ಮೋದಿ ಸಂಪುಟಕ್ಕೆ 45 ನೂತನ ಸಚಿವರು
ನವದೆಹಲಿ,ಜು,07: ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದರು. ಕಳೆದ ವರ್ಷ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣರಾಗಿದ್ದ ಸಂಸದ ಜ್ಯೋತಿರಾದಿತ್ಯ ಸಿಂಧಿಯಾಗೂ ಸಚಿವ ಸ್ಥಾನ ದೊರೆತಿದ್ದು…