Browsing: ರಾಜಕೀಯ

ರಾಜಕೀಯ

೨೬ ರ ನಂತರ ಬಿಎಸ್‌ವೈ ರಾಜೀನಾಮೆ ನೀಡುತ್ತಾರಾ..?

ನವದೆಹಲಿ,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತದೆ ಈ ಸಂಭ್ರಮವನ್ನು ಆಚರಿಸಿಕೊಂಡ ನಂತರ ಅವರು ಪದತ್ಯಾಗ ಮಾಡುತ್ತಾರೆ ಎನ್ನುವುದು ಈಗ ಖಚಿತವಾಗುತ್ತಿವೆ. ಹೌದು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ತಾವು ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಒಂದು ತಿಂಗಳ ಅವಕಾಸ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಯಡಿಯೂರಪ್ಪ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಯಾದ ಮೇಕೆದಾಟು…

ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆಗೆ ಸುಮಲತಾ ಒತ್ತಾಯ

ಮೈಸೂರು,ಜು.14: ಕೆಆರ್ ಎಸ್ ಡ್ಯಾಂ ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಕೆಆರ್‌ಎಸ್ ಕಲಹ ವಿಚಾರಕ್ಕೆ ಸುಮಲತಾ ಸ್ಪಷ್ಟನೆ ಕೊಟ್ಟಿದ್ದಾರೆ. ಮುಂದುವರೆದ ಅವರು, ನನಗೆ ಈಗಲೂ ಶೇಕಡ 50ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ…

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲೊಲ್ಲ; ಸುಮಲತಾ

ಬೆಂಗಳೂರು,ಜು,10: ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ‌ ಎಂದಿರುವ ಸಂಸದೆ ಸುಮಲತಾ ಅವರು,ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಟಿ.ಎ. ಶರವಣ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ಕೇಳಿದಾಗ ಶರವಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ಹಾಗಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ದಿಶಾ ಸಭೆಯಲ್ಲಿ ಮಾತಾಡಿದ್ದನ್ನೇ ಪ್ರಸ್ತಾಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವನ್ನು ನಾನು…

ಅಂಬರೀಶ್ ಮುಂದೆ ಹೆಚ್ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

ರಾಮನಗರ ಜು 09: ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ವೈರಲ್ ವಿಚಾರವಾಗಿ ರಾಮನಗರ ಬಿಡದಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದರು. ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲೇನೆ. ಅಂಬರೀಶ್ ಗೆ ನಾನೇನು ಗುಲಾಮನಾಗಿದ್ನ ಇಂತಹ ವೈಯಕ್ತಿಕ ವಿಚಾರಗಳ ಬಗ್ಗೆ ಗಮನಕೊಡುವ ಬದಲು ಮಾಧ್ಯಮದ ಮಿತ್ರರು ತೈಲ ಬೆಲೆ ಏರಿಕೆ, ರಾಜ್ಯ ಮತ್ತು ರಾಷ್ಟ್ರದಲ್ಲಿರು ಸಮಸ್ಯೆಗಳ ಬಗ್ಗೆ ಗಮನ ನೀಡುವಂತೆ ಸಲಹೆ ನೀಡಿದರು. ಕೆಲ ವೈಯಕ್ತಿಕ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ…

ರೋಷನ್ ಬೇಗ್ ಆಸ್ತಿ ಜಪ್ತಿ‌ಮಾಡಿದ ಸರ್ಕಾರ

ಬೆಂಗಳೂರು,ಜು,07:  ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್​ ಅಲಿಖಾನ್​ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ ಎನ್ನುವುದು ಸಾಬೀತಾದ ನಂತರ ಇವರ ಆಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶಿಸಿತ್ತು. ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್…

ಸದಾನಂದಗೌಡ್‌ಗೆ ಕೊಕ್ ಶೋಭಾಗೆ ಅವಕಾಶ?

ಬೆಂಗಳೂರು,ಜು, ೦೭; ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಕೇಂದ್ರ ಸಚಿವ ಸದಾನಂದಗೌಡ ಅವರಿಗೆ ಕೊಕ್ ನೀಡಿ ಶೋಭಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ…

ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ನಿರಾಣಿ ದೆಹಲಿ ಪ್ರಯಾಣ

ಬೆಂಗಳೂರು,ಜು,೦೬:ನಾಯಕತ್ವ ಬದಲಾವಣೆ ಕೂಗು ಹೆಚ್ಚಾದ ಬೆನ್ನಲ್ಲೆ ಹೈಕಮಾಂಡ್ ಗಣಿ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರನ್ನು ಕರೆಸಿಕೊಂಡಿರುವುದು ರಾಜಕೀಯ ವಲಯದಲ್ಲಿ ರೆಕ್ಕೆ ಪುಕ್ಕಗಳು ಹೆಚ್ಚಾಗಿವೆ. ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಈ ಭೇಟಿ ಹಲವು ವ್ಯಾಖ್ಯಾನಗಳಿಗೆ ದಾರಿ ನಿಡಿದಂತಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ಇಂದು ಬೆಳಗಿನ ಜಾವ ಅವರು ದೆಹಲಿಗೆ ತೆರಳಿದ್ದಾರೆ. ಇದು ಈಗ ರಾಜಕೀಯ ನಾಯಕರಲ್ಲಿ ಒಂದು ರೀತಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದರೆ ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ…

ಕುತೂಹಲ ಕೆರಳಿಸಿದ ವಿಶ್ವನಾಥ್,ಯತ್ನಾಳ್ ಭೇಟಿ

ಬೆಂಗಳೂರು,ಜು,೦೫:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗಬೇಕು ಎಂದು ಒತ್ತಾಯಿಸುತ್ತಿರುವ ಇಬ್ಬರು ಬಿಜೆಪಿ ನಾಯಕರಾದ ಎಚ್.ವಿಶ್ವನಾಥ್ ಮತ್ತು ಬಸವರಾಜ್ ಪಾಟೀಲ್ ಯತ್ನಾಳ್ ಅವರು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸುಮಾರು ಹೊತ್ತು ಈ ಉಭಯನಾಯಕರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದ್ದು ಮುಂದಿನ ಬೆಳವಣಿಗೆಗಳಿಗೆ ಕಾರಣ ಮತ್ತು ತಂತ್ರಗಳ ಕುರಿತು ಚರ್ಚಿಸಿದರು ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸುತ್ತೂರು ಮಠಕ್ಕೆ ಹೋಗಿದ್ರಾ?…

ಕುತೂಹಲ ಮೂಡಿಸಿದ ಸಿಎಂ, ಎಚ್.ಡಿಕೆ ಭೇಟಿ

ಬೆಂಗಳೂರು,ಜು,05: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿಯ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ…

ದುಷ್ಟರ ಸಂಹಾರ ಎಂಬುದು ಬಿಎಸ್‌ವೈ ಪತನವಾ?

ದುಷ್ಟರ ಸಂಹಾರ ಆಗಬೇಕು ಅದರಿಂದ ದೇಶ, ರಾಜ್ಯ ಮತ್ತು ಪಕ್ಷಕ್ಕೆ ಒಳ್ಳಯದಾಗುತ್ತದೆ’ ಇದು ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಈ ಹೇಳಿಕೆಗೆ ಹಲವಾರು ಅರ್ಥಗಳು ಇವೆ,ಇನ್ನು ಅವರೇ ಹೇಳುವ ರೀತಿ ಜೈಲಿಗೆ ಹೋಗಿಬಂದ ಯಡಿಯೂರಪ್ಪ ಮತ್ತೇ ಜೈಲಿಗೆ ಹೋಗಬಾರದು ಎಂಬುದು ನಮ್ಮ ಕಾಳಜಿ ಎನ್ನುವ ಮುಂದುವರೆದ ಹೇಳಿಕೆಗಳಿಗೆ ನಾನಾಅರ್ಥಗಳು ಮೂಡುತ್ತವೆ. ಇದು ಹೇಳುವ ಒಂದು ದಿನ ಮುಂಚೆ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಯೋಗೇಶ್ವರ್ ಅವರು ಭೇಟಿ ಮಾಡಿದ್ದು ಕೂಡ ಕುತೂಹಲ ಮೂಡಿಸಿದೆ,…

ಕಾಂಗ್ರೆಸ್ ನಲ್ಲೂ ಲಿಂಗಾಯತ ಸಿಎಂ ಅಭ್ಯರ್ಥಿಗಳಿದ್ದಾರೆ; ಎಂ ಬಿ ಪಾಟೀಲ್

ಮೈಸೂರು,ಜೂನ,27: ತಾವು ಸಿಎಂ ಎಂದು ಹೇಳಿಕೊಂಡರೆ ಸಿಎಂ ಆಗಲೂ ಸಾಧ್ಯವೆ ಅದನ್ನು ನಿರ್ಧಾರ ಮಾಡುವುದು ಹೈಕಮಾಂಡ್ ಎಂದು ಹೇಳಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರಸ್ ನಲ್ಲೂ ಲಿಂಗಾಯತ ನಾಯಕರು ಸಿಎಂ ಅಬ್ಯರ್ಥಿಗಳಿದ್ದಾರೆ ಎನ್ನುವ ಮೂಲಕ ತಾವು ಸಿಎಂ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್…

ಜನರ ಆಕ್ರೋಶ ಕಂಡು ಬಿಜೆಪಿಗೆ ಭಯ ; ಡಿ.ಕೆ. ಶಿ

ಚಾಮರಾಜನಗರ,ಜೂ,27:ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಛೇಡಿಸಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಸತ್ತವರ ಮನೆಗಳಿಗೆ ಭಾನುವಾರ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್,ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ನಂತರ ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾಯಿತು.…

ನಾಯಕತ್ವ ಬದಲಿಸಲು ದೆಹಲಿ ನಾಯಕರಲ್ಲಿ ಯೋಗೇಶ್ವರ್ ಒತ್ತಡ

ನವದೆಹಲಿ,ಜೂ,27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ನಾಯಕರನ್ನು ಬೇಟಿ ಮಾಡಿ ಒತ್ತಡ ಹೇರಿದ್ದಾರೆ. ‘ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ’ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಶುಕ್ರವಾರ ತಡರಾತ್ರಿ ದೆಹಲಿಗೆ ದೌಡಾಯಿಸಿದ್ದ ಅವರು ಶನಿವಾರ ಪಕ್ಷದ ಕೆಲವು ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶನಿವಾರ ಬೆಳಗಿನಜಾವ ಕೆಲವರನ್ನು ಭೇಟಿಯಾಗಿ ನಾಯಕತ್ವ ಬದಲಾವಣೆಗಾಗಿ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯ…

ಜಿಲ್ಲಾ ,ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗಲು ಸಿಎಂ ಕರೆ

ಬೆಂಗಳೂರು,ಜೂ,೨೬: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆಳಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಟಾಟಿಸಿ ಮಾತನಾಡಿದ ಅವರು,’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ’ ಎಂದು ಹೇಳಿದರು. ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ…

ಪ್ರಾದೇಶಿಕ ಪಕ್ಷಗಳತ್ತ ಜನರ ಒಲವು-ಕುಮಾರಸ್ವಾಮಿ

ಚನ್ನಪಟ್ಟಣ ,ಜೂ. 26: ರಾಷ್ಟ್ರೀಯ ಪಕ್ಷಗಳ ವಿರುದ್ಧ ಜನರು ಈಗಾಗಲೇ ರೋಸಿ ಹೋಗಿದ್ದಾರೆ, ಇದೇ ಕಾರಣ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲಿಯೂ ಕೂಡ ಜನರು ಪ್ರಾದೇಶಿಕ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಕಾಂಗ್ರೆಸ್- ಬಿಜೆಪಿ ಆಡಳಿತ ಕಂಡು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಪಂಚ ರಾಜ್ಯಗಳ ಚುನಾವಣೆಯಲ್ಲೂ ಇದು ಸ್ಪಷ್ಟವಾಗಿದೆ. ಈ ಅಲೆಯನ್ನು ಗಮನಿಸಿದರೆ, ೨೦೨೩ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜನರು ಮಣೆ ಹಾಕುವುದು…

ದೆಹಲಿಗೆ ಹಾರಿದ ಯೋಗೇಶ್ವರ್-ಮತ್ತೇ ನಾಯಕತ್ವ ಗೊಂದಲ

ಬೆಂಗಳೂರು,ಜೂ,೨೬: ನಾಯಕತ್ವ ಬದಲಾವಣೆಯ ಪ್ರಶ್ನೆಯೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರ್ಯದಲ್ಲಿ ಹಲವಾರು ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯುತ್ತಲೇ ಇವೆ. ಹೌದು ಇದಕ್ಕೆ ಪುಷ್ಟಿ ಕೊಡುವಂತೆ ಮೊನ್ನೆಯಷ್ಟೆ ಸಿಎಂ ಪುತ್ರ ವಿಜಯೇಂದ್ರ ಮತ್ತು ರಾಘವೇಂದ್ರ ದೆಹಲಿಗೆ ದೌಡಾಯಿಸಿದ್ದರು ಈಗ ನಿನ್ನೆ ರಾತ್ರಿ ದಿಡೀರ್ ಸಿ.ಪಿ.ಯೋಗೇಶ್ವರ್ ದೆಹಲಿಗೆ ತೆರಳುವ ಮೂಲಕ ಬಿಜೆಪಿಯ ಆಂತರ್ಯದಲ್ಲಿ ಎದ್ದಿರುವ ಬಿಸಿ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳು ಗೋಚಿರಿಸುತ್ತಿವೆ. ನಿನ್ನೆಯಷ್ಟೆ ಸಿ.ಪಿ.ಯೋಗೇಶ್ವರ್ ಅವರು ಸಿ.ಎಂ.ನಾಯಕತ್ವ ಕುರಿತಂತೆ ಇದೀಗ ಪರೀಕ್ಷೆ ಬರೆದಿದ್ದೇವೆ…

ರಮೇಶ್‌ಜಾರಕಿಹೊಳಿಗೆ ಬಿಜೆಪಿ ಸಂಸ್ಕೃತಿ ಒಗ್ಗೊತ್ತಿಲ್ಲ-ಬಯ್ಯಾಪುರ

ಕೊಪ್ಪಳ,ಜೂ,೨೬: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಸಂಸ್ಕೃತಿ ಒಗ್ಗುತ್ತಿಲ್ಲ ಅಲ್ಲಿಯನ ಗರ್ಭಗುಡಿಯ ಚಟವಟಿಕೆಗಳು ಸರಿಹೊಂದುತ್ತಿಲ್ಲ ಎನ್ನುವುದು ಅವರ ಇತ್ತೀಚಿನ ನಡವಳಿಕೆಗಳಿಂದ ಅರ್ಥವಾಗುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಇತ್ತೀಚೆಗೆ ಕೆಲವರೊಂದಿಗೆ ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಇದೆ. ಅವರೊಂದಿಗೆ ಕೆಲವರು ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ಮತ್ತೆ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ…

ಮತ್ತೇ ಬಿಜೆಪಿಯ ಆಂತರ್ಯದ ನಿಗೂಢತೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಸಿಟಿ ರವಿ

ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ ಎಂದು ಬಿಜೆಪಿಯೊಳಗಿನ ಬೆಳವಣಿಗೆ ಕುರಿತು ಮತ್ತೇ ಒಳಾರ್ಥದ ನಿಗೂಢತೆಯ ಬಗ್ಗೆ ಹೇಳುತ್ತಲೇ ,ನಾನು ನೀಡಿದ ಹೇಳಿಕೆಸದುದ್ದೇಶದಿಂದ ಕೂಡಿರುತ್ತದೆ ಯಾವುದೇ ದುರುದ್ದೇಶವಿಲ್ಲ ಎನ್ನುವ ಮೂಲಕ ಎಲ್ಲರಲ್ಲಿ ಮತ್ತಷ್ಟು ಅಚ್ಚರಿಯನ್ನು ಸಿ ಟಿ ರವಿ ಮೂಡಿಸಿದ್ದಾರೆ. ಬೆಂಗಳೂರು,ಜೂ,೨೧: ಮೋಡ ಸೂರ್ಯನನ್ನು ಮರೆ ಮಾಚಿದರೂ ಎಷ್ಟು ಕಾಲ? ಕೆಲವು ಕಾಲ ಮಾತ್ರ ಸಾಧ್ಯ. ನಾನು ಹೇಳಿದ್ದನ್ನು ಅವರವರು ಹೇಗೆ ಗ್ರಹಿಸುಯತ್ತಾರೋ ಹಾಗೆಯೇ ಅದರ ಅರ್ಥವಾಗುತ್ತದೆ. ಒಳ್ಳೆಯ ದೃಷ್ಟಿಯಿಂದ ಗ್ರಹಿಸಿದರೆ ಒಳ್ಳೆಯದ್ದಾಗುತ್ತದೆ. ಕೆಟ್ಟ ದೃಷ್ಟಿಯಿಂದ…

ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು

ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು…

ಚುನಾವಣೆಗೂ ಮುನ್ನವೆ ಕಾಂಗ್ರಸ್ ನಲ್ಲಿ ಸಿಎಂ ಸ್ಥಾನಕ್ಕೆ ಕಿತ್ತಾಟ;ಈಶ್ವರಪ್ಪ ಲೇವಡಿ

ಶಿವಮೊಗ್ಗ,ಜೂ,20:ಕಾಂಗ್ರೆಸ್ ನಲ್ಲಿ ಈಗಲೇ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗುಂಪಿನ ನಡುವೆ ಕಿತ್ತಾಟ ನಡೆಯುತ್ತಿದೆ. ಮೊದಲು ಚುನಾವಣೆಯಲ್ಲಿ ಗೆದ್ಧು ಶಾಸಕರಾಗಿ ಬರಲಿ. ನಂತರ ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ನವರು ಕಿತ್ತಾಡಲಿ ಎಂದು ಟಾಂಗ್ ನೀಡಿದರು. ಸಿದ್ಧರಾಮಯ್ಯ ಕ್ಷೇತ್ರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್…

error: Content is protected !!