ರಾಜಕೀಯ
ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ; ಡಿ.ಕೆ. ಶಿ ಆರೋಪ
ಬೆಂಗಳೂರು,ಅ,07:ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಇದು ಆರೆಸ್ಸಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆಯಲ್ಲಿ ಆಪಾದಿಸಿದರು. ಈ…