ಕುತೂಹಲ ಮೂಡಿಸಿದ ಸಿಎಂ, ಎಚ್.ಡಿಕೆ ಭೇಟಿ
ಬೆಂಗಳೂರು,ಜು,05: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿಯ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ…