ಸಿ.ಎಂ., ಡಿ.ಸಿ.ಎಂ. ರಾಜೀನಾಮೆಗೆ ಒತ್ತಾಯಿಸಿ 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ
15 ಬೆಂಗಳೂರು,ಜೂ,15- ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು…