Girl in a jacket

Author kendhooli_editor

ಎರಡನೇ ಹಂತದ ಲಾಕ್‌ಡೌನ್ ನಂತರ ಪ್ಯಾಕೇಜ್ ಘೋಷಣೆ-ಅಶೋಕ್

ಕಾರವಾರ,ಮೇ,೧೮: ಲಾಕ್‌ಡೌನ್ ಮುಂದುವರೆಸಬೇಕೆ ಬೇಡವೇ ಕುರಿತು ಮುಖ್ಯಮಂತ್ರಿಗಳು ನಿರ್ಧರಿsಲಿದ್ದು ಎರಡನೇ ಹಂತದ ಲಾಕ್‌ಡೌನ್ ಘೋಷಣೆ ನಂತರ ಪ್ಯಾಕೇಜ್‌ಘೋಷಣೆಯೂ ಮಾಡುತ್ತಾರೆ ಎನ್ನುವ ಸುಳುವಿನ್ನು ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಭಟ್ಕಳದಲ್ಲಿ ಚಂಡಮಾರುದಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೆ ಬೇಡವೇ ಎನ್ನುವ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಈ ವೇಳೆ ಎರಡನೇ ಹಂತದ ಘೋಷಣೆ ಮಾಡಿದಾಗ ಪ್ಯಾಕೇಜ್ ಕೂಡ ಘೋಷಣೆ ಮಾಡುತ್ತಾರೆ ಎಂದು ಅವರು ಹೇಳಿದರು ಹಳ್ಳಿಗಳಲ್ಲಿ…

ಕೊರಾನಾ ರೋಗಕ್ಕೆ ಕಚ್ಚಾ ಮಾವಿನ ಹಣ್ಣು ಮದ್ದು

ಕಚ್ಚಾ ಮಾವು ದೇಹದಲ್ಲಿ ನೀರಿನ ಸರಬರಾಜು ಮಾಡಲು ಸಹಾಯ ಮಾಡುತ್ತದೆ, ಇದು ನಮ್ಮ ಜೀರ್ಣಕ್ರಿಯೆಗೆ ತುಂಬಾ ಸಹಾಯಕವಾಗಿದೆ ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇದೆಯಾ? ಹಾಗಿದ್ರೆ ನೀವು ಕಚ್ಚಾ ಮಾವನ್ನು ಸೇವಿಸಬೇಕು, ಏಕೆಂದರೆ ಅದರಲ್ಲಿ ಕಂಡುಬರುವ ಅಂಶಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ವಿಶೇಷವೆಂದರೆ ಬೇಸಿಗೆಯಲ್ಲಿ ಕಚ್ಚಾ ಮಾವಿನಹಣ್ಣನ್ನು ತಿನ್ನುವುದು ನಿಮ್ಮನ್ನು ಆರೋಗ್ಯವಾಗಿರಿಸುವುದಲ್ಲದೆ ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕಚ್ಚಾ ಮಾವು ದೇಹದಲ್ಲಿ ನೀರಿನ ಸರಬರಾಜು ಮಾಡಲು ಸಹಾಯ ಮಾಡುತ್ತದೆ,…

ಎರಡನೇ ಅಲೆಗೆ ೨೬೯ ವೈದ್ಯರು ಬಲಿ!

ನವದೆಹಲಿ, ಮೇ ೧೮:ಕೊರೊನಾ ಮಹಾಮಾರಿ ಬಂದಾಗಿನಿಂದಲೂ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಿದ್ದಾರೆ,ತಮ್ಮ ಬದುಕನ್ನು ಲೆಕ್ಕಿಸದೆ ಸೇವೆಯಲ್ಲಿಯೇ ನಿರತರಾಗಿದ್ದಾರೆ ಆದರೆ .ಇದರಿಂದ ಸಾವಿರಾರು ವೈದ್ಯರು ಬಲಿಯಾಗಿದ್ದಾರೆ ಎರಡನೇ ಅಲೆಯಲ್ಲಿ೨೬೯ ವೈದ್ಯರು ಸಾವನ್ನಪ್ಪಿದ್ದಾರೆ. ಭಾರತೀಯ ವೈದ್ಯಕೀಯ ಸಂಸ್ಥೆ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಮೊದಲ ಅಲೆ ಗೆ ೭೪೮ ಮಂದಿ ವೈದ್ಯರು ಸಾವನ್ನಪ್ಪಿದ್ದೆ ಎರಡನೇ ಅಲೆಗೆ ೨೬೯ ವೈದ್ಯರು ಸಾವನ್ನಪ್ಪಿದ್ದಾರೆ. ಎರಡನೇ ಅಲೆ ಎರಡು ತಿಂಗಳಲ್ಲೇ ೨೬೯ ಮಂದಿ ತುತ್ತಾಗಿದ್ದಾರೆ. ಅದರಲ್ಲಿ ಬಿಹಾರ್, ಉತ್ತರ ಪ್ರದೇಶ, ದೆಹಲಿ ರಾಜ್ಯಗಳಲ್ಲಿ ವೈದ್ಯರು…

ಕೊರೊನಾ ಚಿಕಿತ್ಸೆಗೆ ಬಿಬಿಎಂಪಿ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬಿಬಿಎಂಪಿ ಹೊಸ ಹೊಸ ಮಾರ್ಗಸೂಚಿಗಳನ್ನು ಅನುಸರಿಸುತ್ತಿದೆ ಒಂದು ರೀತಿ ಜ್ಞಾನೋದಯವಾದಂತೆ ಈಗ ಚಿಕಿತ್ಸೆಗೆ ಮೂರು ಹಂತದ ವ್ಯವಸ್ಥೆಯನ್ನು ಮಾಡಲು ಈಗ ನಿರ್ಧರಿಸಿದೆ. ಈ ಕುರಿತಂತೆ ಈ ಮೂರು ಹಂತದ ವ್ಯವಸ್ತೆ ಹೇಗಿರಬೇಕು ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ತಗೆದುಕೊಳ್ಳಬಹುದಾದ ಜಾಗೃತಿ ಕುರಿತಂತೆ ಮಾರ್ಗಸೂಚಿಯನ್ನು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಬಿಡುಗಡೆ ಮಾಡಿದ್ದಾರೆ ಒಟ್ಟು ಮೂರು ಹಂತಗಳಲ್ಲಿ ಚಿಕಿತ್ಸಾ ನಿರ್ಧಾರ ಕೇಂದ್ರಗಳನ್ನು (ಪಿಟಿಸಿ) ಆರಂಭಿಸುವಂತೆ ಸೂಚಿಸಿದ್ದಾರೆ. ಸೋಂಕಿತರ ದೇಹಸ್ಥಿತಿ ಅವಲೋಕಿಸಿ…

ಕೊರೊನಾಗೆ ಬಲಿಯಾದ ಅಂಗನವಾಡಿಕಾರ್ಯಕರ್ತೆಯರಿಗೆ ೩೦ ಲಕ್ಷ ಪರಿಹಾರ-ಜೊಲ್ಲೆ

ಬೆಂಗಳೂರು,ಮೇ,೧೮:ಕೋವಿಡ್-೧೯ ಕ್ಕೆ ಬಲಿಯಾದ ಅಂಗನವಾಡಿ ಕಾರ್ಯಕರ್ತೆಯರಿಗೆ ೩೦ ಲಕ್ಷ ರೂ ಪರಿಹಾರ ಧನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೊರೊನಾದಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಕೊರೊನಾ ಎರಡನೇ ಅಲೆ ತೀವ್ರವಾಗಿದೆ. ಎರಡನೇ ಅಲೆಯಲ್ಲಿ ಪೋಷಕರು ತೀರಿ ಹೋಗಿ ಮಕ್ಕಳು ಅನಾಥರಾಗಿರುವ ಪ್ರಕರಣಗಳಿವೆ. ಹೀಗಾಗಿ ಅನಾಥ ಮಕ್ಕಳಿಗೆ ಸಹಾಯ…

ದೇವಗೌಡರ ೮೮ ನೇ ಜನ್ಮದಿನಕ್ಕೆ ಶುಭಕೋರಿದ ಗಣ್ಯರು

ಬೆಂಗಳೂರು,ಮೇ೧೮:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ೮೮ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಜನ್ಮದಿನದ ಅಂಗವಾಗಿ ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಅವರ ಕುಟುಂಬ ವರ್ಗ ಸರಳವಾಗಿ ಜನ್ಮದಿನವನ್ನು ಆಚರಿಸಿದರು. ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆಯೇ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭ ಹಾರೈಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ,ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹಾಗೂ ಅವರ ಪುತ್ರ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಂಸದ ಬಿ.ವೈ.ರಾಘವೇಂದ್ರ, ಪ್ರತಾಪ ಸಿಂಹ, ಸಂಸದೆ…

ನಕಲಿ ಪತ್ರಕರ್ತನ ಬಂಧಿಸಿದ ಪೊಲೀಸರು

ಹುಬ್ಬಳ್ಳಿ,ಮೇ,೧೮: ನಕಲಿ ಪತ್ರಕರ್ತರ ಹಾವಳಿ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ ಯಾರೆ ಕೇಳಿದರು ಕೆಲವರು ಪತ್ರಕರ್ತ ಎಂದು ನಕಲಿ ಐಡಿ ಕಾರ್ಡ್‌ಗಳನ್ನು ತೋರಿಸಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ ಇದರ ಪರಿಣಾಮ ಹುಬ್ಬಳಿಯಲ್ಲಿ ಪೊಲೀಸರು ನಕಲಿ ಪತ್ರಕರ್ತನನ್ನು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು…

ಭಾರೀ ಏರಿಕೆ ಕಂಡ ಚಿನ್ನದ ಬೆಲೆ

ಮುಂಬ್ಯೆ,ಮೇ,೧೮: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ೧೦ ಗ್ರಾಂಗೆ ೨೨ ಕ್ಯಾರೆಟ್ ಚಿನ್ನದ ಬೆಲೆ ೪೫,೦೬೦ ರೂ ಇತ್ತು ಇಂದು೪೬,೩೪೦ ರೂಗೆ ಏರಿಕೆಯಾಗಿದೆ. ಅದರೆ ದೇಶದ ಬೇರೆ ಬೇರೆ ನಗರಗಳಲ್ಲಿ ಬೆಲೆಯಲ್ಲಿ ಒಂದಿಷ್ಟು ವ್ಯತ್ಯೆಯಗಳಾಗಿವೆ ಎಲ್ಲಿ ಯಾವ ನಗರದಲ್ಲಿ ಎಷ್ಟಿದೆ ಎನ್ನುವ ಮಾಹಿತಿ ಇಲ್ಲಿದೆ: ಬೆಂಗಳೂರಿನಲ್ಲಿ ೨೪ ಕ್ಯಾರೆಟ್ ೧೦ ಗ್ರಾಂ ಚಿನ್ನದ ಬೆಲೆ ೨ ದಿನಗಳ ಹಿಂದೆ ೪೮,೯೮೦ ರೂ. ಇದ್ದುದು ಇಂದು ೪೯,೨೭೦ ರೂ.ಗೆ ಏರಿಕೆಯಾಗಿದೆ. ೨೨ ಕ್ಯಾರೆಟ್‌ನ…

ಭಾರತದಲ್ಲಿ ಇಳಿಕೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ,ಮೇ,೧೮: ಕೋವಿಡ್-೧೯ ಸೋಂಕಿಗೆ ಭಾರತ ಸಮರೋಪಾದಿಯಲ್ಲಿ ಸೌಕರ್ಯ ಮತ್ತು ಜಾಗೃತಿ ವಹಿಸುತ್ತಿರುವ ಕಾರಣ ಮಂಗಳವಾರ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಬೆಳಿಗ್ಗೆ ೯ ಗಂಟೆಗೆ ಮುಕ್ತಾಯವಾದ ೨೪ ಗಂಟೆಗಳ ಅವಧಿಯಲ್ಲಿ ಒಟ್ಟು೨,೬೩,೫೩೩ ಮಂದಿಯಲ್ಲಿ ಸೋಂಕು ದೃಡಪಟ್ಟಿದ್ದು ಇದು ಕಳೆದ ೨೮ ಗಂಟೆಯಲ್ಲಿ ಕನಿಷ್ಠ ಪ್ರಮಾಣವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಲವು ದಿನಗಳಿಂದ ೪ ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ ೩ ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, ೨ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು…

ಮಹಿಳಾ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಶಿವ್ ಸುಂದರ್ ದಾಸ್

ನವದೆಹಲಿ,ಮೇ,೧೮:ಭಾರತೀಐ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮೆನ್ ಶಿವಸುಂದರ್ ದಾಸ್ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ.ಹೀಗಾಗಿ ಇಂಗ್ಲೆಂಡ್ ಪ್ರವಾಸದ ವೇಳೆ ದಾಸ್ ಮಹಿಳಾ ಕ್ರಿಕೆಟ್‌ಗರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಶಿವ್ ಸುಂದರ್ ದಾಸ್ ಭಾರತ ತಂಡದ ಪರ ೨೦೦೦-೦೨ರ ವರೆಗೆ ೨೩ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ೨೩ ಟೆಸ್ಟ್ ಪಂದ್ಯಗಳಲ್ಲಿ ೩೪.೮೯ರ ಸರಾಸರಿಯಂತೆ ೧೩೨೬ ರನ್ ಗಳಿಸಿದ್ದಾರೆ. ಇದರಲ್ಲಿ ೨ ಶತಕಗಳು ಮತ್ತು ೯ ಅರ್ಧ ಶತಕಗಳು ಸೇರಿವೆ. ’ಇದೊಂದು ಒಳ್ಳೆಯ ಅನುಭವವಾಗಲಿದೆ. ನಾನು ಇದಕ್ಕಾಗಿ…

ಗೋರೂರು ಕೃತಿ ‘ನಮ್ಮ ಊರಿನ ರಸಿಕರು’ ತೆರೆಯ ಮೇಲೆ

‘ಗೊರೂರು’ ಎಂದೇ ಚಿರಪರಿಚಿತರಾಗಿರುವ ಗೋರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಪ್ರಸಿದ್ಧ ‘ನಮ್ಮ ಊರಿನ ರಸಿಕರು’ ಕೃತಿಗೆ ತೆರೆಗೆ ಬರುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ, ಬ್ರಿಟಿಷ್ ರಾಜ್ ಮತ್ತು ಕ್ವಿಟ್ ಇಂಡಿಯಾ ಚಳವಳಿಯ ಮಧ್ಯೆದ ಈ ಕಥೆ ತನ್ನದೇ ಆದ ಕಥಾಹಂದರವನ್ನು ಹೊಂದಿದೆ. ಈ ಕಥೆಯು ಸಂತೋಷ, ದುಃಖ, ನವಿರಾದ ಹಾಸ್ಯ, ನಾಟಕ, ಶೋಷಣೆ, ರಾಜಕೀಯ, ನಿರೀಕ್ಷೆಗಳು, ನಿರ್ಧಾರಗಳು, ಸಂಕೀರ್ಣತೆಗಳು, ಜಾತಿವಾದ, ಅಭಿಪ್ರಾಯಗಳು, ಸ್ನೇಹ, ಸಂಬಂಧಗಳು ಮತ್ತು ಇನ್ನೂ ಅನೇಕ ಮಸಾಲಾಗಳಿಂದ ಕೂಡಿದೆ. ಪ್ರೀತಿಯಿಂದ ಶಾಮಣ್ಣ ಎಂದು ಕರೆಯಲ್ಪಡುವ ಶಾಮ…

ಗ್ರಾಮೀಣ ಪ್ರದೇಶದತ್ತ ಹೆಚ್ಚು ಗಮನಹರಿಸುವಂತೆ ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ17:ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ,ಹೆಚ್ಚು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್ ಸೋಂಕು ನಿಯಂತ್ರಣ ಸಂಬಂಧಿಸಿದಂತೆ ಸಿಎಂ ಎಲ್ಲಾ ಜಿಲ್ಲಾಧಿಕಾರಿಗಳ,ಜಿಲ್ಲಾ ವರಿಷ್ಟಾಧಿಕಾರಿಗಳ ಸಭೆ ನಡೆಸಿದರು.ಈ ವೇಳೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್​ವೈ, ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸಮಸ್ಯೆ ಉಲ್ಬಣವಾಗುತ್ತಿದೆ. ಅದರ ಮೇಲೂ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದರು. ಬ್ಲ್ಯಾಕ್…

ಆಧಾರ್ ಕಾರ್ಡ್ ಇಲ್ಲದ ಹಿರಿಯ ನಾಗರೀಕರಿಗೂ ವ್ಯಾಕ್ಸಿನ್ ಸೌಲಭ್ಯ – ಜೊಲ್ಲೆ ಭರವಸೆ

çಬೆಂಗಳೂರು ಮೇ,17:ಆಧಾರ್ ಕಾರ್ಡ್ ಇಲ್ಲದೆ ಇರುವ ಹಿರಿಯ ನಾಗರಿಕರರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಆರೋಗ್ಯ ಸಚಿವರಿಗೆ ಮನವಿ ಮಾಡಲಾಗಿದ್ದು ಶ್ರೀಘ್ರವೆ ಲಸಿಕೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಸಮಗ್ರ ಮಕ್ಕಳ ರಕ್ಷಣಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರನ್ನು ಕೊರೊನಾ ಸೇನಾನಿಗಳೆಂದು ಭಾವಿಸಿ ಅವರಿಗೂ ಲಸಿಕೆಯನ್ನು ನೀಡಬೇಕು, ಹಾಗೂ ಹೈಕೋರ್ಟ್…

ರಾಜ್ಯ ಸರ್ಕಾರ ಸತ್ತೇ ಹೋಗಿದೆ-ಸಿದ್ದು ಲೇವಡಿ

ಕೋಲಾರ,ಮೇ೧೭:ತಜ್ಞರು ಕೊರೊನಾ ಎರಡನೇ ಅಲೆ ಕುರಿತು ವರದಿ ಕೊಟ್ಟರು ಎಚ್ಚೆತ್ತುಕೊಳ್ಳದೆ ಸರ್ಕಾರ ಸತ್ತು ಹೋಗಿದೆ ಇಂತಹ ಮನಗೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ ಮುನ್ಸೂಚನೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಾನಗೆಟ್ಟ ಸರ್ಕಾರವನ್ನು ನಾನು…

೨-ಡಿಜಿ ಔಷಧ ಅಧಿಕೃತ ಬಿಡುಗಡೆ

ನವದೆಹಲಿ,ಮೇ೧೭: ಕೊರೊನಾಗೆ ದೇಶಿ ಔಷಧ ೨-ಡಿಆಕ್ಸಿ-ಡಿ-ಗ್ಲುಕೋಸ್(೨-ಡಿಜಿ) ಹೆಸರಿನ ಪೌಡರ್ ಅನ್ನು ಇಂದು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಬಿಡುಗಡೆಗೊಳಿಸಿದರು.ಹೈದರಾಬಾದಿನ ಡಾ.ರೆಡ್ಡೀಸ್ ಲ್ಯಾಬ್ ಸಹಯೋಗದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಈ ಔಷಧವನ್ನು ಅಭಿವೃದ್ಧಿಪಡಿಸಿತ್ತು ಕಳೆದ ವಾರದ ಹಿಂದೆಯಷ್ಟೆ ಇದಕ್ಕೆ ಅನುಮೋದನೆ ನೀಡಲಾಗಿತ್ತು ಸೋಮವಾರ ೧೦ ಸಾವಿರಕ್ಕೂ ಹೆಚ್ಚು ಡೋಸ್ ಔಷಧವನ್ನು ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ವಿತರಣೆ ಮಾಡಲಾಗಿದೆ. ಇದು ಜೆನರಿಕ್ ಔಷಧವಾದ ಕಾರಣ ಸಾಕಷ್ಟು ಪ್ರಮಾಣದಲ್ಲಿ ಉತ್ಪಾದಿಸಬಹುದು.…

ಸಂಕಷ್ಟದ ಜನರಿಗೆ ‘ಆಸರೆ’ಯಾದ ಶಿವಣ್ಣ

ಕನ್ನಡ ಚಿತ್ರರಂಗದ ನಟರು,ನಿರ್ದೇಶಕರು ನಿರ್ಮಾಪಕರು ಹೀಗೆ ಹಲವಾರು ಮಂದಿ ಹಸಿದವರಿಗೆ ಹಾಗೂ ಚಿತ್ರರಂಗದ ಕಾರ್ಮಿಕರಿಗೆ ನೆರವಾಗುತ್ತಿದ್ದಾರೆ. ಈಗಾಗಲೇ ಹಿರಿಯನಟಿ ಲೀಲಾವತಿ,ಉಪೇಂದ್ರ ಸೇರಿದಂತೆ ಹಲವರು ಹಸಿದವರಿಗೆ ಸಹಾಯ ಹಸ್ತ ಚಾಚಿದ್ದಾರೆ . ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿಮಾನಿಗಳು ಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾಗಿದ್ದಾರೆ .ನಾಗಾವಾರದ ಸುತ್ತಮುತ್ತಲಿರುವ ಪ್ರದೇಶದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ‘ಆಸರೆ’ ಯಾಗಿದ್ದಾರೆ ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಹಾಗೂ ಶಿವಣ್ಣ ಬಾಯ್ಸ್ ಸೇರಿಕೊಂಡು ನಾಗವಾರ ಏರಿಯಾದಲ್ಲಿ ಪ್ರತಿನಿತ್ಯ ೫೦೦ ಜನರಿಗೆ ಊಟ, ತಿಂಡಿ, ಹಾಗೂ…

ರಾಜಕಾರಣ ಬಿಟ್ಟು ಜನರ ಕಷ್ಟಕ್ಕೆ ಸ್ಪಂದಿಸಿ; ನಾರಾಯಣಗೌಡ

ಮಂಡ್ಯ ,ಮೇ17 ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೋವಿಡ್ – 19 ತಡೆಗಟ್ಟಲು ಮಾಡುತ್ತಿರುವ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಶ್ಲಾಘಿಸಿದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿಯ ಲ್ಲಿ ಮೆಡಿಸಿನ್ ಕಿಟ್ ವಿತರಣೆ ಮಾಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರ ಜನಪರ ಕಾರ್ಯಗಳನ್ನು ನೆನೆದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿದಿನ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಖುದ್ದು ಅವಲೋಕಿಸುತ್ತಿದ್ದೇನೆ. ನಿಮ್ಮೊಂದಿಗೆ…

ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಮೇ,17: ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ Ôವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ವೇಳೆ ಇತ್ತೀಚೆಗೆ ಕೋವಿಡ್ ನಿಂದ ಸಾವನ್ನಪ್ಪಿದ  ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್,ಸೇರಿದಂತೆ ಸಾವನ್ನಪ್ಪಿದ  ಪತ್ರಕರ್ತರುಗಳಿಗೆ ಶ್ರದ್ದಾಂಜಲಿ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲು.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಬಂಗ್ಲೆ ಮಲ್ಲಿಕಾರ್ಜುನ,ಬಿ.ಬಿ.ಎಂ.ಪಿ.ಸದಸ್ಯ…

ಜಿಡಿಎಸ್ ನಿಂದ 2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ

ಬೆಂಗಳೂರು,ಮೇ,17: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು. ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ…

ನಾಲ್ಕೇ ಕ್ಲಾಸು ಓದಿದವನು ಉಳಿಸಿಹೋದ ಪಾಠಗಳು

ವೆಂಕಟರಮಣ ಗೌಡ್ರು ವೆಂಕಟರಮಣ ಗೌಡ್ರು ಪತ್ರಕರ್ತರು, ಸಾಹಿತಿಗಳು,ಹಲವು ಪುಸ್ತಕಗಳ ವಿಮರ್ಶೆ ಗಳನ್ನು ಕೂಡ ಮಾಡಿ ಎಲ್ಲರಲ್ಲೂ ಸೈ ಎನಿಸಿಕೊಂಡವರು ಈಗ ‘ ನಾಲ್ಕನೆ ಕ್ಲಾಸು ಓದಿದವನು’ ಕೃತಿಯ ಕುರಿತು ವಿಮರ್ಶೆ ಮಾಡಿದ್ದಾರೆ ಅಪ್ಪ ಮತ್ತು ಅಮ್ಮ ಗೆಳೆತನದ ಮೊದಲ ಭಾಸವನ್ನು ಕರುಣಿಸುವವರಾಗಿ ಮಾತ್ರವಲ್ಲ ಎದುರಾಳಿಗಳಂತೆ ಕಾಣಿಸುವುದೂ ಇದೆ ಬಹಳ ಸಲ. ಸಾಮರಸ್ಯ, ಸಂಘರ್ಷವೆರಡೂ ಜೊತೆಜೊತೆಗೇ ಬೆರೆತುಕೊಂಡಿದ್ದು ಕಾಯುವ ಈ ಆಪ್ತತೆ ಅತ್ಯಂತ ತೀವ್ರತೆಯೊಂದಿಗೆ ನಮ್ಮನ್ನು ಕಾಡುವುದು ಬಹುಶಃ ಅವರು ಇಲ್ಲವಾದ ಮೇಲೆಯೇ. ಇದರರ್ಥ, ಉಪಸ್ಥಿತಿಯಲ್ಲಿ…

1 83 84 85 86 87 89
Girl in a jacket