ರಾಜಕೀಯ
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ, ಕಾಂಗ್ರೆಸ್ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, ನವೆಂಬರ್ 19-ಡಾ.ಬಿ.ಆರ್.ಅಂಬೇಡ್ಕರ್‌ಗೆ ಕಾಂಗ್ರೆಸ್ ಮಾಡಿದ ಅನ್ಯಾಯಗಳ ಬಗ್ಗೆ ತಿಳಿಸಲು ಭೀಮ ಸ್ಮರಣೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋ,ಕ ತಿಳಿಸಿದರು. ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 26 ರಿಂದ ಡಿಸೆಂಬರ್ 6 ರವರೆಗೆ ಭೀಮ ಸ್ಮರಣೆ ಕಾರ್ಯಕ್ರಮ ಮಾಡಲಾಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಾಬಾ ಸಾಹೇಬರ ಇತಿಹಾಸ ಸ್ಮರಿಸಲು ಮಾಡಿದ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸಲಿದ್ದೇವೆ…
















