Girl in a jacket

Author kendhooli_editor

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ)ಜು, 21-ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ…

ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ.ಎಂ.ಕೆ.ರಮೇಶ್ ನೇಮಕ

ಬೆಂಗಳೂರು, ಜು, 21-ಭಾರತ ಸರ್ಕಾರವು 2025 ನೇ ಜುಲೈ 11 ರಂದು ಸಚಿವ ಸಂಪುಟದ ನೇಮಕಾತಿ ಸಮಿತಿಯ ಮೂಲಕ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಎಂ.ಕೆ. ರಮೇಶ್ ಅವರನ್ನು ನವದೆಹಲಿಯ ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಡಿಯಲ್ಲಿರುವ ನಾಲ್ಕು ಸ್ವಾಯತ್ತ ಸಂಸ್ಥೆಗಳಲ್ಲಿ ಒಂದಾದ ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ನೂತನ ಅಧ್ಯಕ್ಷರನ್ನಾಗಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಿದೆ. ಇದಕ್ಕೂ ಮೊದಲು ಇವರು ಎನ್.ಎಂ.ಸಿ. ಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿಯೂ…

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು, ಜುಲೈ 21-ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ…

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.21- “ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ…

ಧರ್ಮಸ್ಥಳ ಪ್ರಕರಣ-ಎಸ್‌ಐಟಿ ತಂಡದ ಇಬ್ಬರ ಅಧಿಕಾರಿಗಳು ಹೊರಕ್ಕೆ?

ಬೆಂಗಳೂರು,ಜೂ,೨೧-ಧರ್ಮಸ್ಥಳದ ಅರಣ್ಯಪ್ರದೇಶದಲ್ಲಿ ನೂರಾರು ಶವಗಳನ್ನು ಊಳಲಾಗಿದೆಎಂಬ ಪ್ರಕರಣಕ್ಕೆಸಂಭಂಧಿಸಿದಂತೆ ರಾಜ್ಯ ಸರ್ಕಾರ ಅದರ ತನಿಖೆಗೆ ಎಸ್‌ಐಟಿಯನ್ನು ನೇಮಿಸಿತ್ತು ಆದರೆ ಆ ತನಿಖಾ ತಂಡದ ಐವರು ಅಧಿಕಾರಿಗಳಲ್ಲಿ ಇಬ್ಬರು ಅಧಿಕಾರಿಗಳು ತನಿಖಾ ತಂಡದಿಂದ ಹೊರಬರಲು ಸಿದ್ದತೆ ನಡೆಸಿದ್ದಾರೆ ಎನ್ನುವ ಮಾಹಿತಿ ಇದೆ. ಧರ್ಮಸ್ಥಳದ ಪ್ರಕರಣ ಈಗ ರಾಜ್ಯದಲ್ಲಿ ದೊಡ್ಡ ಸುದ್ದಿಮಾಡುತ್ತಿದೆ ಹಲವಾರು ಮಂದಿ ಇದನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಬೇಕು ಎನ್ನುವ ಆಗ್ರಹಗಳು ಒತ್ತಡಗಳು ಈ ಒತ್ತಡಕ್ಕೆ ಮಣಿದು ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಐದು ಐಪಿಎಸ್ ಅಧಿಕಾರಿಗಳನ್ನು…

ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು

ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…

ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…

ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸಲಹೆ

ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ   ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ…

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಜು,20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

ರೌಡಿಶೀಟರ್ ಹತ್ಯೆ ಪ್ರಕರಣ; ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಪ್ ಐ ಆರ್ ದಾಖಲು

ಬೆಂಗಳೂರು, ಜು,16- ರೌಡಿಶೀಟರ್ ಬಿಕ್ಲು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ದು ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್…

ನಿಕ್ಕಂ, ಸೇರಿ ನಾಲ್ವರು ರಾಜ್ಯ ಸಭೆಗೆ ನಾಮ ನಿರ್ದೇಶನ

ನವದೆಹಲಿ,ಜು.೧೩- ಸಾರ್ವಜನಿಕ ಸೇವೆ,ಕಾನೂನು,ರಾಜತಾಂತ್ರಿಕತೆ ಮತ್ತು ವಿದ್ವಾಂಸರ ಕೊಡಿಗೆಗಳನ್ನು ಪರಿಗಣಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ಕು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ನಾಮನಿರ್ದೇಶಿತರಾದ ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಅನುಭವಿ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಿಂ, ಕೇರಳ ಮೂಲದ ಶಿಕ್ಷಣ ತಜ್ಞ ಮತ್ತು ಸಮಾಜಿಕ ಕಾರ್ಯಕರ್ತ ಸಿ.ಸದಾನಂದನ್ ಮಾಸ್ಟರ್ ಮತ್ತು ಖ್ಯಾತ ಇತಿಹಾಸಕಾರ ಡಾ.ಮೀನಾಕ್ಷಿ ಜೈನ್ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ ಈ ನಾಮ ನಿರ್ದೇಶನಗಳು,ಸಾಹಿತ್ಯ,ವಿಜ್ಞಾನ,ಕಲೆ ಮತ್ತು ಸಾಮಾಜಿಕ ಸೇವೆಯಂತಹ ಕ್ಷೇತ್ರಗಳಲ್ಲಿ ಶ್ರೇಷ್ಠತೆ…

ಚಾಕಲೇಟ್ ಕೊಡುವುದಾಗಿ ನಂಬಿಸಿ ಮಗುಮೇಲೆ ಅತ್ಯಾಚಾರ

ಮಂಡ್ಯ,ಜು.೧೩- ಚಾಕಲೇಟ್ ಕೊಡಿಸುವುದಾಗಿ ಪುಸಲಾಯಿಸಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದು ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಬಂಧಿತನನ್ನು ಉತ್ತರಪ್ರದೇಶ ಮೂಲದ ಪ್ರವೀಣ್(೨೧) ಎಂದು ಗುರುತಿಸಲಾಗಿದೆ. ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರಾಗಿದ್ದು, ಕಳೆದ ಒಂದೂವರೆ ವರ್ಷದಿಂದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಫ್ಯಾಕ್ಟರಿಯಲ್ಲಿ ಬಂಧಿತ ಪ್ರವೀಣ್ ಕೂಡ ಕೆಲಸ ಮಾಡುತ್ತಿದ್ದ. ನಿನ್ನೆ ಮಧ್ಯಾಹ್ನ ಚಾಕಲೇಟ್ ಕೊಡಿಸುತ್ತೇನೆಂದು ಮಗುವನ್ನು ಪುಸಲಾಯಿಸಿ ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಮಾಜಿ ಸಭಾಪತಿ ಎನ್.ತಿಪ್ಪಣ್ಣ ನಿಧನ

ಬೆಂಗಳೂರು, ಜು 11-ಸರಳ ಸಜ್ಜನ ಹಾಗೂ ನಿಷ್ಕಂಳಕ ವ್ಯಕ್ತಿತ್ವದ ರಾಜಕೀಯ ಮುತ್ಸದ್ದಿ, ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾಗಿದ್ದ ಎನ್. ತಿಪ್ಪಣ್ಣ  ಇಂದು ಬಳ್ಳಾರಿಯ ಅವರ ನಿವಾಸದಲ್ಲಿ ನಿಧನರಾದರು. 97 ವರ್ಷ ವಯಸ್ಸಾಗಿತ್ತು, ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ 5 ಗಂಟೆಗೆ ಕೊನೆಯಿಸಿರೆಳದರು. 1928 ನವೆಂಬರ್ ತಿಂಗಳಲ್ಲಿ ಚಿತ್ರದುರ್ಗ ಜಿಲ್ಲೆ ತುರುವನೂರಿನಲ್ಲಿ ಜನಿಸಿದ ಅವರು ತುರುವನೂರಿನಲ್ಲಿ ಜರುಗಿದ ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ರಾಜಕೀಯ ಗರಡಿಯಲ್ಲಿ ಪಳಗಿ, ಮೂರು…

ಆಡಳಿತ ನಡೆಸಲು ಆಗದೆ ಇದ್ದರೆ ಅಧಿಕಾರ ಬಿಟ್ಟು ತೊಲಗಿ: ಸಿ.ಟಿ.ರವಿ ಆಗ್ರಹ

ಬೆಂಗಳೂರುಜು,10- ರಾಜ್ಯದ ಬೇಹುಗಾರಿಕಾ ದಳ ಕೋಮಾ ಸ್ಥಿತಿಗೆ ತಲುಪಿದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುತ್ತಿಲ್ಲ. ಗ್ಯಾಂಗ್ ರೇಪ್, ಕಾಲ್ತುಳಿತ, ಆತ್ಮಹತ್ಯೆ, ಕೊಲೆಯಂಥ ಕಾರಣಕ್ಕೆ ಕರ್ನಾಟಕ ಸುದ್ದಿ ಆಗುವುದು ಒಳ್ಳೆಯ ಸಂಗತಿಯಲ್ಲ. ಈ ಸರಕಾರ, ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಆಡಳಿತ ನಡೆಸಲು ಆಗದೆ ಇದ್ದರೆ…

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ, ಜು.09-ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು. ಸಂಪುಟ…

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ, 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ನವದೆಹಲಿ,ಜು,09- ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ನಿಯೋಗವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಬುಧವಾರ ಇಲ್ಲಿ ಮನವಿ ಸಲ್ಲಿಸಿದೆ. ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ…

ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರ ಹೊಸಕಾನೂನು ತರಲು ಚಿಂತನೆ- ಕೆ.ವಿ.ಪ್ರಭಾಕರ್

ಬೆಂಗಳೂರು, ಜು.೮-ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿಮೀರುತ್ತಿದ್ದು,ಇದನ್ನು ತಡೆಗಟ್ಟಲು ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು. ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ‘ಕೆಂಧೂಳಿ ಪತ್ರಿಕಾ ಬಳಗ’ದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ವಾರಪತ್ರಿಕೆ ಅಂದು-ಇಂದು, ಲಂಕೇಶ್ ಕಂಡ ವಾರಪತ್ರಿಕೆ ಮತ್ತು ಸೈದ್ಧಾಂತಿಕ ನಿಲುವುಗಳು’ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾನತಾಡಿದ ಅವರು,ಮುಂದಿನ ಅಧಿವೇಶನದಲ್ಲಿ ಈ ಕುರಿತು ವಿದೇಯಕ ಮಂಡಿಸಲು ಸರ್ಕಾರ ಸಿದ್ದತೆ ನಡೆಸಿದೆ…

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ ಬಿ ಪಾಟೀಲ

ಬೆಂಗಳೂರು,ಜು,08-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ *ಕಲಾಲೋಕ* ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಮಂಗಳವಾರ ಇಲ್ಲಿ ಸರಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ…

ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ-ಜನರಿಗೆ ಸಿಎಂ ಕರೆ

ಬೆಂಗಳೂರು, ಜು 6- ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದರು. ಅವರು ಇಂದು ತಾವರೆಕೆರೆ ಬಳಿಯ ಕೆತೋಹಳ್ಳಿ ಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ ಕೇಶದ ತಾರಕಾನಂದಪುರಿ ಮಹಾಸ್ವಾಮಿಗಳ 19ನೇ ವರ್ಷದ ಪುಣ್ಯರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ ಭಂಡಾರದ ಕುಟೀರವನ್ನು ಲೋಕಾರ್ಪಣೆ ಮಾಡಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು ಕಾಗಿನೆಲೆ…

ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀಗಳು

ಕನಕಪುರ, ಜು.06-“ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ…

1 3 4 5 6 7 123
Girl in a jacket