ಕೋವಿಡ್ ಸೌಲಭ್ಯಗಳ ಕುರಿತು ಶ್ವೇತಪತ್ರಹೊರಡಿಸಲು ಸಿದ್ದರಾಮಯ್ಯ ಆಗ್ರಹ
ಬೆಂಗಳೂರು,ಮೇ,೨೪ : ರಾಜ್ಯದಲ್ಲಿ ಲಭ್ಯ ಇರುವ ಕೋವಿಡ್ ಲಸಿಕೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಇತರ ಸೌಲಭ್ಯಗಳ ಬಗ್ಗೆ ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಶ್ವೇತಪತ್ರ ಹೊರಡಿಸುವಂತೆ ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು. ಶ್ವೇತಪತ್ರ ಎಂದರೆ ಸುಳ್ಳು ಹೇಳುವುದಲ್ಲ. ಸತ್ಯಾಂಶವನ್ನು ಜನರ ಮುಂದೆ ಇಡುವಂಥದ್ದು ಎಂದರು. ಆಕ್ಸಿಜನ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನೂ ಸರ್ಕಾರ ಈ…