Girl in a jacket

Author kendhooli_editor

ರಾಷ್ಟ್ರೀಯ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ತರಬೇತಿ;ಬೊಮ್ಮಾಯಿ

ಮೈಸೂರು,ಜು,14:ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ( NDA)ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಆವರಣದಲ್ಲಿ ಏರ್ಪಡಿಸಲಾಗಿದ್ದ 35ನೇ ಪ್ರೊಬೆಷನರಿ ಪೋಲೀಸ್ ಉಪ ಅಧೀಕ್ಷಕರು ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43 ಮೇ ತಂಡದ ಪ್ರೊಬೇಶನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ…

ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆಗೆ ಸುಮಲತಾ ಒತ್ತಾಯ

ಮೈಸೂರು,ಜು.14: ಕೆಆರ್ ಎಸ್ ಡ್ಯಾಂ ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಕೆಆರ್‌ಎಸ್ ಕಲಹ ವಿಚಾರಕ್ಕೆ ಸುಮಲತಾ ಸ್ಪಷ್ಟನೆ ಕೊಟ್ಟಿದ್ದಾರೆ. ಮುಂದುವರೆದ ಅವರು, ನನಗೆ ಈಗಲೂ ಶೇಕಡ 50ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ…

ಸ್ವಾಮಿ- ಒಡೆಯ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ             ‌‌‌ ಸಿದ್ಧಸೂಕ್ತಿ : ಸ್ವಾಮಿ- ಒಡೆಯ ಸ್ವಾಮಿ=ಒಡೆಯ. ಈ ಸ್ವತ್ತಿಗೆ ಈತ ಸ್ವಾಮಿ, ಆ ಸ್ವತ್ತಿಗೆ ಆತ ಒಡೆಯ. ಸ್ವಾಮಿ =ಯಜಮಾನ. ನಾಯಿಗಿರುವ ಸ್ವಾಮಿನಿಷ್ಠೆ ಕೂಲಿಗನಿಗಿಲ್ಲ! ಸ್ವಾಮಿ =ಗಂಡ. ಪಾರ್ವತೀ ಲಕ್ಷ್ಮೀ ಸರಸ್ವತಿಯರು ತಮ್ಮ ಪತಿದೇವರ ಪಾದಗಳಿಗೆ ನಮಸ್ಕರಿಸಿ”ಸ್ವಾಮಿ, ಆಶೀರ್ವದಿಸಿ” ಎನ್ನುವರಂತೆ. ಸುಸಂಸ್ಕೃತ ಭಾರತೀಯ ನಾರಿ ಪತಿ ಹೆಸರ ನೇರ ಹೇಳಳು! ಒತ್ತಾಶೆಗೆ ಹೇಳಬೇಕೆಂದಾಗ ಒಡಪು ಬಳಸುವುದುಂಟು! ಸ್ವಾಮಿ =ಅಧಿಕಾರಿ,ನ್ಯಾಯಾಧೀಶ, ಮಂತ್ರಿ ಇತ್ಯಾದಿ. ವಕೀಲ ವಾದಿಸುವಾಗ,ನ್ಯಾಯಾಧೀಶನಿಗೆ,…

ಮೇಕೆದಾಟು ಯೋಜನೆ,ಸರ್ವಪಕ್ಷ ಸಭೆ ಅನಿವಾರ್ಯ-ಎಂ.ಬಿ.ಪಾಟೀಲ್

ವಿಜಯಪುರ,ಜು,೧೩: ಮೇಕೆ ದಾಟು ಯೋಜನೆಗೆ ತಮಿಳು ಸರ್ಕಾರದ ಅಗತ್ಯವಿಲ್ಲ ಎಂದಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷಸಭೆ ಕರೆದು ಚರ್ಚಿಸಿ ಕೇಂದ್ರದ ಮೇಲೆ ಒತ್ತಡ ತರುವ ಅನಿವಾರ್ಯತೆ ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕದಾಟು ಕಾನೂನು ಬದ್ಧವಾದ ಯೋಜನೆ, ಇದು ನಮ್ಮ ರಾಜ್ಯದ ಹಕ್ಕು. ಇದಕ್ಕೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ ಎಂದು ಹೇಳಿದರು. ತಮಿಳುನಾಡಿನ ಆಕ್ಷೇಪದ ಬಗ್ಗೆ ರಾಜ್ಯ ಸರ್ಕಾರ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.…

 ಪ್ರಶಾಂತ್ ಕಿಶೋರ್, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನ

ನವದೆಹಲಿ,ಜು,೧೩:ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್ ಕಿಶೋರ್ ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಜೂನ್ ೨೧ರಂದು ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. ೨…

ಮೇಕೆದಾಟು ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್?

ಬೆಂಗಳೂರು, ಜು. ೧೩: ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಯಾವುದೇ ನಿರ್ಧಾರ ತಗೆದುಕೊಂಡಿದ್ದರೂ ಕೇಂದ್ರ ಸರ್ಕಾರ ತಮ್ಮದೆ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ದಾಟಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ…

ಮಾಸ್ಟರ್ ಚೆಫ್ ತಮಿಳು ಆವೃತ್ತಿಯಲ್ಲಿ ಆಗಸ್ಟ್ ರಿಂದ ದೂರದರ್ಶನಕ್ಕೆ ಲಗ್ಗೆ

ರಾಮನಗರ ಜು 13: ಆಹಾರ ಪ್ರಿಯರನ್ನು ಒಗ್ಗೂಡಿಸುವ ಉದ್ದೇಶದೊಂದಿಗೆ ಇನ್ನೋವೇಟಿವ್ ಫಿಲ್ಮ್ ಅಕಾಡೆಮಿ (ಐಎಫ್‍ಎ) ಇಂದು ಬಹು ನಿರೀಕ್ಷಿತ ಪಾಕಶಾಲೆಯ ಪ್ರದರ್ಶನ – ಮಾಸ್ಟರ್ ಚೆಫ್ ತಮಿಳು ಆವೃತ್ತಿ ಬಿಡುಗಡೆ ದಿನಾಂಕವನ್ನು ರಾಮನಗರದ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್‍ಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಘೋಷಿಸಿದೆ. ಪ್ರಾದೇಶಿಕ ಸ್ವರೂಪದಲ್ಲಿ ಅಂತರರಾಷ್ಟ್ರೀಯ ಗೌರವಾನ್ವಿತ ಪ್ರದರ್ಶನವನ್ನು ದೂರದರ್ಶನ ಪರದೆಗಳಿಗೆ ತರುವ ಮೂಲಕ, ಐಎಫ್‍ಎ ಎಂಡೆಮೋಲ್ ಶೈನ್ ಸಹಯೋಗದೊಂದಿಗೆ ಆಗಸ್ಟ್, 2021 ರಿಂದ ಪ್ರಾರಂಭವಾಗುವ ಮನೆ ಅಡುಗೆ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲು ಸಜ್ಜಾಗಿದೆ. ಕಾರ್ಯಕ್ರಮದ ಬಿಡುಗಡೆಯ ಭಾಗವಾಗಿ…

ರಸ್ತೆಗೆ ಟೊಮೊಟೊ ಸುರಿದು ಪ್ರತಿಭಟನೆ

ರಾಮನಗರ ಜು 13: ಬೆಲೆ ಕುಸಿತದಿಂದ ಕಂಗೆಟ್ಟ ರೈತರು ರಾಮನಗರದ ಎಂಪಿಎಂಸಿ ಬಳಿಯ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮೊಟೊ ಸುರಿದು ಸೋಮವಾರ ರೈತರು ಪ್ರತಿಭಟನೆ ನಡೆಸಿದರು. ನಗರದ ಎಪಿಎಂಸಿ ಎದುರು ಬೆಂಗಳೂರು ಮೈಸೂರು ರಾಷ್ಟ್ರೀಯ ತಡೆದ ರೈತರು ತಾವು ಬೆಳೆದ ಟೊಮೊಟೊವನ್ನು ರಸ್ತೆ ಸುರಿದ ಕೇಂದ್ರ ಹಾಗೂ ರಾಜ್ಯ ಸರಕಾಗಳ ವಿರುದ್ಧ ಧಿಕ್ಕಾರ ಕೂಗಿದರು. ಬೆಳೆ ಇಳಿಕೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚನ್ನಪಟ್ಟಣದ ರೈತ ಸುಜೀವನ್ ಕುಮಾರ್ ಮಾತನಾಡಿ,…

ಜುಲೈ ೪ ರಿಂದಲೇ ಆರಂಭವಾಗಿದೆಯಂತೆ ಕೋವಿಡ್ ಮೂರನೇ ಅಲೆ!

ಹೈದರಾಬಾದ್,ಜು,೧೩: ಕೋವಿಡ್-೧೯ ಮೂರನೇ ಅಲೆ ಬರುತ್ತದೆ ಎನ್ನುವ ದಾವಂತದಲ್ಲಿರುವಾಗಲೇ ಹೈದರಾಬಾದ್‌ನಲ್ಲಿ ವಿಜ್ಞಾನಿಯೊಬ್ಬರು ಕಳೆದ ಜುಲೈ ೪ ರಿಂದಲೇ ಆರಂಭವಾಗಿದೆ ಎಂಬ ಅಘತಾಕಾರಿ ಮಾಹಿತಿಯನ್ನು ನೀಡಿದ್ದಾರೆ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಹಿರಿಯ ಭೌತವಿಜ್ಞಾನಿ ಡಾ.ವಿಪಿನ್ ಶ್ರೀವಾಸ್ತವ ಅವರು, ಭಾರತದಲ್ಲಿ ಕೋವಿಡ್-೧೯ ಸೋಂಕಿನ ಹರಡುವಿಕೆಯನ್ನು ವಿವರವಾಗಿ ವಿಶ್ಲೇಷಿಸಿದ್ದು, ಜುಲೈ ೪ ರಿಂದಲೇ ಮೂರನೇ ಅಲೆ ಪ್ರಾರಂಭವಾಗಿರಬಹುದು ಎಂದು ಹೇಳಿದ್ದಾರೆ. ಕಳೆದ ೪೬೩ ದಿನಗಳಲ್ಲಿ ದೇಶದಲ್ಲಿ ಸೋಂಕು ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅಧ್ಯಯನ ಮಾಡಲು ವಿಶೇಷ ವಿಧಾನವನ್ನು…

ಡಾ ಆರೂಢಭಾರತೀ ಸ್ವಾಮೀಜಿಗಳಿಂದ ಡಾ ವೀರೇಂದ್ರ ಹೆಗ್ಗಡೆ ಭೇಟಿ.

ಧರ್ಮಸ್ಥಳ, ಜು,13:ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಅಂತಾರಾಷ್ಟ್ರೀಯ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಮತ್ತು ಸಂಸ್ಕೃತ ಗುರುಕುಲದ ಬಗ್ಗೆ ಹಾಗೂ ಚೇರಂಬಾಣೆಯ ಶ್ರೀ ಸಿದ್ಧಾರೂಢಾಶ್ರಮದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಸಿದ್ಧಸೂಕ್ತಿಯ ಮೊದಲ ಭಾಗವನ್ನು ಅರ್ಪಿಸಲಾಯಿತು. ಡಾ ವೀರೇಂದ್ರ ಹೆಗ್ಗಡೆ ಅವರು ಡಾ ಆರೂಢಭಾರತೀ ಸ್ವಾಮೀಜಿಯವರ ಕಾರ್ಯಚಟುವಟಿಕೆಗಳ ಬಗ್ಗೆ…

ಜೀವನ ವಿಧಾನ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಜೀವನವಿಧಾನ. ಹಿರಿಯರು ಹೇಳಿದ್ದು :ನೂರು ವರ್ಷದ ಆಯುಷ್ಯವನ್ನು ನಾಲ್ಕು ಸಮಭಾಗ ಮಾಡಿ. ಮೊದಲ ಭಾಗ ಶಿಕ್ಷಣ – ಸಂಸ್ಕಾರ ಕಲಿಕೆಗಿರಲಿ. ಎರಡನೆಯ ಭಾಗ ಸಂಸಾರಹೊಣೆ ಸಂಪಾದನೆಗಿರಲಿ. ಮೂರನೆಯ ಭಾಗ ಧ್ಯಾನ ಜಪ ತಪ ಸೇವೆ ಧರ್ಮ ಅಧ್ಯಾತ್ಮಕ್ಕಿರಲಿ. ನಾಲ್ಕನೆಯ ಭಾಗ ತ್ಯಾಗ – ಆನಂದಮಯ! ಹೀಗಿಲ್ಲದಿರೆ ಬಾಳು ಚಿಂತೆ ದುಃಖದ ಸಾಗರ! ಪ್ರಥಮೇ ವಯಸಿ ನಾಧೀತಂ. ದ್ವಿತೀಯೇ ನಾರ್ಜಿತಂ ಧನಂ. ತೃತೀಯೇ ನ ತಪಸ್ತಪ್ತಂ. ಚತುರ್ಥೇ ಕಿಂ ಕರಿಷ್ಯತಿ?. ಬ್ರಹ್ಮಚರ್ಯ…

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರಕ್ಕೆ 14.33 ಕೋಟಿ ರೂಪಾಯಿ

ಬೆಂಗಳೂರು,ಜು,12:ಒಟ್ಟು 14. 33 ಕೋಟಿ ರೂಪಾಯಿ ವೆಚ್ಚದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. . ಬೆಂಗಳೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅನುಮೋದನೆ ನೀಡಲಾಯಿತು. 2021- 22 ನೇ ಸಾಲಿಗೆ ಅನ್ವಯವಾಗುವಂತೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕಾಗಿನೆಲೆಯಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, ವಸ್ತುಸಂಗ್ರಹಾಲಯದ ಮುಂದುವರಿದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದು, ಬಾಡ ಗ್ರಾಮದಲ್ಲಿ ಸಂಗೀತ ಕಾರಂಜಿ ಹಾಗೂ ಕನಕದಾಸರ ಅರಮನೆಯ ದರ್ಬಾರ್ ಹಾಲ್…

ಎಸ್ಸೆಸ್ಸೆಲ್ಸಿ: ಭರವಸೆ ಮೂಡಿಸಿದ ತೀರ್ಪು-ಸುರೇಶ್ ಕುಮಾರ್

ಬೆಂಗಳೂರು,ಜು,12: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬಂಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ…

ದೇಶದಲ್ಲೆ ಮೊದಲಬಾರಿಗೆ ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆ ಸೃಷ್ಟಿ

ಬೆಂಗಳೂರು,ಜು,12:ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ದಿನಾಂಕ 13 ಜುಲೈ 2021 ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ scene of crime officer ಹುದ್ದೆಗಳ ಆದೇಶ ಪ್ರತಿಯನ್ನು ಕೊಡಲಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ದೇಶದಲ್ಲಿಯೇ…

ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು,ಜು,12: ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ(43) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆ ಮೂಲಕ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ ಸುನೀಲ್ ಹೆಗ್ಗರವಳ್ಳಿ ಚಿಕ್ಕಮಗಳೂರಿನ ಗೋಣಿಬೀಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು. ಶೂಟೌಟ್ ವಿವಾದದ ಸನ್ನಿವೇಶದಲ್ಲಿ ರವಿ ಬೆಳಗೆರೆ ಅವರ ಮೇಲೆಯೇ ಸುಪಾರಿ ಆರೋಪ ಮಾಡಿ ಹಾಯ್ ಬೆಂಗಳೂರು ಕಚೇರಿಯಿಂದ…

ಜುಲೈ 19 ರಿಂದ ಸಂಸತ್ ಅಧಿವೇಶನ

ನವದೆಹಲಿ,ಜು,12: ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಸೋಮವಾರ ಮಾಹಿತಿ ನೀಡಿದ್ದಾರೆ. 19 ದಿನಗಳ ಕಾಲ ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್‌ 13ಕ್ಕೆ ಅಂತ್ಯಗೊಳ್ಳಲಿದೆ ಎಂದು ಬಿರ್ಲಾ ತಿಳಿಸಿದ್ದಾರೆ. ಸಾಮಾನ್ಯವಾಗಿ ಮುಂಗಾರು ಅಧಿವೇಶನವು ಜುಲೈ ಮೂರನೇ ವಾರದಲ್ಲಿ ಆರಂಭವಾಗಿ, ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಕೊನೆಗೊಳ್ಳುವುದು ವಾಡಿಕೆ. ಆದರೆ, ಈ ಬಾರಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸಿನ ಮೇಲೆ ಅಧಿವೇಶನದ ಅವಧಿಯನ್ನು ನಿಗದಿಪಡಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಕೋವಿಡ್‌…

ರಿಚರ್ಡ್ ಆಂಟನಿಯಾಗಿ ರಕ್ಷಿತ್ ಶೆಟ್ಟಿ

ಹೊಂಬಾಳೆ ಫಿಲಂಸ್‌ನ ಮುಂದಿನ ಚಿತ್ರ ಘೋಷಣೆಯಾಗಿದ್ದು ಇದರ ನಿರ್ದೆಶನದ ಜವಾಬ್ದಾರಿ ಜೊತೆಗೆ ನಾಯಕ ಕೂಡಾ ರಕ್ಷಿತ್ ಶೆಟ್ಟಿ ಜವಾಬ್ದಾರಿ ಹೊತ್ತುಕೊಂಡಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.. ಚಿತ್ರದ ಹೆಸರು ’ರಿಚರ್ಡ್ ಆಂಟನಿ – ಲಾರ್ಡ್ ಆಫ್ ದ ಸೀ’ ಇದು ಚಿತ್ರದ ಟೈಟಲ್ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರದ ಟೈಟಲ್ ಅಷ್ಟೆ ವಿಶೇಷವಾಗಿ ರಕ್ಷಿತ್ ಶೆಟ್ಟಿ ಈ ಚಿತ್ರದ ನಿರ್ದೇಶನದ ಹೊಣೆ ಹೊತ್ತು ಅತ್ಯಂತ ಕ್ರಿಯಾಶೀಲತೆಯನ್ನು ಇದರಲ್ಲಿ ತೊಡಗಿಸಲಿದ್ದಾರೆ ಎನ್ನುವುದು ಈಗಿನ ಹೊಸ ಸುದ್ದಿ. ಕೆಜಿಎಫ್, ಸಲಾರ್…

ಶಿವಣ್ಣಗೆ ೫೯ನೇ ಜನ್ಮದಿನದ ಸಂಭ್ರಮ

ಕನ್ನಡ ಚಿತ್ರರಂಗದ ಅತ್ಯಂತ ಬಿಜಿ ನಟ ಎಂದರೆ ಅದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ,ಅವರ ಎನರ್ಜಿ ಇನ್ನೂ ಯುವಕರಂತೆಯೇ ಇದೆ ಅವರ ಚಿತ್ರಗಳಲ್ಲಿ ಅವರ ಲವಲವಿಕೆ ನೋಡಿದರೆ ಹಾಗೆ ಅನಿಸದೆ ಇರಲಾರದು ಸದಾ ನಗು ನಗುತ್ತಲೇ ಇರುವ ಅವರಿಗೆ ಇಂದು ೫೯ ನೇ ಜನ್ಮದಿನದ ವಿಶೇಷ. ಕೊರೊನಾ ಸಂಕಷ್ಟದ ಈ ಸಮಯದಲ್ಲಿ ಅವರು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಅಭಿಮಾನಿಗಳಿಗೂ ಕೂಡ ಯಾರು ಮನೆ ಮುಂದೆ ಬರಬೇಡಿ ನಾನು ಇರುವುದಿಲ್ಲ ಎಂದು ಹೇಳಿದ್ದಾರೆ ಅಲ್ಲದೆ. ಎಲ್ಲರಿಗೂ ಅವರ ಆರೋಗ್ಯ…

ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್

ಹುಬ್ಬಳ್ಳಿ,ಜು,೧೨: ಇಲ್ಲಿನ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್‌ನಾರಾಯಣ ಅವರು ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು ಹುಬ್ಬಳ್ಳಿ ಪ್ರವಾಸದಲ್ಲಿರುವ ಅವರು ಇಲ್ಲಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ…

ದರ್ಶನ್ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿದ ಮಹಿಳೆ-ದೂರು

ಮೈಸೂರು,ಜು,೧೨: ಚಾಲೇಂಜಿಂಗ್ ಸ್ಟಾರ್ ಸ್ಟಾರ್ ದರ್ಶನ್ ತಮ್ಮ ಹೆಸರಿನಲ್ಲಿ ಮಹಿಳೆಯೊಬ್ಬಳು ವಂಚನೆ ಮಾಡಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಈ ಮೂಲಕ ದರ್ಶನ್ ಹೆಸರಿನಲ್ಲಿ ಇರುವ ಯಾವ ಆಸ್ತಿ ನಕಲಿ ಮಾಡಲಾಗಿದೆ ಯಾಕೆ ಈ ಘಟನೆ ನಡೆದಿದೆ ಇದರ ಹಿಂದೆ ಇರುವವರು ಯಾರು ಎನ್ನುವ ಕುತೂಹಲ ಕೆರಳಿಸಿದೆ. ೧೫ ದಿನಗಳ ಹಿಂದೆ ದರ್ಶನ್ ಬಳಿ ಓರ್ವ ಮಹಿಳೆ ಬಂದು, ನಿಮ್ಮ ಹೆಸರಿನಲ್ಲಿ ಶ್ಯೂರಿಟಿ ಹಾಕಿಕೊಂಡು ೨೫ ಕೋಟಿ ರೂ. ಸಾಲ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ದರ್ಶನ್ ಆಪ್ತ ರಾಬರ್ಟ್…

1 66 67 68 69 70 99
Girl in a jacket