Girl in a jacket

Author kendhooli_editor

ಕೆರೆ ಒತ್ತುವರಿ ತೆರವುಗೊಳಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆದ ಸಿಎಂ

ಬೆಂಗಳೂರು,ಮೇ,30-ಒಂದೂ ಕೆರೆ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ, ಸಿಇಓ ಗಳ ವಿರುದ್ಧ ಸೂಕ್ತ ಕ್ರಮಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಇಂದು ವಿಧಾನಸೌಧದಲ್ಲಿ ನಡೆದ ಡಿಸಿ ಮತ್ತು ಸಿಇಓ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆ ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಮುಖ್ಯಮಂತ್ರಿಗಳು, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ…

ಸಿಎಂ ಸಮಯಕ್ಕೆ ಸರಿಯಾಗಿ ಎಂಟ್ರಿಯಿಂದ ಕಕ್ಕಾಬಿಕ್ಕಿಯಾದ ಅಧಿಕಾರಿಗಳು

ಬೆಂಗಳೂರು, ಮೇ30-ರಾಜ್ಯದ ಡಿಸಿ ಮತ್ತು ಸಿಇಓಗಳ ಸಭೆಯ ನಂತರ ಊಟದ ಬಿಡುವಿನ ನಂತರ ಮುಖ್ಯಮಂತ್ರಿಗಳು ಅರ್ಧಟೆಗೆ ಸರಿಯಾಗಿ ಎಂಟ್ರಿ ಕೊಟ್ಟಾಗ ಅಧಿಕಾರಿಗಳು ಕಕ್ಕಾಬಿಕ್ಕಿಯಾದ ಪ್ರಸಂಗ ವಿಧಾನಸೌಧದಲ್ಲಿ ನಡೆಯಿತು. ಅಧಿಕಾರಿ ವರ್ಗಕ್ಕೆ ಮತ್ತು ಸಚಿವರುಗಳಿಗೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಊಟಕ್ಕೆಂದು ಮನೆಗೆ ತೆರಳಿದರು. ಸಿಎಂ ಮನೆಗೆ ಹೋಗಿದ್ದರಿಂದ ಅವರು ಊಟ ಮುಗಿಸಿ ಬರುವುದು ಲೇಟಾಗಬಹುದು ಎಂದು ಅಧಿಕಾರಿಗಳು ರಿಲಾಕ್ಸ್ ಮೂಡ್ ನಲ್ಲಿ ಊಟ ಮಾಡುತ್ತಿದ್ದರು. ಆದರೆ, ಮುಖ್ಯಮಂತ್ರಿಗಳು ಊಟ ಮುಗಿಸಿ ಸರಿಯಾಗಿ 30…

ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು, ಮೇ 30-ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಶುಕ್ರವಾರ ನಡೆದ ಇಂಡಿಯಾ ಎಂಎಸ್ಎಂಇ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನಿಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವಿದೆ. ನಿಮಗೆ ಅಗತ್ಯವಾಗಿರುವ ವಿದ್ಯುತ್ ಹಾಗೂ ನೀರಿನ…

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 30-ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ನಷ್ಟವಾಗುತ್ತಿರುವುದು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧ ಆವರಣ ಹಾಗೂ ಅರಮನೆ ಮೈದಾನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.“ನಾವು ಎಲ್ಲಾ ಸಮಾಜ ರಕ್ಷಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ವತಿಯಿಂದ ಒಂದು ತಂಡ ಕಳುಹಿಸಿ ವರದಿ ನೀಡಲು ಹೇಳಿದ್ದೇವೆ. ಅಧಿಕಾರಿಗಳು ನೀಡುವ ವರದಿ ಬೇರೆ, ಸಾರ್ವಜನಿಕರ ಜತೆ ಚರ್ಚೆ ಮಾಡಿ…

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು ಮೇ 30-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು…

ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್ಎಂಇ ಬೆನ್ನೆಲುಬು: ಎಂ ಬಿ ಪಾಟೀಲ

ಬೆಂಗಳೂರು,ಮೇ,30-ರಾಜ್ಯ ಸರಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು `ಎಸ್ಎಂಇ ಕನೆಕ್ಟ್’ ಮತ್ತು `ವೆಂಚುರೈಸ್’ ತರಹದ ರಚನಾತ್ಮಕ ಉಪಕ್ರಮಗಳನ್ನು ಕೈಗೊಂಡಿದೆ. ತಯಾರಿಕೆ ವಲಯದಲ್ಲಿ ಶೇ.12ರಷ್ಟು ಬೆಳವಣಿಗೆ ಸಾಧಿಸುವ ಮೂಲಕ 2029ರ ಹೊತ್ತಿಗೆ 20 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು. ಜತೆಗೆ 2 ಮತ್ತು 3 ನೇ ಹಂತದ ನಗರಗಳಲ್ಲಿ ಉದ್ಯಮಗಳು ನೆಲೆಯೂರುವಂತೆ ಮಾಡಲು ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಕಾಸಿಯಾ, ಎಫ್.ಕೆ.ಸಿ.ಸಿ.ಐ…

ಖ್ಯಾತ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ

ಬೆಂಗಳೂರು, ಮೇ,30-ಕನ್ನಡದ ಖ್ಯಾತ ಕವಿಎಚ್.ಎಸ್,ವೆಂಕಟೇಶ್ ಮೂರ್ತಿ ಅವರು ಇಂದು ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾದರು. ಅವರಿಗೆ80 ವರ್ಷ ವಯಸ್ಸಾಗಿತ್ತು,ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯಿಸಿರೆಳದರು. ಮೃತರಿಗೆ ನಾಲ್ವರು ಪುತ್ರರಿದ್ದಾರೆ. ಎಚ್ ಎಸ್ ವೆಂಕಟೇಶಮೂರ್ತಿ ಅವರ ಅಂತಿಮ ದರ್ಶನವನ್ನು ಇಂದು ಮಧ್ಯಾಹ್ನ 11-2 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರ ಹಿಂಭಾಗದ ಸಂಸ ಬಯಲು ರಂಗಮಂದಿರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಎಚ್.ಎಸ್. ವೆಂಕಟೇಶಮೂರ್ತಿ (ಎಚ್‌ಎಸ್‌ವಿ ) ಕನ್ನಡ ಸಾಹಿತ್ಯದ ಪ್ರಮುಖ ಕವಿ,…

ರಾಜ್ಯದಲ್ಲಿ ಭೀಕರ ಮಳೆ ನಿರೀಕ್ಷೆ,ರೆಡ್ ಅಲಾರ್ಟ್ ಘೋಷಣೆ

ಬೆಂಗಳೂರು, ಮೇ,29-ಬಂಗಾಳ ಉಪಸಾಗರದ ವಾಯುವ್ಯ ಭಾಗ ಒಡಿಸ್ಸಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾದ ಕಾರಣ ರಾಜ್ಯಾದ್ಯಂತ ಮತ್ತೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ರೆಡ್ಡ ಅಲಾರ್ಟ್ ಘೋಷಿಸಲಾಗಿದೆ. ಕರ್ನಾಟಕದ ಮೇಲೂ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ ವಾಪಕವಾಗಿ ಮಳೆಯಾಗಲಿದೆ. ಇಂದಿನಿಂದ ಮೇ 30ರವರೆಗೂ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ,…

ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 28,-“ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನಗರದ ಟೌನ್ ಹಾಲ್ ನಲ್ಲಿ ಬುಧವಾರ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ ಹಿರಿಯ ಸೇನಾಧಿಕಾರಿಗಳು ಹಾಗೂ ಮಾಜಿ ಯೋಧರು, ಹುತಾತ್ಮರಾದ ಯೋಧರ ಕುಟುಂಬ ಸದಸ್ಯರನ್ನು ಸನ್ಮಾನಿಸಿದ ನಂತರ ಶಿವಕುಮಾರ್…

ಕೆಎಸ್ಐಐಡಿಸಿ ಲಾಭಾಂಶ 68 ಕೋಟಿ ರೂ. ಸರಕಾರಕ್ಕೆ ಹಸ್ತಾಂತರ

ಬೆಂಗಳೂರು,ಮೇ28-ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಸಾಮಾನ್ಯ ಲಾಭಾಂಶ 68.69 ಕೋಟಿ ರೂ. ಮತ್ತು ವಿಶೇಷ ಲಾಭಾಂಶ 17,21,56,839 ಕೋಟಿ ರೂ. ಮೊತ್ತದ ಚೆಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 3 ಕೋಟಿ ರೂಪಾಯಿ ಮೊತ್ತದ ಚೆಕ್ ಸಹ ನೀಡಲಾಯಿತು. ಚೆಕ್ ಸ್ವೀಕರಿಸಿದ ಸಿದ್ದರಾಮಯ್ಯ ಮಾತನಾಡಿ, ಸಾರ್ವಜನಿಕ ವಲಯದ ಉದ್ಯಮಗಳು…

ಪುಟ್ಟಣ್ಣನ ಕತ್ತೆ” ಮೊದಲನೋಟ ಬಿಡುಗಡೆ

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ. ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ…

ಕಾನ್ಸ್ ಚಿತ್ರೋತ್ಸವದಲ್ಲಿ ಸೀರೆಯಲ್ಲಿ ಗಮನಸೆಳೆದ ಚಾಂದಿನಿ

ಫ್ರಾನ್ಸ್ ದೇಶದ ಕಾನ್ಸ್ ನಗರದಲ್ಲಿ ಇತ್ತೀಚೆಗಷ್ಟೇ ಪ್ರತಿಷ್ಠಿತ ಕಾನ್ಸ್ ಚಿತ್ರೋತ್ಸವವು ಮುಕ್ತಾಯಗೊಂಡಿದೆ. ಈ ಚಿತ್ರೋತ್ಸವದಲ್ಲಿ ಭಾರತದ ಹಲವು ನಟಿಯರು ಭಾಗವಹಿಸಿದ್ದು, ಕನ್ನಡದ ‘ಎ’ ಚಿತ್ರದಲ್ಲಿ ನಟಿಸಿದ್ದ ಚಾಂದಿನಿ ಸಹ ರೆಡ್‍ ಕಾರ್ಪೆಟ್‍ ಮೇಲೆ ಕ್ಯಾಟ್‍ ವಾಕ್‍ ಮಾಡಿದ್ದು ವಿಶೇಷವಾಗಿತ್ತು. ಈ ಚಿತ್ರೋತ್ಸವದ ರೆಡ್‍ ಕಾರ್ಪೆಟ್ ವಿಭಾಗದಲ್ಲಿ ಭಾರತದ ಹಲವು ನಟಿಯರು ಭಾಗವಹಿಸಿದ್ದರೂ, ಅವರೆಲ್ಲರೂ ಆಧುನಿಕ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದರು. ನಟಿ ಚಾಂದಿನಿ ರೆಡ್‍ ಕಾರ್ಪೆಟ್‍ ಮೇಲೆ ನೀಲಿ ಬಣ್ಣದ ಸೀರೆಯಲ್ಲಿ ಕಾಣಿಸಿಕೊಳ್ಳುವುದರ ಮೂಲಕ ಭಾರತದ ಸಂಪ್ರದಾಯ ಮತ್ತು ಪರಂಪರೆಯ…

ಜೂನ್ 6 ರಿಂದ ‘ಮಾದೇವ ‘ತೆರೆಮೇಲೆ

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಮಾಧ್ಯಮಗೋಷ್ಠಯಿಲ್ಲಿ ನಿರ್ದೇಶಕ ನವೀನ್ ರೆಡ್ಡಿ”ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ…

ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು- ಕೆ.ವಿ.ಪ್ರಭಾಕರ್

ಬೆಂಗಳೂರು ಮೇ 28-ಭಾನು ಮುಷ್ತಾಕ್‌ ಮಾನವೀಯತೆ ಮತ್ತು ಭಾರತೀಯತೆಯನ್ನು ಬೆಸೆಯುವ ನೇಕಾರರು. ಇವರಿಗೆ ಲಭಿಸಿರುವ ಬೂಕರ್‌ ಇಂಟರ್‌ ನ್ಯಾಷನಲ್‌ ಪ್ರಶಸ್ತಿ ನಾಗರಿಕತೆಯ ಬಯಕೆ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ತಿಳಿಸಿದರು. ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬಹುರೂಪಿ ಮತ್ತು ಗಾಂಧಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ವಿಚ್ಛಿದ್ರಕಾರಿ ಶಕ್ತಿಗಳು, ಮತಾಂದತೆ ಹಾಗೂ ಮೂಲಭೂತವಾದ ಒಟ್ಟಾಗಿ…

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*

ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು…

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ

ಬೆಂಗಳೂರು ಮೇ 27- ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ…

ಕನ್ನಡ ಭಾಷೆ ನಿರ್ಲಕ್ಷಿಸಿ ಉರ್ದು ಭಾಷಗೆ ಮಹತ್ವ ನೀಡಲಾಗುತ್ಯದೆ ಎನ್ನುವ ಬಿಜೆಪಿ ಅಪಪ್ರಚಾರ ಸುಳ್ಳು- ಸಿಎಂ ಸ್ಪಷ್ಟನೆ

ಬೆಂಗಳೂರು,ಮೇ,27-ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು,ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ. 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ…

ನನ್ನ ಕೊನೆ ಉಸಿರಿರುವವರೆಗೂ ಬರೆಯುತ್ತೇನೆ; ಡಾ.ಬಿ.ಎಲ್.ವೇಣು

ಚಿತ್ರದುರ್ಗ,ಮೇ,27- ನನ್ನ ಬರಹ ಪ್ರಕಟಗೊಳ್ಳುತ್ತಿಲ್ಲ, ಎಲ್ಲಿಯೂ ಕಾಣುತ್ತಿಲ್ಲವೆಂದರೇ ನನ್ನ ಉಸಿರು ನಿಂತಿದೆ ಎಂದೇ ಜನ ಭಾವಿಸಿಕೊಳ್ಳಬೇಕು ಎಂದು ಸಾಹಿತಿ ಬಿ.ಎಲ್.ವೇಣು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಸೇರಿಕಸಾಪ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಮ್ಮ 80ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬರವಣಿಗೆ ನನ್ನ ಜೀವಾಳ, ನಾನು ಬರೆಯುತ್ತಿದ್ದರೆ ನಾನು ಚನ್ನಾಗಿ ಇರುತ್ತೇನೆ, ಇಲ್ಲವಾದರೆ ಅನಾರೋಗ್ಯದಿಂದ ಬಳಲುತ್ತೇನೆ ಎಂದರು. ಜನತೆ ನನ್ನನ್ನು ಬಹಳಷ್ಟು ಪ್ರೀತಿಯಿಂದ ಕಾಣುತ್ತಾರೆ. ಸಾಹಿತ್ಯ ಸಮ್ಮೇಳನದಲ್ಲಿ ನನ್ನನು ಅಧ್ಯಕ್ಷನನ್ನಾಗಿಸಿದ್ದಾರೆ. ಆದರೆ, ನಾನು ಸಾಸಿವೆ ಕಾಳಿನಷ್ಟು…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ.ಪ. ಪಂ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಂದ ಅನರ್ದಿಷ್ಟ ಧರಣಿ ಸತ್ಯಾಗ್ರ

ನಾಯಕನಹಟ್ಟಿ ,ಮೇ,27- ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅನರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬಿಲ್ ಕಲೆಕ್ಟರ್ ಸಂದೀಪ್ ಮಾತನಾಡಿ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಓ ಪಿ ಎಸ್ ಜಾರಿಗೊಳಿಸಬೇಕು. ಅರೆ ಸರ್ಕಾರಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು, ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಕೆ ಜೆ ಡಿ, ವಿಮಾ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳು ನಮಗೆ ದೊರೆಯುವಂತಾಗಬೇಕು.…

ಅನಿಲ್ ಕುಂಬ್ಳೆ – ಅರಣ್ಯ ಇಲಾಖೆ ರಾಯಭಾರಿ: ಈಶ್ವರ ಖಂಡ್ರೆ

ಬೆಂಗಳೂರು, ಮೇ 27- ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ…

1 9 10 11 12 13 120
Girl in a jacket