿಂದ ಹೇಗೆ ಪಾರಾಗುತ್ತೇವೆ ಎಂಬುದೆ ಚಿತ್ರದ ಕಥಾಸಾರಾಂಶ. ಜೆ.ಆಚಾರ್ ಈ ಚಿತ್ರದ ನಿರ್ದೇಶಕರು.…

ಆ.11ರಂದು ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಉದ್ಘಾಟನೆ

ಶಿವಮೊಗ್ಗ,ಆ,11-ನೂತನವಾಗಿ ನಿರ್ಮಿಸಿರುವ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ನೆರವೇರಲಿದೆ. ಅಂದು ಬೆಳಗ್ಗೆ ಪೂಜೆ ಆರಂಭಗೊಂಡು ದಿ. 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ.  ಅಭಿಷೇಕವನ್ನು…

ಕಾಟಾಚಾರಕ್ಕೆ ಅಧಿವೇಶನ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,10-ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ…

ಮೆಟ್ರೋ ಯೋಜನೆಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡುತ್ತಿದೆ- ಸಿದ್ಧರಾಮಯ್ಯ

ಬೆಂಗಳೂರು ಆ10-ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು…

1 2 3 122
Girl in a jacket