Girl in a jacket

Author kendhooli_editor

ಆಗಸ್ಟ್ 22 ಕ್ಕೆ  “S\O ಮುತ್ತಣ್ಣ” ಚಿತ್ರ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು…

ಬಾಬಾನಗರದ ಬಳಿ ಹೊಸ ಕೆರೆ ನಿರ್ಮಾಣದ ಉದ್ದೇಶ: 550 ಕೋಟಿ ರೂ. ಅನುದಾನಕ್ಕೆ ಮನವಿ

ಬೆಂಗಳೂರು,ಜು,03- ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮತ್ತು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ತುಬುಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿಯಲ್ಲಿ ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಜಲಸಂಪನ್ಮೂಲ ಸಚಿವರೂ ಆಗಿರುವ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳನ್ನು ಇಲ್ಲಿನ ಸದಾಶಿವನಗರದ ನಿವಾಸದಲ್ಲಿ ಗುರುವಾರ…

ರಾಜ್ಯಾದ್ಯಂತ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಚಾಲನೆ

ಬೆಂಗಳೂರು, ಜು,03-ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ…

ಉಡುಪಿ ಮೂಲಕ ವಿವಿಧ ದೇಶಗಳಿಗೆ ಡ್ರಗ್ಸ್ ಮಾರುತ್ತಿದ್ದ ಜಾಲ ಪತ್ತೆ,10 ಮಂದಿ ಬಂಧನ

ನವದೆಹಲಿ, ಜು,03-ಕರ್ನಾಟಕದ ಉಡುಪಿ ಮೂಲಕ ಹತ್ತಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಜಾಲವೊಂದನ್ನು ದೆಹಲಿ ಪೊಲೀಸರು ಬೇದಿಸಿದ್ದು ಈ ಸಂಬಂಧ 10 ಮಂದಿಯನ್ನು ಬಂದಿಸಿದ್ದಾರೆ. ಉಡುಪಿ ಸೇರಿದಂತೆ ದೇಶದ ಹಲವು ನಗರಗಳ ಮೂಲಕ 10 ಕ್ಕೂ ಹೆಚ್ಚು ದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಬೃಹತ್ ಮಾದಕ ವಸ್ತು ಜಾಲವನ್ನು ಮಾದಕ ವಸ್ತು ನಿಗ್ರಹ ದಳ ಬಯಲಿಗೆಳೆದಿದೆ. ಈ ಸಂಬಂಧ 10 ಮಂದಿಯನ್ನು ಬಂಧಿಸಿದ್ದು, ಬೃಹತ್ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಉಡುಪಿಯಲ್ಲೇ ಆರೋಪಿಗಳು ಕಾಲ್ ಸೆಂಟರ್…

ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಜು,02- ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನೂ ಉತ್ತರ ಜಿಲ್ಲೆ;ಸಚಿವಸಂಪುಟದ ನಿರ್ಣಯ

ಬೆಂಗಳೂರು, ಜು,02-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಈ ಕುರಿತು ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರ ನೀಡಿದರು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ…

ಕರ್ನಾಟಕದಾದ್ಯಂತ ಡಿಜಿಟಲ್ ಬೆಳವಣಿಗೆಯನ್ನು ವಿಕೇಂದ್ರೀಕರಿಸುವ ಹೊಣೆ ಹೊತ್ತ ಎಫ್. ಕೆ. ಸಿ. ಸಿ. ಐ: ಎಂ ಜಿ ಬಾಲಕೃಷ್ಣ,

ಬೆಂಗಳೂರು, ಜು,02- ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯ ನಿಟ್ಟಿನಲ್ಲಿ, ಕರ್ನಾಟಕ ವಾಣಿಜ್ಯ ಕೈಗಾರಿಕಾ ಮಹಾ ಸಂಸ್ಥೆ ಬೆಂಗಳೂರಿನ ಕ್ಯಾಬಿನೆಟ್ ಹಾಲ್ನಲ್ಲಿ “ಬೆಂಗಳೂರಿನ ಹೊರಗೆ -ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳ ಡಿಜಿಟಲ್ ಸಾಮರ್ಥ್ಯವನ್ನು ಅನ್ಲಾಕ್ ಮಾಡುವುದು” ಎಂಬ ಶೀರ್ಷಿಕೆಯ ಪವರ್-ಪ್ಯಾಕ್ಡ್ ಅಧಿವೇಶನವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ಕರ್ನಾಟಕದ ಡಿಜಿಟಲ್ ಆರ್ಥಿಕತೆಯನ್ನು ರಾಜಧಾನಿಯನ್ನು ಮೀರಿ ವಿಸ್ತರಿಸುವ ಮತ್ತು ಉದಯೋನ್ಮುಖ ನಗರಗಳಲ್ಲಿ ಬೆಳವಣಿಗೆಯನ್ನು ಉತ್ತೇಜಿಸುವ ತುರ್ತು ಅಗತ್ಯವನ್ನು ಎತ್ತಿ ತೋರಿಸಿತು. ಮುಖ್ಯ ಭಾಷಣ ಮಾಡಿದ ಎಫ್. ಕೆ. ಸಿ. ಸಿ.…

ರವಿಚಂದ್ರನ್ ಬಹುನಿರೀಕ್ಷಿತ “ತಪಸ್ವಿ” ನಾಳೆ ತೆರೆಮೇಲೆ

ಬೆಂಗಳೂರು ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ , ಸ್ಪೆನ್ಸರ್ ಮ್ಯಾಥ್ಯೂ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷಪಾತ್ರದಲ್ಲಿ ನಟಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ತಪಸ್ಸಿ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. “ತಪಸ್ಸಿ” ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅಮೆಯ್ರಾ ಗೋಸ್ವಾಮಿ ನಾಯಕಿಯಾಗಿ ನಟಿಸಿದ್ದಾರೆ. ಭಾಸ್ಕರ್, ಅನುಶಾ ಕಿಣಿ, ರಥರ್ವ, ಸಚ್ಚಿನ್, ಗುಬ್ಬಿ ನಟರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಅವರೆ ಛಾಯಾಗ್ರಹಣ ಹಾಗೂ ಕಲಾ ನಿರ್ದೇಶನವನ್ನೂ ಮಾಡಿರುವ ಬಹು ನಿರೀಕ್ಷಿತ…

ನೈಜ ಘಟನೆ ಮತ್ತು ವ್ಯಕ್ತಿತ್ವಗಳ ಕಾಲ್ಪನಿಕ ಗುಚ್ಛ; “ಜಂಗಲ್‌ ಮಂಗಲ್‌

ಸ್ಯಾಂಡಲ್‌ವುಡ್‌ನಲ್ಲಿ ಭಿನ್ನ ವಿಭಿನ್ನ ಕಂಟೆಂಟಿಗೆ ಬೆಂಬಲ ಸಿಕ್ಕೇ ಸಿಗುತ್ತೆ. ಹಾಗೆ ಖ್ಯಾತನಾಮ ನಿರ್ದೇಶಕರಿಂದ ಮೆಚ್ಚುಗೆ ಪಡೆದ ಚಿತ್ರವೇ “ಜಂಗಲ್‌ ಮಂಗಲ್‌”. ಇನ್ನೇನು ಇದೇ ಜುಲೈ 4ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಗೆ ಬರಲಿದೆ. ಲೈಟ್‌ ಹಾರ್ಟೆಡ್‌ ಥ್ರಿಲ್ಲರ್‌ ಶೈಲಿಯಲ್ಲಿ ಈ “ಜಂಗಲ್‌ ಮಂಗಲ್‌” ಸಿನಿಮಾವನ್ನು ನಿರ್ದೇಶಕ ರಕ್ಷಿತ್‌ ಕುಮಾರ್‌ ಕಟ್ಟಿಕೊಟ್ಟಿದ್ದಾರೆ. ಕಳೆದ ಎಂಟತ್ತು ವರ್ಷಗಳಿಂದ ಸಿನಿಮಾ, ಸೀರಿಯಲ್‌ ಹೀಗೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿ ಇದೀಗ ಸ್ವತಂತ್ರ ನಿರ್ದೇಶಕರಾಗಿ ಆಗಮಿಸುತ್ತಿದ್ದಾರೆ. ಹಾಗಾದರೆ ಏನಿದು ʻಜಂಗಲ್‌ ಮಂಗಲ್‌ʼ? ಯುವ ಜೋಡಿಯ…

ಮಹೇಶ್ ಜೋಶಿ ವಿರುದ್ದ ಆರ್ಥಿಕ ಅಶಿಸ್ತು ಕುರಿತು ತನಿಖೆ ನಡೆಸಲು ಆಗ್ರಹ

ಬೆಂಗಳೂರು, ಜು,02-ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ ಪತ್ರ ಲೋಪ ಆಡಿಟ್ ಆಕ್ಷೇಪಣೆ ವಿಚಸರಗಳ ಬಗ್ಗೆ ತನಿಖೆ ನಡೆಸುವಂತೆ ಸಾಹಿತಿಗಳ ನಿಯೋಗಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಿದರು. ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಾಹಿತಿಗಳ ನಿಯೋಗ ಸಚಿವ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ಭೇಟಿ ಮಾಡಿ  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ದ ಆರ್ಥಿಕ ಅಶಿಸ್ತು ಹಾಗೂ ಲೆಕ್ಕ…

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು,02-ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ…

ಕಾಂಗ್ರೆಸ್ ಅಧಿಕಾರ-ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಬೆಂಗಳೂರು,ಜು,01-ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ,…

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಸಿಎಂ

ಬೆಂಗಳೂರು ಜು1-ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ. ಸುಳ್ಳು…

ತೆಲಂಗಾಣ; ರಸಾಯಿನಕ ಕಾರ್ಖಾನೆಯಲ್ಲಿ ಸ್ಪೋಟ ಸತ್ತವರ ಸಂಖ್ಯೆ 34 ಕ್ಕೆ ಏರಿಕೆ

ಸಂಗಾರೆಡ್ಡಿ (ತೆಲಂಗಾಣ),ಜು,01- ಜಿಲ್ಲೆಯ ಪಾರ್ಮಾಸ್ಯೂಟಿಕಲ್ ಘಟಕವೊಂದರಲ್ಲಿ ಸೋಮವಾರ ಬೆಳಗ್ಗೆ ರಿಯಾಕ್ಟರ್ ಸ್ಫೋಟ ಸಂಭವಿಸಿ 34 ಮಂದಿ ಸಾವನ್ನಪ್ಪಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತೆಲಂಗಾಣ ಆರೋಗ್ಯ ಸಚಿವ ದಾಮೋದರ ರಾಜಾ ನರಸಿಂಹ ತಿಳಿಸಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆರ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾರ್ಮಿಕ ಸಚಿವ ಜಿ. ವಿವೇಕ್ ವೆಂಕಟಸ್ವಾಮಿ, ”ಇಂದು ಬೆಳಗ್ಗೆ 8 ಮಂದಿ ಸಾವನ್ನಪ್ಪಿದ್ದರು. ಮತ್ತೆ ನಾಲ್ಕು ಮಂದಿಯ ಮೃತದೇಹ ಪತ್ತೆಯಾಗಿದೆ” ಎಂದು ಹೇಳಿದ್ದಾರೆ. ಪಾಶಮಿಲಾರಾಂ ಕೈಗಾರಿಕಾ ಎಸ್ಟೇಟ್‌ನಲ್ಲಿರುವ…

ನಮ್ಮ ಕೊನೆ ಉಸಿರಿರುವರೆಗೂ ಮಂಡ್ಯ ಜನರ ಸೇವೆ ಮಾಡುತ್ತೇವೆ- ನಿಖಿಲ್ ಕುಮಾರಸ್ವಾಮಿ

ಮದ್ದೂರು,ಜೂ,30- ಪೆನ್ನು ಪೇಪರ್ ನಾಯಕರೇ ನಿಮ್ದು ಏನೇ ರಾಜಕಾರಣ ಇದ್ದರು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ. ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ…

ಹಸಿರು ಹೊದಿಕೆ ಸಂವರ್ಧನೆಗೆ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಣೆ: ಈಶ್ವರ ಖಂಡ್ರೆ

ಬೆಂಗಳೂರು, ಜೂ.30- ಉದ್ಯಾನನಗರಿ, ನಿವೃತ್ತರ ಸ್ವರ್ಗ ಬೆಂಗಳೂರು ನಗರ ಕಾಂಕ್ರೀಟ್ ಕಾಡಾಗುತ್ತಿದ್ದು, ಹಸಿರು ಹೊದಿಕೆ ಸಂವರ್ಧನೆಗಾಗಿ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಿಸಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡುಗೋಡಿ ಪ್ಲಾಂಟೇಷನ್ ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಇಂದು ಗಾಂಧೀ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯಭೂಮಿಯನ್ನು ಹಂಚಿಕೆ, ಮಂಜೂರು…

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ

ಕೆಆರ್ ಎಸ್ .(ಮಂಡ್ಯ) 30-ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸೋತ ಗಿರಾಕಿಗಳು ಸರ್ಕಾರ…

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ*: *ಸಿಎಂ ಸಿದ್ದರಾಮಯ್ಯ

ಮೈಸೂರು, ಜೂ, 30-:ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು…

ಬಿಬಿಎಂಪಿ ಕಸದ ಲಾರಿಯಲ್ಲಿ ದೊರೆತಿದ್ದ ಶವ ಹೆಸರು ಪತ್ತೆ,ಗಂಡನೆ ಕೊಲೆ ಶಂಕೆ!

ಬೆಂಗಳೂರು,ಜೂ. ೨೯-ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದ ಬಿಬಿಎಂಪಿ ಕಸದ ಲಾರಿಯಲ್ಲಿ ಬಿಸಾಡಿದ್ದ ಮಹಿಳೆಶವ ಈಗ ಗುರುತು ಸಿಕ್ಕಿದ್ದು ಆಕೆಯ ಹೆಸರು ಪುಷ್ಪ ಎಂದು ಗೊತ್ತಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಕಳೆದ ಮೂರು ವರ್ಷಗಳ ಹಿಂದೆ ಪ್ರೀತಿಸಿ ಈಕೆಯನ್ನು ಮದುವೆಯಾಗಿದ್ದು ಪತಿಯೇ ಈಕೆಯನ್ನು ಕೊಲೆಮಾಡಿ ಇಲ್ಲಿ ಬಿಸಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಗರದಲ್ಲಿ ಮತ್ತೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಅನಾಮಿಕ ಮಹಿಳೆಯ ಶವ ಕೇಸ್‌ಗೆ ಟ್ವಿಸ್ಟ್‌ಗೆ ಸಿಕ್ಕಿದೆ. ಕೊಲೆಯಾದ ಮಹಿಳೆ…

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಕ್ ಆಯ್ಕೆ

ಬಳ್ಳಾರಿ,ಜೂ,29- ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ. ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ನಡೆದಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಂಡಿದ್ದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಸಾಪದ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಬಳ್ಳಾರಿಯಲ್ಲಿ ಜರುಗಲಿರುವ ೮೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ…

1 7 8 9 10 11 126
Girl in a jacket