ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ
ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ by-ಕೆಂಧೂಳಿ ಬೆಂಗಳೂರು, ಮಾ,೨೩-ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಹತ್ತಿ ಹುರಿಯುತ್ತಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಹಲವಾರು ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನುವುದು ನೆಪ ಮಾತ್ರ ಆದರೆ ಈ ಭೇಟಿಯ ಉದ್ದೇಶವೇ ರಾಜಕೀಯ ಬೆಳವಣಿಗೆಗಳ ಚರ್ಚೆ ಅಡಗಿದೆ ಎನ್ನುವುದನ್ನು ತಳ್ಳಿಹಾಕುವಂತಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣ ಸದ್ದು ಮಾಡಿ…