ಮಜ್ಜಿಗೆ ಆರೋಗ್ಯಕ್ಕೆ ಸಂಜೀವಿನಿ…ಮಜ್ಜಿಗೆ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತೇ….?
ಹಾಲು, ನೀರಿನ ಹಾಗೆಯೇ ಮಜ್ಜಿಗೆ ಕೂಡ ನಮ್ಮ ಆರೋಗ್ಯವನ್ನು ಕಾಪಿಡಲು ನೆರವಾಗುತ್ತದೆ. ಹಾಲಿಗೆ ಹೋಲಿಸಿದರೆ, ಮಜ್ಜಿಗೆಯಲ್ಲಿ ಅರ್ಧದಷ್ಟು ಕಡಿಮೆ ಕ್ಯಾಲರಿ ಹಾಗೂ ಮುಕ್ಕಾಲು ಅಂಶ ಕಡಿಮೆ ಕೊಬ್ಬಿನಂಶವಿದೆ. ಮೊಸರಿನಲ್ಲಿ ಅಧಿಕ ಪ್ರಮಾಣದಲ್ಲಿ ಕೊಬ್ಬಿನ ಅಂಶ ಇರುತ್ತದೆ. ಆದರೆ ಮೊಸರಿನಿಂದ ಬೆಣ್ಣೆ ತೆಗೆದು ಮಜ್ಜಿಗೆ ಮಾಡುವುದರಿಂದ ಕ್ಯಾಲರಿ, ಕೊಬ್ಬಿನ ಅಂಶ ತೀರಾ ಕಡಿಮೆ. ಮಜ್ಜಿಗೆಯು ಕಷಾಯ ಹಾಗೂ ಅಮ್ಲರಸ ಹೊಂದಿದ್ದು, ಲಘು ಗುಣದಿಂದಾಗಿ ಸುಲಭವಾಗಿ ಜೀರ್ಣ ಹೊಂದುತ್ತದೆ. ಬೇಸಿಗೆಯಲ್ಲಂತೂ ಮಜ್ಜಿಗೆಯನ್ನು ನೆನೆಸಿಕೊಂಡರೆನೇ ‘ಆಹಾ!’ ಎನ್ನುತ್ತೇವೆ. ಮಜ್ಜಿಗೆ ಕೇವಲ ದಾಹವನ್ನು…