ಮೇಕೆದಾಟು ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್?
ಬೆಂಗಳೂರು, ಜು. ೧೩: ಮೇಕೆ ದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಯಾವುದೇ ನಿರ್ಧಾರ ತಗೆದುಕೊಂಡಿದ್ದರೂ ಕೇಂದ್ರ ಸರ್ಕಾರ ತಮ್ಮದೆ ನಿರ್ಧಾರವನ್ನು ತಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಮೇಕೆದಾಟು ಯೋಜನೆಗೆ ಗ್ರೀನ್ ಸಿಗ್ನಲ್ ನೀಡುವ ದಾಟಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಜಲ ಜೀವನ್ ಮಿಷನ್ ಯೋಜನೆ ಕುರಿತು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆದಿದೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ…