ಸ್ವಂತ ಮಕ್ಕಳ ಮೇಲೆ ಹಲ್ಲೆ ಮಾಡಿದ ಪಾಪಿ ತಂದೆ ಬಂಧನ
ಬೆಂಗಳೂರು ,ಜೂ, ೨೩; ಮಲತಾಯಿ ಮಾತು ಕೇಳಿ ಮೂವರು ಮಕ್ಕಳ ಮೇಲೆ ತಂದೆಯೇ ಅಮಾನುಷವಾಗಿ ಹಲ್ಲೆ ಮಾಡಿದ ಪಾಪಿ ತಂದೆಯನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೆಲ್ವಾ ಕ್ರೂಸರ್ ಚಾಲಕನಾಗಿದ್ದು. ಆತನ ಎರಡನೇ ಹೆಂಡತಿ ಮಾತು ಕೇಳಿ ತನ್ನ ಸ್ವಂತ ಮಕ್ಕಳ ಭುಜ, ಮೊಣಕೈ ಮತ್ತು ಪಾದಗಳಿಗೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ನೋವನ್ನು ತಡೆಯಲಾರದೆ ಮಕ್ಕಳು ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಿದ್ದಾರೆ.…