Girl in a jacket

Author kendhooli_editor

ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಹಂತಕನ ಸೆರೆ; 3 ಆರೋಪಿಗಳಿಗೆ ಶೋಧ

ಬೆಂಗಳೂರು, ಜೂ.29-ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸೂಚನೆಯ ಮೇರೆಗೆ ಬೆಂಗಳೂರು ನಗರ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಬನ್ನೇರುಘಟ್ಟ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿ, ಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 2ಕಾರು, ಬೈಕ್, 2 ಬಂದೂಕುಗಳನ್ನು ಜಪ್ತಿ ಮಾಡಿದ್ದಾರೆ. ವನ್ಯಜೀವಿ ಹಂತಕರ ತಂಡವೊಂದು ಕೋಲಾರ, ಬನ್ನೇರುಘಟ್ಟ ಅರಣ್ಯದಲ್ಲಿ ಜಿಂಕೆಗಳನ್ನು ಕೊಂದು ಮಾಂಸ ಮಾರಾಟ ಮಾಡುತ್ತಿದೆ ಎಂದು ಸಚಿವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚನೆ ನೀಡಿದ್ದರು. ಸಚಿವರ…

ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-ನಿಮ್ಮ ಬದುಕು, ಆಸ್ತಿ, ಖಾತೆಗಳ ರಕ್ಷಣೆಯೇ ನಮ್ಮ ಗ್ಯಾರಂಟಿ. ನಿಮ್ಮ ಆಸ್ತಿ ರಕ್ಷಣೆಗೆ ಈ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಬ್ಯಾಟರಾಯನಪುರದ ಸಹಕಾರ ನಗರ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಇ ಖಾತಾ ಮೇಳ ಹಾಗೂ ಮನೆ ಮನೆಗೆ ಇ-ಖಾತಾ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಚಾಲನೆ ನೀಡಿ ಮಾತನಾಡಿದರು. “ಕರ್ನಾಟಕದ ಗ್ಯಾರಂಟಿ ಸರ್ಕಾರವು ಇಂದು…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಗೆ ಜವಾಬ್ದಾರಿ ಇಲ್ವಾ.? ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ,ಜೂ,29- ಮೇಕೆದಾಟು ಯೋಜನೆ ವಿಚಾರದಲ್ಲಿ ನಿಮಗೆ ಜವಾಬ್ದಾರಿ ಇಲ್ವ, 136 ಸೀಟು ಕೊಟ್ಟು ಜನರು ಆಶೀರ್ವಾದ ಮಾಡಿಲ್ವಾ? ಪೆನ್ನು ಪೇಪರ್ ಕೊಟ್ಟಿದ್ದು ನಿಮಗೆ ಯಾಕೆ? ಲೂಟಿ, ಭ್ರಷ್ಟಚಾರ, ಕೊಳ್ಳೆ ಹೊಡೆಯೋಕೆ ಪೆನ್ನು ಪೇಪರ್ ಕೊಟ್ರಾ ನಿಮಗೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು. ಮಂಡ್ಯದ ಮದ್ದೂರಲ್ಲಿ ಮಾತನಾಡಿದ ಅವರು, ನಮ್ಮ ನೀರು ನಮ್ಮ ಹಕ್ಕು ಅಂತಾ ಹೊರಟಿದ್ರು. ಪೆನ್ನು ಪೇಪರ್ ಕೇಳಿದ್ರು, ಅಂತ ಜನ ಕೊಟ್ಟಿದ್ದಾರೆ. ಹೋಗಿ ತಮಿಳುನಾಡು ಸಿಎಂ ಜತೆ ಮಾತನಾಡಲಿ ನಾವು ನಿಮ್ಮ ಜತೆ ಬರುತ್ತೇವೆ…

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-“ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ”…

ಓಂಪ್ರಕಾಶ್ ರಾವ್ ನಿರ್ದೇಶನದ”ಫೀನಿಕ್ಸ್”ಚಿತ್ರೀಕರಣ ಪೂರ್ಣ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರ “ಫೀನಿಕ್ಸ್”.ಆರ್ ವಾಸುದೇವ ರೆಡ್ಡಿ ಅರ್ಪಿಸುವ,ಶ್ರೀಗುರು ಚಿತ್ರಾಲಯ ಲಾಂಛನದಲ್ಲಿ ತ್ರಿಶಾ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮಹಿಳಾ ಪ್ರಧಾನ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಾಗೂ ಉತ್ತರ ಕರ್ನಾಟಕದ ಹಲವು ಕಡೆ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ಮುಗಿಸಿರುವ “ಫೀನಿಕ್ಸ್” ಈಗ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದೆ. ಬಹಳ ದಿನಗಳ ನಂತರ…

ಆಪರೇಶನ್ ಸಿಂಧೂರ; ಭಾರತದ ರಕ್ಷಣಾ ಶಕ್ತಿ ಏನೆಂದು ಜಗತ್ತಿಗೆ ಗೊತ್ತಾಗಿದೆ- ಎಚ್.ಡಿ.ಕೆ

ಬೆಂಗಳೂರು,ಜೂ,28-: ದೇಶೀಯ ವಿಜ್ಞಾನಿಗಳು, ತಂತ್ರಜ್ಞರ ಸಾಧನೆ, ಹೆಗ್ಗಳಿಕೆ ಏನು ಎಂಬುದು ಆಪರೇಶನ್ ಸಿಂಧೂರದ ಮೂಲಕ ಜಗತ್ತಿಗೆ ಗೊತ್ತಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ಕೇಂದ್ರೀಯ ಉತ್ಪಾದನಾ ತಂತ್ರಜ್ಞಾನ ಸಂಸ್ಥೆಯ 64ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಅನೇಕ ವಿಷಯಗಳಲ್ಲಿ ನಾವು ವಿದೇಶಗಳನ್ನು ಅವಲಂಬಿಸಬೇಕಾಗಿತ್ತು. ಆ ನಂತರ ಅಂತಹ ಪರಿಸ್ಥಿತಿ…

ನಮ್ಮ ಕೃಷಿ ನೀತಿಯಲ್ಲಿ ಲೋಪದೋಷಗಳಿವೆ:ಬಸವರಾಜ ಬೊಮ್ಮಾಯಿ

ಹಾವೇರಿ:(ರಾಣೆಬೆನ್ನೂರು),ಜೂ,28-ನಮ್ಮ ದೇಶದ ಎಲ್ಲ ಜನರಿಗೂ ಆಹಾರ ದೊರೆಯುತ್ತಿದೆ. ಆದರೆ, ಆಹಾರ ಬೆಳೆಯುವ ರೈತರ ಪರಿಸ್ಥಿತಿ ಸೋಚನೀಯವಾಗಿದೆ. ಇದು ವಿಪರ್ಯಾಸ. ನಮ್ಮ ಕೃಷಿ ನೀತಿಯಲ್ಲಿ ಎಲ್ಲೋ ಲೋಪದೋಷಗಳಿವೆ. ರೈತರ ಪರವಾಗಿರುವ ಮಾರುಕಟ್ಟೆ ಸೃಷ್ಟಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹನುಮನಮಟ್ಟಿಯಲ್ಲಿರುವ ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ಮಹಾವಿದ್ಯಾಲಯ ಐ.ಸಿ.ಎ ಆರ್ ಕೃಷಿ ವಿಜ್ಞಾನ ಕೇಂದ್ರಕ್ಕೆ, ಭೇಟಿ ನೀಡಿ, ಮಹಾವಿದ್ಯಾಲಯದ ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.…

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂ, 28- ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ…

ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು ,ಜೂ,28-ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀfಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ…

ಫವರ್ ಶೆರಿಂಗ್ ಚರ್ಚೆ-ಡಿಕೆಶಿ ಪರಮೇಶ್ ಬೇಟಿ

ಬೆಂಗಳೂರು, ಜೂ, ೨೮- ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಫವರ್ ಶೇರಿಂಗ್ ವಚಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದು ಈ ಇಬ್ಬರ ಭೇಟಿ ವೇಳೆ ಫವರ್ ಶೇರಿಂಗ್ ಕುರಿತಂತೆ ಗಂಭೀರ ಚರ್ಚೆಗಳು ನಡೆದಿವೆ ಎನ್ನುವ ಮಾತುಗಳಿವೆ, ಮುಂದಿನ ನವೆಂಬರ್‌ನಲ್ಲಿ ನಡೆಯಬಹುದಾದ ರಾಜಕೀಯ ಬೆಳವಣಿಗೆ ಕುರಿತು ಈ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ ಈ ಭೇಟಿಯ ಹಿನ್ನೆಲಯಲ್ಲಿ ಮಾಧ್ಯಮಗಳ ಜೊತೆ…

ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದಾಬಸ್ ಪೇಟೆ, ಜೂ. 28-“ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು ವಸ್ತು ಪ್ರದರ್ಶನಾ ಕೇಂದ್ರ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಾಗೂ ನಂತರ ಮಾಧ್ಯಮಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕೆಐಎಡಿಬಿ ವತಿಯಿಂದ ಶೇ.20 ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ ನೀಡಬೇಕು…

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಜೂ 29-ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು.ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು. ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ…

ಪುರಿ ಜಗನ್ನಾಥ ಯಾತ್ರೆ ವೇಳೆ ಬಿಸಿಲಿನ ತಾಪ ಮತ್ತು ಜನದಟ್ಟಣೆಗೆ ನೂರಾರು ಮಂದಿಅಸ್ವಸ್ಥ

ಒಡಿಶಾ,ಜೂ,೨೮-ದೇಶದ ಪ್ರತಿಷ್ಠಿತ ಪುರಿ ರಥಯಾತ್ರೆಯಲ್ಲಿ ಬಿಸಿಲಿನ ತಾಪ ಜನದಟ್ಟಣೆಯಿಂದಗಿ ನೂರಾರು ಮಂದಿ ಅಸ್ವಸ್ಥರಾಗಿದ್ದು ಅನೇಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳುತಿಳಿಸಿವೆ ಪುರಿ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ. ಕಿಶೋರ್ ಸತಪತಿ ಅವರ ಪ್ರಕಾರ, ಜನದಟ್ಟಣೆಯಿಂದಾಗಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳು, ವಾಂತಿ ಮತ್ತು ಮೂರ್ಛೆ ಹೋಗಿರುವುದು ವರದಿಯಾಗಿದೆ. ಹೆಚ್ಚಿನವರನ್ನು ಹೊರರೋಗಿ ಚಿಕಿತ್ಸಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಒಡಿಶಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ…

ಹುಲಿಸಾವು ಪ್ರಕರಣ- ನಾಲ್ವರು ದನಗಾಹಿಗಳ ವಶಕ್ಕೆ ಪಡೆದ ಅರಣ್ಯ ಸಿಬ್ಬಂದಿ

ಚಾಮರಾಜನಗರ, ಜೂ,27-ಮಲೇಮಹಾದೇಶ್ವರ ಬೆಟ್ಟದ ಅರಣ್ಯಪ್ರದೇಶದಲ್ಲಿ ಐದು ಹುಲಿಗಳ ಸಾವಿಗೆ ಸಂಬಂಧಿಸಿದಂತೆ ನಾಲ್ವರು ದನಗಾಹಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹನೂರು ತಾಲೂಕಿನ ಗಾಜನೂರಿನ ನಾಲ್ವರನ್ನ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹುಲಿಗಳ ಕಳೇಬರ ಸಿಕ್ಕ ಸ್ಥಳದಲ್ಲಿ ಹಸುವಿನ ದೇಹ ಪತ್ತೆಯಾಗಿದ್ದು, ಬೇಟೆಯಾಡಿದ್ದ ಹಸುವಿಗೆ ಕೀಟನಾಶಕ ಸಿಂಪಡಣೆ ಮಾಡಿರುವ ಶಂಕೆ ಹಿನ್ನೆಲೆ ದನಗಾಹಿಗಳನ್ನ ವಶಕ್ಕೆ ಪಡೆಯಲಾಗಿದೆ. ಮೃತಪಟ್ಟಿರುವ ಹಸು ಯಾರದ್ದು ಎಂಬುದನ್ನು ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚುತ್ತಿದ್ದು, ಹಸು ಕೊಂದ ಕೋಪಕ್ಕೆ ದನಗಾಹಿಗಳು ವಿಷ…

ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ: ಡಿ.ಕೆ. ಶಿ

ಬೆಂಗಳೂರು, ಜೂ.27-“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.…

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ-ಸಿಎಂ ಸಿದ್ದರಾಮಯ್ಯ

ಬೆಂಗಳೂರು ,ಜೂ,27-ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ…

ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ- ಅದ್ದೂರಿ ಸ್ಮರಣೆ ಸಂಪನ್ಮ

ಬೆಂಗಳೂರು,ಜೂ,27- ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ,…

ಅತಿ ಶೀಘ್ರವೇ ಕರ್ನಾಟಕ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಘೋಷಣೆ: ವಿಜಯೇಂದ್ರ

26- ಬೆಂಗಳೂರು,ಜೂ,26-ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ; ನಿಮಗೂ…

4 ಹುಲಿಗಳ ಅಸಹಜ ಸಾವು ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು, ಜೂ.26- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ…

ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಬಂಧನ ಅಮಾನವೀಯ ಮುಖ್ಯಮಂತ್ರಿ ಚಂದ್ರು ಖಂಡನೆ

ಬೆಂಗಳೂರು, ಜೂ, 26-ನಿನ್ನೆ ದೇವನಹಳ್ಳಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಗಳನ್ನು ಏಕಾಏಕಿ ಬಂಧಿಸಿರುವ ಪೊಲೀಸರ ಕ್ರಮ ನಿಜಕ್ಕೂ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ನಡೆ. ಇದನ್ನು ನಾಡಿನ ಎಲ್ಲ ಜನತೆ ಖಂಡಿಸಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿ ನೆರೆದಿದ್ದ ಸಾವಿರಾರು ರೈತರುಗಳು ತಮ್ಮ ವಂಶಾನುಗತ ಕೃಷಿ ಭೂಮಿಯ ಹಕ್ಕಿಗಾಗಿ ಕಳೆದ ಸಾವಿರ ದಿವಸಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮಹಿಳೆಯರು ವೃದ್ಧರು ಎಂಬುದನ್ನು ಸಹ…

1 8 9 10 11 12 126
Girl in a jacket