ಮಂಡ್ಯ ಜಿಲ್ಲೆ ಸೇರಿ ರಾಜ್ಯದ ಹೆದ್ದಾರಿ ಬಗ್ಗೆ ಗಡ್ಕರಿಯೊಂದಿಗೆ ಎಚ್.ಡಿ.ಕೆ ಚರ್ಚೆ
ನವದೆಹಲಿ,ಆ,21-ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ…