ಬಡವರಿಗೆ ಅನ್ನ,ವಸತಿ,ಉದ್ಯೋಗ ಒದಗಿಸುವ ಸಂಕಲ್ಪ-ಸೋಮಣ್ಣ
ಬೆಂಗಳೂರು,ಜೂ,೧೮: ರಾಜ್ಯದಲ್ಲಿ ಕಷ್ಟದಲ್ಲಿರುವ ಬಡವರಿಗೆ ಅನ್ನ, ವಸತಿ, ಆರೋಗ್ಯ ಮತ್ತು ಉದ್ಯೋಗ ಒದಗಿಸುವುದು ನಮ್ಮ ಸಂಕಲ್ಪ ಎಂದು ವಸತಿ ಸಚಿವರಾದ ವಿ ಸೋಮಣ್ಣನವರು ಅಭಿಪ್ರಾಯಪಟ್ಟಿದ್ದಾರೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜ ನಗರ ವಾರ್ಡ್‌ನಲ್ಲಿ ಬಡವರು, ಬೀದಿ ಬದಿಯ ವ್ಯಾಪಾರಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಮಾಡಿ ಬಳಿಕ ಮಾತನಾಡಿದ ಸೋಮಣ್ಣನವರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ೯ವಾರ್ಡ್‌ಗಳಲ್ಲಿ ಆರ್ಥಿಕವಾಗಿ ಹಿಂದುಳಿದರಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ. ಸೋನ ಮಸೂರಿ ಅಕ್ಕಿ, ಎಣ್ಣೆ, ಬೇಳೆ ಮತ್ತು ಸಾಂಬಾರ್…