ಮೇಕೆದಾಟು ಯೋಜನೆ; ನಾಳೆ ಕಾನೂನು ತಜ್ಞರೊಂದಿಗೆ ಸಭೆ- ಬೊಮ್ಮಾಯಿ
ಬೆಂಗಳೂರು, ಮೇ,26:ಮೇಕೆದಾಟು ಯೋಜನೆ ಸಂಬಂಧಿಸಿದಂತೆ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತಮಟ್ಟದ ಸಭೆ ನಡಯಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ಬಳಿ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸೋಮೋಟೋ ದೂರು ದಾಖಲಿಸಿಕೊಂಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು.…