ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಶ್ವಥ್ ನಾರಾಯಣ್
ಹುಬ್ಬಳ್ಳಿ,ಜು,೧೨: ಇಲ್ಲಿನ ಆರಾಧ್ಯ ದೈವವಾದ ಸಿದ್ಧಾರೂಢ ಮಠಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವಥ್ನಾರಾಯಣ ಅವರು ಭೇಟಿ ನೀಡಿ ಸಿದ್ಧಾರೂಢರು ಮತ್ತು ಗುರುನಾಥರೂಢರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು ಹುಬ್ಬಳ್ಳಿ ಪ್ರವಾಸದಲ್ಲಿರುವ ಅವರು ಇಲ್ಲಿನ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಮಧ್ಯೆಯೇ ಬೆಳಂಬೆಳಗ್ಗೆ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ್ದಾರೆ. ಉಭಯ ಶ್ರೀಗಳ ಗದ್ದುಗೆ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್ ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಕರ್ನಾಟಕ ವಿಶ್ವ…



















