ಸಿಂಧೂರಿಗೆ ಹಿನ್ನೆಡೆ-ಅನುಮತಿ ಇಲ್ಲದೆ ಈಜು ಕೊಳ ನಿರ್ಮಾಣ
ಬೆಂಗಳೂರು,ಜೂ,೨೩: ಸಂಸದ ಪ್ರತಾಪ್ ಸಿಂಹ ಎತ್ತಿದ್ದ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅನುಮತಿ ಇಲ್ಲದೆ ಈಜುಕೊಳ ನಿರ್ಮಿಸಿದ್ದರು ಎನ್ನುವ ಅಂಶ ಈಗ ತನಿಖಾ ವರದಿಯಿಂದ ಗೊತ್ತಾಗಿದೆ. ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ ೩೨…