ಕದ್ದುಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ-ಎಚ್‌ಡಿ ಕೆ ವ್ಯಂಗ್ಯ
ಬೆಂಗಳೂರು, ಮೇ ೨೮: ಜಿಂದಾಲ್‌ಗೆ ಕೊಟ್ಟಿದ್ದ ಭೂಮಿಯನ್ನು ವಾಪಾಸ್ ಪಡೆದ ರಾಜ್ಯ ಸರ್ಕಾರದ ಧೋರಣೆಯನ್ನು ವ್ಯಂಗ್ಯಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ ಪಾಪದ ಫಲವನ್ನು ಬಿಜೆಪಿ ಅನುಭವಿಸುತ್ತಿದೆ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು.ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್ ಕಂಪನಿಗೆ ೩೬೬೭ ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು…