ಸಹಕಾರ ಸಂಘಗಳ ಸಾಲಕಂತುಗಳ ಕುರಿತು ಸರ್ಕಾರ ಹೊರಡಿಸಿರುವ ಸುತ್ತೋಲೆ ವಾಪಾಸ್ ಪಡೆಯುವಂತೆ ಸಿಎಂಗೆ ಸಿದ್ದು ಪತ್ರ
ಬೆಂಗಳೂರು,ಮೇ,31 : ಸಹಕಾರ ಸಂಘಗಳ ಮೂಲಕ ಸದಸ್ಯರು ಪಡೆದಿರುವ ಸಾಲ,ಕಂತುಗಳ ಪಾವತಿಯನ್ನು ಮುಂದೂಡಿರುವ ಸರ್ಕಾರ ಜೂನ್ ಬಳಿಕ ಪೂರ್ತಿ ಬಾಕಿ ಕಟ್ಟಬೇಕು ಎಂದು ಆದೇಶ ಹೊರಡಿಸಿದೆ. ಈ ಸುತ್ತೋಲೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಾಲ,ಕಂತುಗಳ ಪಾವತಿ ಅವಧಿಯನ್ನು ಮುಂದೂಡಿ ಬಳಿಕ ಪೂರ್ತಿ ಕಟ್ಟಬೇಕು ಎಂಬ ಆದೇಶ ಜನರಿಗೆ ಹಾಕಿರುವ ಟೋಪಿ ಎಂದು ಅವರು ಕಿಡಿ ಕಾರಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೊರೊನಾ…