ಜನರ ಆಕ್ರೋಶ ಕಂಡು ಬಿಜೆಪಿಗೆ ಭಯ ; ಡಿ.ಕೆ. ಶಿ
ಚಾಮರಾಜನಗರ,ಜೂ,27:ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಛೇಡಿಸಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಸತ್ತವರ ಮನೆಗಳಿಗೆ ಭಾನುವಾರ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್,ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ನಂತರ ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾಯಿತು.…