Girl in a jacket

Author kendhooli_editor

ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ ,ಜು, 29:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ…

ಹುಬ್ಬಳ್ಳಿ -ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ- ಸಿ ಎಂ

ಹುಬ್ಬಳ್ಳಿ.29:ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ‌ ಬಳಿ ಮಾಧ್ಯಮ‌ದವರೊಂದಿಗೆ ಮಾತನಾಡಿದರು. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ…

ಈ ಬಾರಿ ದೆಹಲಿ ಬೇಟೆ ವೇಳೆ ಸಚಿವ ಸಂಪುಟ ಕುರಿತು ಚರ್ಚಿಸೊಲ್ಲ; ಸಿಎಂ

ಬೆಂಗಳೂರು,ಜುಲೈ,29: ನಾಳೆ ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುವ ಯೋಚನೆ ಇದೆ. ಈ ಭೇಟಿಯ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ದೆಹಲಿಗೆ ಹೋಗುತ್ತೇನೆ. ಈ ಬಾರಿ ದೆಹಲಿಯ ಭೇಟಿ ವೇಳೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸುವುದಿಲ್ಲ, ಬದಲಿಗೆ ಇನ್ನೊಂದು ಬಾರಿ ದೆಹಲಿಗೆ ಭೇಟಿ…

ತಿಂದು ನಿನ್ನನ್ನ ಋಣ ತೀರುತಲೆ ಪಯಣ!

ಸಿದ್ಧಸೂಕ್ತಿ : ತಿಂದು ನಿನ್ನನ್ನ ಋಣ ತೀರುತಲೆ ಪಯಣ! ಹುಟ್ಟಿದ ಸ್ಥಳ ದಿನ ಗೊತ್ತು. ಸಾವಿನ ಸ್ಥಳ ದಿನ ಹೇಗೆ ತಿಳಿದಿಲ್ಲ! ಎಲ್ಲೋ ಹುಟ್ಟು, ಎಲ್ಲೋ ಅಭಿವೃದ್ಧಿ, ಎಲ್ಲೋ ಹೇಗೋ ಸಾವು! ಯತ್ನ ದುಡಿಮೆ ಪರಿಶ್ರಮಗಳು ಬದಲಿಸಬಲ್ಲವಾದರೂ, ವಿಧಿ ಲಿಖಿತ ಬಲ್ಲವರಾರು? ಬದಲಿಸುವವರಾರು? ಯತ್ನಿಸದೇ ಮುಖ್ಯಮಂತ್ರಿ ಆದವರುಂಟು, ಜಗದ್ಗುರುವಾದವರುಂಟು, ಯತ್ನಿಸಿಯೂ ವಿಫಲರಾದವರುಂಟು! ಅಲ್ಪಮತದವರು – ಗೆಲ್ಲದವರು, ಪ್ರಧಾನಿಯಾದವರುಂಟು, ಏಕ ಮತದಿಂದ ಪತನರಾದವರುಂಟು! ಬಹುಮತವಿದ್ದರೂ ಅಧಿಕಾರದಿಂದ ಇಳಿದವರುಂಟು! ತಿನ್ನಲಿಲ್ಲದವ ನೂರು ದಾಟಿದ್ದುಂಟು, ಸಾವಿರ ಕೋಟಿಯವ ಬೇಗ ನರಳಿ…

ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ನೂತನ ಸಿಎಂ

ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ಬಸವರಾಜ ಬೊಮ್ಮಾಯಿ ಬೆಂಗಳೂರು,ಜು,28:  ಮಕ್ಕಳು, ಹಿರಿಯ ನಾಗರೀಕರು, ವಿಧವೆಯರು ಮತ್ತು ವಿಶೇಷ ಚೇತನರಿಗೆ ಶಿಷ್ಯವೇತನನ್ನು ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಘೋಷಿಸಿದ್ದಾರೆ‌. ಹೌದು ಅಧಿಕಾರಿಗಳ ಜತೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೊಸ ಶಿಷ್ಯವೇತನ ಜಾರಿ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ ನೀಡಲಾಗುತ್ತದೆ. ರೈತರ ಮಕ್ಕಳು…

ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯೊದಗಿಸುತ್ತೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು,ಜು,28: ರಾಜ್ಯದ ಜನತೆ ಎರಡು ಬಾರಿ ಕೋವಿಡ್ ಸಂಕಷ್ಟವನ್ನು ಮತ್ತು ಅತಿವೃಷ್ಟಿಯಿಂದ ಪ್ರವಾಹ, ನೆರೆ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ, ಸರ್ಕಾರದ ಸೌಲಭ್ಯ ಸಿಗುವಂತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಮುಖ್ಯಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ನಾನು ಇಂದು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅನೇಕ ರಾಜಕೀಯ,…

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಜು,28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಿಎಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಛ ನೀಡಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ಡಿಸಿಎಂ…

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ

ಬೆಂಗಳೂರು,ಜು,೨೭: ಬಿಜೆಪಿಯ ಮಹತ್ತರ ಬೆಳವಣಿಗೆಯಲ್ಲಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಈಮೊದಲೇ ದೆಹಲಿಯಿಂದ ಬಂದಿದ್ದ ವೀಕ್ಷಕರು ಅವರ ಹೆಸರನ್ನೇ ಅಂತಿಮ ಮಾಡಿದ್ದರು ಆದರೆ ಸಂಪ್ರದಾಯದಂತೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಅವರ ಹೆಸರನ್ನು ಆಯ್ಕೆ ಮಾಡಬೇಕಿತ್ತು ಅದರಂತೆ ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಪ್ರಸ್ತಾಪಿಸಿದರು ಅದಕ್ಕೆ ಗೋವಿಂದ್ ಕಾರಜೋಳ ಅವರು ಅನುಮೋದನೆ ನೀಡಿದರು. ಈ ಮೂಲಕ ರಾಜ್ಯದ ಮುಖ್ಯಮಂತ್ರಿಯಾಗಿ…

ಇಂದೇ ನೂತನ ಸಿಎಂ ಆಯ್ಕೆ ಖಚಿತ

ಬೆಂಗಳೂರು,ಜು,೨೭: ಬಿಎಸ್‌ವೈ ನಂತರ  ಮುಖ್ಯಮಂತ್ರಿ ಯಾರು ಎನ್ನುವುದಕ್ಕೆ ಉತ್ತರ ಇಂದು ಸಂಜೆಯೇ ಹೊರಬೀಳುವ ಸಾಧ್ಯತೆಗಳಿವೆ. ಹೌದು ಇಂದು ಸಂಜೆ ೭ ಗಂಟೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ  ಬಿಜೆಪಿ ಶಾಸಕಕಾಂಗ ಸಭೆ ನಡೆಯಲಿದೆ ಈ ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಿಂದಲೇ ಶಾಸಕಾಂಗ ಸಭೆ ಬಗ್ಗೆ ಸೂಚನೆ…

ಬಿಎಸ್‌ವೈ ರಾಜೀನಾಮೆ;ಮನನೊಂದ ಅಭಿಮಾನಿ ಆತ್ಮಹತ್ಯೆ!

ಗುಂಡ್ಲುಪೇಟೆ.ಜು,೨೭: ಬಿಎಸ್‌ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೊಮ್ಮಲಪುರದಲ್ಲಿ ಜರುಗಿದೆ. ಗ್ರಾಮದ ರ.ವಿ ( ೩೫) ಎಂಬಾತ ನಿನ್ನೆ ಸಂಜೆ ತಮ್ಮ ಅಂಗಡೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಬಿಎಸ್‌ವೈ ಅಪ್ಪಟ ಅಭಿಮಾನಿಯಾಗಿದ್ದ ರವಿಯನ್ನು ಗ್ರಾಮದಲ್ಲಿ “ರಾಜಾಹುಲಿ” ಎಂದು ಅಡ್ಡ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದರು. ನಿನ್ನೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರಿಂದ ಬೇಸರಗೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸಾಲದಿಂದ ಬೇಸತ್ತು..? ರವಿ ಸಾಲ ಮಾಡಿದ್ದ ಒತ್ತಡ…

ಅಸ್ಸಾಂ,ಮಿಜೋರಾಂ ನಡುವೆ ಮತ್ತೆ ಬುಗಿಲೆದ್ದ ಗಡಿ ಸಂಘರ್ಷ

ಗುವಾಹಟಿ,ಜು,೨೭: ಅಸ್ಸಾಂ ಮತ್ತು ಮಿಜೋರಾಂ ನಡುವೆ ಮತ್ತೇ ಗಡಿ ಸಂಘರ್ಷ ಆರಂಭವಾಗಿದೆ.ಈ ಸಂಘರ್ಷಕ್ಕೆ ಐವರು ಪೊಲೀಸರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ. ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಸೋಮವಾರ ಹಿಂಸಾಚಾರ ತಲೆದೋರಿದೆ. ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಅವರು ಸಭೆ ನಡೆಸಿದ ಎರಡೇ ದಿನಕ್ಕೆ ಈ ಸಂಘರ್ಷ ನಡೆದಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ…

ಹಾಕಿ `ಎ’ ಪಂದ್ಯದಲ್ಲಿ ಭಾರತಕ್ಕೆ ಜಯ

ಟೋಕಿಯೊ,ಜು,೨೭: ಇಲ್ಲಿನ ಒಲಿಂಪಿಕ್ಸ್‌ನಲ್ಲಿ ಭಾರತ ಮುನ್ನಡೆಗಳನ್ನು ಸಾಧಿಸುತ್ತಲೇ ಇದೆ ಎ ಗುಂಪಿನ ಹಾಕಿಯಲ್ಲಿ ಸ್ಪೇನ್ ವಿರುದ್ಧ ಭಾರತ ಜಯಗಳಿಸಿದೆ. ಭಾರತ ೩-೦ ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ರೂಪಿಂದರ್ ಪಾಲ್ ಸಿಂಗ್ ಮತ್ತು ಸಿಮ್ರಾಂಜಿತ್ ಸಿಂಗ್ ಅವರ ಅದ್ಭುತ ಪ್ರದರ್ಶನವೇ ಈ ಗೆಲುವಿಗೆ ಕಾರಣವಾಗಿದೆ. ಮಿಡ್ ಫೀಲ್ಡರ್ ಸಿಮ್ರಾಂಜಿತ್ ೧೩ನೇ ನಿಮಿಷದಲ್ಲಿ ಭಾರತದ ಖಾತೆ ತೆರೆದರು. ಬಳಿಕ ೧೫ನೇ ನಿಮಿಷದಲ್ಲಿ ರೂಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಎರಡನೇ ಗೋಲು ಬಾರಿಸಿದರು. ೫೧ನೇ ನಿಮಿಷದಲ್ಲಿ ಮತ್ತೊಂದು…

ಕದ್ದು ಹೋಳಿಗೆ ಕೊಟ್ಟರೆ, ಬೆಲ್ಲ ಇಲ್ಲಂದ್ರಂತೆ

ಸಿದ್ಧಸೂಕ್ತಿ : ಕದ್ದು ಹೋಳಿಗೆ ಕೊಟ್ಟರೆ, ಬೆಲ್ಲ ಇಲ್ಲಂದ್ರಂತೆ! ಅತ್ತೆಗೆ ಹೆದರಿ ಸೊಸೆ ಗುಟ್ಟಲಿ ಹೋಳಿಗೆ ಮಾಡುತ್ತಿದ್ದಳು.ಬೆಲ್ಲದ ಕೊರತೆ! ಹೊರಗೆ ಮಕ್ಕಳಾಡುತ್ತಿದ್ದವು. ಬಾಯಾರಿ ಬಂದ ಮಗು ಹೋಳಿಗೆ ಕಂಡು ಬೇಡಿತು.ಯಾರಿಗೂ ಹೇಳಬೇಡವೆಂದು ಕೈಗಿತ್ತಳು!ತಿಂದು ಸುಮ್ಮನಿರಬೇಕಿತ್ತು. ಬೆಲ್ಲ ಹಾಕಿಲ್ಲವೆಂದು ಗುಟ್ಟಲಿ ಹೇಳಬಹುದಿತ್ತು.ತಿನ್ನುತ್ತ ಹೊರ ಓಡಿ ಹೋಳಿಗೆಗೆ ಬೆಲ್ಲ ಇಲ್ಲವೆಂದು ಕಿರುಚಿತು! ಗುಟ್ಟು ರಟ್ಟಾಯಿತು! ಗುಟ್ಟು ರಟ್ಟಾಗದೇ ಉಳಿಯುವುದು ಕಷ್ಟ.ಕೆಲವು ಗುಟ್ಟು ರಟ್ಟಾಗಬಾರದು. ಗುಟ್ಟು ತಿಳಿದವನು ಹೊಣೆಗೇಡಿಯಾಗಬಾರದು. ಕಂಡವರಿಗೆಲ್ಲ ಯಾರಿಗೂ ಹೇಳಬೇಡವೆನುತ ಗುಟ್ಟು ತಿಳಿಸಬಾರದು. ಖಾಸಗಿತನ ಸಾರ್ವಜನಿಕವಾಗಬಾರದು. ಗುಟ್ಟು…

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಸದಾಶಿವ ಶೆಣೈ ಅಧಿಕಾರ ಸ್ವೀಕಾರ

ಬೆಂಗಳೂರು,ಜು,26:ಸರ್ಕಾರ ನೇಮಕ ಮಾಡಿರುವ ಕರ್ನಾಟಕ ಮಾಧ್ಯಮ ಅಕಾಡಮಿಗೆ ಅಧ್ಯಕ್ಷ ಸದಾಶಿವ ಶೆಣೈ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸದಸ್ಯರಾದ ಕೆ.ಕೆ.ಮೂರ್ತಿ,ಕೆಯುಡಬ್ಲೂಜೆ ಅಧ್ಯಕ್ಷ ಶಿವಾನಂದ ತಗಡೂರು,ಶಿವಕುಮಾರ್ ಬೆಳ್ಳಿ ತಟ್ಟೆ ಹಾಜರಿದ್ದರು. ಇದೇ ವೇಳೆ ಹಾಜರಿದ್ದ ಅಕಾಡೆಮಿ ಮಾಜಿ ಅಧ್ಯಕ್ಷ ಪೊನ್ನಪ್ಪ ಅವರು, ಮುಂದಿನ ಸವಾಲುಗಳು ಹಾಗೂ ಮಾಡಬೇಕಾದ ಕಾರ್ಯಗಳ ಕುರಿತು ಸಲಹೆ ನೀಡಿದರು.

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಬಿಎಸ್ವೈ ಘೋಷಣೆ

ಬೆಂಗಳೂರು, ಜು,26:ನಿರೀಕ್ಷೆಯಂತೆ ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಕೊಟ್ಟ ಮಾತಿನಂತೆ ಇಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ 2 ವವರ್ಷದ ಬಿಜೆಪಿ ಸಾಧಾನ ಸಮಾವೇಶದಲ್ಲೇ ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ಬಳಿಕ, ಊಟದ ನಂತ್ರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡುವುದಾಗಿ ಪಕ್ಷದ ಕಾರ್ಯಕ್ರಮದಲ್ಲೇ ಘೋಷಣೆ ಮಾಡಿದರು. ಶಿಕಾರಿಪುರದಲ್ಲಿ ಸಂಘದ ಕಾರ್ಯಕರ್ತನಾಗಿ ಜೀವನ ಆರಂಭಿಸಿದೆ. ಆರ್ ಎಸ್ ಎಸ್ ಪ್ರಚಾರಕನಾಗಿ ಕಾರ್ಯ ಆರಂಭವಾಯಿತು. ಕ್ರಮೇಣ ಶಿಕಾರಿಪುರಸಭೆಗೆ ನಿಂತು, ಗೆದ್ದಿದ್ದೇನೆ.…

ಇನ್ನೂ ಬದುಕಿನಿಂದ ಮಿಸ್ ಆದ ಜಯಂತಿ

ಬೆಂಗಳೂರು, ಜು,26: ಕನ್ನಡ ಚಿತ್ರರಂಗದ ಖ್ಯಾತ ನಟಿ ಅಭಿನವ ಶಾರದೆ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 76 ವರ್ಷವಾಗಿತ್ತು. ಬಳ್ಳಾರಿ ಯಲ್ಲಿ ಜನಸಿದ್ದ ಅವರು ಜಗದೇಕ ವೀರ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ಅವರು ಜೇನುಗೂಡು ಚಿತ್ರದಲ್ಲಿ ನಾಯಕಿ ಪಾತ್ರಮಾಡುವ ಮೂಲಕ ಅದ್ಬುತ ನಟನೆಗೆ ಹಲವಾರು ಜನ ಮನಸೋತಿದ್ದರು.500 ಚಿತ್ರಗಳಲ್ಲಿ ನಟಿಸಿದ ಅವರು ಬಹುಭಾಷೆ ನಟಿ ಕೂಡ. ಜಯಂತಿ ಅವರು ಇಡೀ ದಕ್ಷಿಣ ಭಾರತದಲ್ಲೇ ಮೇರುನಟಿ ಎನಿಸಿಕೊಂಡಾಕೆ. ಜಯಂತಿ ಎಂದ ಕೂಡಲೇ…

ಎಡಬಿಡದೆ ಮಳೆಯಿಂದ ಡ್ಯಾಂಗಳಿಂದ ಹರಿಬಿಟ್ಟ ನೀರು,ಪ್ರವಾಹದ ಭೀತಿಯಲ್ಲಿ ಜನ

ಬೆಂಗಳೂರು,ಜು,26:ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಕಾರಣ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳು ಪ್ರವಾಹ ಮಟ್ಟದಲ್ಲಿ ಹರಿಯುತ್ತಿದ್ದು, ಜನರಿಗೆ ಆತಂಕ ಮೂಡಿಸಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ನದಿಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ಮನೆಗಳು ಕುಸಿದಿವೆ. ಇನ್ನೂ ಕೆಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಬೆಳೆಗಳು ನಾಶವಾಗಿವೆ. ಭಾರೀ…

ಎಲ್ಲ ಬರಿ ಗೊಣಗಾಟ

‌‌‌‌                     ಸಿದ್ಧಸೂಕ್ತಿ : ಎಲ್ಲ ಬರಿ ಗೊಣಗಾಟ. ಬಾಳು ದುಸ್ತರ ಕಠಿಣ. ಹೊರಗೆ ಝಗ ಝಗ, ಒಳಗೆ ಚಿಂತೆಯ ತಳಮಳ! ಆನೆಯ ಭಾರ ಆನೆಗೆ. ಇರುವೆಯ ಭಾರ ಇರುವೆಗೆ! ಎಂತಾದರೂ ಚಿಂತೆ ಬಿಡದು. ನಿಶ್ಚಿಂತರಾದವರ ನಾನೊಬ್ಬರನು ಕಾಣೆ. ಜೀವನದುದ್ದಕ್ಕೂ ಅದಿಲ್ಲ, ಇದಿಲ್ಲವೆಂಬ ಗೊಣಗಾಟ! ಅದನ್ನು ಮಾಡಬೇಕು ಆಗುತ್ತಿಲ್ಲ, ಇದನ್ನು ಮಾಡಬೇಕು ಆಗುತ್ತಿಲ್ಲ, ಮಗ ಐಎಎಸ್ ಅಧಿಕಾರಿ ಆಗಬೇಕೆಂಬಾಶೆ, ಮಗನಿಗೆ ಒಲವಿಲ್ಲ! ಮಗಳನ್ನು ಡಾಕ್ಟರ್…

ಮುಂದೂಡಿದ್ದ ಐಪಿಎಲ್ ಪಂದ್ಯದ ಪಟ್ಟಿ ಪ್ರಕಟ

ನವದೆಹಲಿ,ಜು,25: ಕೋವಿಡ್ 19 ಕಾರಣದಿಂದ ಮುಂದೂಡಲ್ಪಟ್ಟಿರುವ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಸೆಪ್ಟೆಂಬರ್​ 19ರಿಂದ ಚೆನ್ನೈ ಸೂಪರ್​ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್​ ನಡುವೆ ಪುನರಾರಂಭಗೊಳ್ಳಲಿದೆ.​ ಯುನೈಟೆಡ್ ಅರಬ್​ ಎಮಿರೇಟ್ಸ್​ನಲ್ಲಿ ಐಪಿಎಲ್​ನ ದ್ವಿತಿಯಾರ್ಧದ ಪಂದ್ಯಗಳನ್ನು ನಡೆಸಲು ಬಿಸಿಸಿಐ ಅವಿರತವಾಗಿ ಶ್ರಮಿಸುತ್ತಿದೆ. ಸೆಪ್ಟೆಂಬರ್​ 19ರಿಂದ ಪುನಾರಂಭಗೊಂಡರೆ ಅಕ್ಟೋಬರ್​ 10ರಂದು ಎಲಿಮಿನೇಟರ್​ ನಡೆಯುತ್ತೆ. ಕ್ವಾಲಿಫೈಯರ್ 1 ಮತ್ತು 2 ಕ್ರಮವಾಗಿ ಅಕ್ಟೋಬರ್​ 11 ಮತ್ತು 12ರಂದು ನಿಗದಿಯಾಗಿದೆ. ಅಕ್ಟೋಬರ್​ 15ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಕುರಿತು ಎಎನ್​ಐ…

ಬಾಕಿ ಪರಿಹಾರ ಬಿಡುಗಡೆಗೆ ಬಿ.ಎಸ್.ವೈ ಸೂಚನೆ

ಬೆಳಗಾವಿ, ಜು.25: ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಸೂಚನೆ ನೀಡಿದರು. ನಗರದ ಪ್ರವಾಸಿಮಂದಿರದಲ್ಲಿ ನಡೆದ ಅತಿವೃಷ್ಟಿ,ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ…

1 62 63 64 65 66 99
Girl in a jacket