ಬಿಜೆಪಿ ಸರಕಾರ ಅನೈತಿಕ, ಕಾರಜೋಳ ಪಾಪದ ಮಂತ್ರಿ- ಎಂ. ಬಿ. ಪಾಟೀಲ ವಾಗ್ದಾಳಿ
ವಿಜಯಪುರ, ಸೆ,29: ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಮಾಜಿ ಜಲಸಂಫನ್ಮೂಲ ಸಚಿವ ಎಂ. ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಪಿ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಆದರೆ, ಬಿಜೆಪಿ ಸರಕಾರ ಪಾಪದ ಕೂಸು. ಅನೈತಿಕ ಸರಕಾರದಲ್ಲಿ ಗೋವಿಂದ ಕಾರಜೋಳ ಪಾಪದ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಎಂ. ಬಿ. ಪಾಟೀಲ ಹರಿಹಾಯ್ದರು. ಕಾರಜೋಳ ಅವರಿಗೆ ಈ ವಯಸ್ಸಿನಲ್ಲಿ ಈ ರೀತಿ ಹೇಳಿಕೆ ನೀಡುವುದು…
                                        


















