2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿ.ಕೆ. ಶಿವಕುಮಾರ್
ಬೆಂಗಳೂರು, ಜೂ.21-“2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.”ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ…