ಸಭಾಧ್ಯಕ್ಷರು ಒಂದು ಪಕ್ಷದ ಪರ ವರ್ತಿಸಿದ್ದು ಸರಿ ಅಲ್ಲ;ಸಿದ್ದು
ಬೆಂಗಳೂರು,ಸೆ,24 : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.…



















