ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯೊದಗಿಸುತ್ತೇನೆ: ಸಿಎಂ ಬೊಮ್ಮಾಯಿ
ಬೆಂಗಳೂರು,ಜು,28: ರಾಜ್ಯದ ಜನತೆ ಎರಡು ಬಾರಿ ಕೋವಿಡ್ ಸಂಕಷ್ಟವನ್ನು ಮತ್ತು ಅತಿವೃಷ್ಟಿಯಿಂದ ಪ್ರವಾಹ, ನೆರೆ ಪರಿಸ್ಥಿತಿಯನ್ನು ಎದುರಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ, ಸರ್ಕಾರದ ಸೌಲಭ್ಯ ಸಿಗುವಂತೆ ಮತ್ತು ಪ್ರಾದೇಶಿಕ ಅಸಮತೋಲನವನ್ನು ಹೋಗಲಾಡಿಸಲು ಮುಖ್ಯಮಂತ್ರಿಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇಂದು ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ನಾನು ಇಂದು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಅನೇಕ ರಾಜಕೀಯ,…




















