Browsing: ರಾಜಕೀಯ

ರಾಜಕೀಯ

ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೀರು,ನ,25:ರಾಜ್ಯದಲ್ಲಿ ಕಾಮಗಾರಿಯಲ್ಲಿ ಅಂದಾಜು ವೆಚ್ಚದಲ್ಲಿ ಶೇ 40ರಷ್ಟು ಕಮಿಷನ್ ಕೊಡಬೇಕು,ಕಾನೂನು ಸಂಪೂರ್ಣ ಕುಸಿದಿದೆ ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕಾಂಗ್ರೆಸ್  ರಾಜ್ಯಪಾಲರಲ್ಲಿ ಒತ್ತಾಯಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಗ  ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇತ್ತೀಚಿಗೆ ಮಾಧ್ಯಮಗಳಲ್ಲಿ  ಬಂದ  ವರದಿಯಲ್ಲಿ ಸರ್ಕಾರಿ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಸುಮಾರು 40% ಅನ್ನು ಸರ್ಕಾರದ ಸಚಿವರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕು ಎಂದು…

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಯತ್ನ: ಹೆಚ್.ಡಿ.ಕೆ ಆರೋಪ

ಬೆಂಗಳೂರು,ನ,10: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ‘ಜನತಾ ಪರ್ವ 1.O’ ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು…

ಬಿಜೆಪಿಯವರು ಕೊಳಕರು, ಜಾತಿವಾದಿಗಳು;  ಸಿದ್ಧರಾಮಯ್ಯ ಕಿಡಿ

ಮಂಡ್ಯ,ನ,8: ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ.‌ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ. ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಮಂಡ್ಯದ ಕನಕ ಭವನದ ಆವರಣಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಹಾಗೂ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.. ನನ್ನ ಪ್ರತಿಕೃತಿ ಸುಟ್ಟ…

ಸೋಲು-ಗೆಲುವು ಸಮವಾಗಿ ಸ್ವೀಕರಿಸುವೇ-ಬೊಮ್ಮಾಯಿ

ಬೆಂಗಳೂರು, ನ, ೦೩: “ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. “ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಮತ ಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಂದಗಿ,( ಕೋಕಟನೂರು),ಅ,24:ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ಸಿಂದಗಿ ಮತಕ್ಷೇತ್ರದ ಕೊಕಟನೂರು ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ. ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು…

ಸೂಟಕೇಸ್ ತಗೊಂಡು ಕುಮಾರಸ್ವಾಮಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ ಜಮೀರ್ ಆರೋಪ

ವಿಜಯಪುರ,ಅ,24: ಕುಮಾರಸ್ವಾಮಿ ಅವರು ಎರಡು ಕ್ಷೇತ್ರದ ಚುನಾವಣೆಯ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಂದ ಸೂಟ್ ಕೇಸ್ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ಹೆಚ್.ಡಿ ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಬಿಜೆಪಿಯಿಂದ ಸೂಟ್ ಕೇಸ್ ಪಡೆದು ಅಭ್ಯರ್ಥಿ ಹಾಕಿದ್ದಾರೆ. ಬಸವಕಲ್ಯಾಣದಲ್ಲಿ 10 ಕೋಟಿ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ರು. ಸಿಂದಗಿಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡುತ್ತಿದ್ದಾರೆ…

ಹಾನಗಲ್ ಜೆಡಿಎಸ್ ಅಭ್ಯರ್ಥಿಯನ್ನು ಲಘುವಾಗಿ ಪರಿಣಿಸಬೇಡಿ;ಎಚ್ ಡಿ ಕೆ

ಹಾನಗಲ್ಅ,23: ಈ ಉಪ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಲಘುವಾಗಿ ಪರಿಗಣಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಹಾಗೇನಾದರೂ ಭಾವಿಸಿದರೆ ಫಲಿತಾಂಸದ ದಿನ ಅವರಿಗೆ ನಿರಾಶೆ ಕಟ್ಟಿಟ್ಟಬುತ್ತಿ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದರು. ಹಾನಗಲ್ ಕ್ಷೇತ್ರದಲ್ಲಿಂದು ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಅವರ ಪರ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಷ್ಟ್ರೀಯ ಪಕ್ಷಗಳು ಅಬ್ಬರ-ಆರ್ಭಟದಿಂದ ಪ್ರಚಾರ ಕೈಗೊಂಡಿವೆ. ಆದರೆ, ನಾವು ಜನರ ನಾಡಿಮಿತ…

ಸಿದ್ದು ಟೀಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ

ಹಾನಗಲ್,ಅ,23:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾನಗಲ್ ಗೆ ಏನ್ ಮಾಡಿದ್ದಾರೆ ಎಂದು ನೀಡಿದ್ದ ಹೇಳಿಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ ಬಿಡುಗಡೆಮಾಡಿದರು. ಹಾನಗಲ್ ತಾಲೂಕಿನ ೩೮೪೩೩ ರೈತರಿಗೆ ತಲಾ ರೂ.೧೦೦೦೦ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ೧೨೦೦೦ ಕಾರ್ಮಿಕರಿಗೆ ಕಿಟ್ ನೀಡಲಾಗಿದೆ. ಪ್ರಧಾನಮಂತ್ರಿ ಕಲ್ಯಾಣ ಯೋಜನೆಯಲ್ಲಿ ೬೬,೦೦೦ ಉಚಿತವಾಗಿ ಪಡಿತರ ನೀಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ರೂ.೪೨ ಕೋಟಿ ನೀಡಲಾಗಿದೆ ಹೂವು ಮಾರುವ ೬೪೬೨ ಜನರಿಗೆ ತಾಲಾ ರೂ.೧೦,೦೦೦ ನೀಡಲಾಗಿದೆ, ಹಣ್ಣು ಮಾರುವ ೧೯೮೦ ಜನರಿಗೆ…

ವಿಎಚ್ ಪಿ ಕತ್ತಿ ಹೇಳಿಕೆ ಸಿಎಂ ವಿರುದ್ಧ ಕಾಂಗ್ರಸ್ ಕಿಡಿ

ಬೆಂಗಳೂರು,ಅ,23: ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ  ಎಂಬ ವಿಎಚ್‌ಪಿ ಮುಖಂಡರ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಡಿಸಿದೆ. ತುಮಕೂರಿನಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ನ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಟ್ವಿಟರ್‌ನಲ್ಲಿ  ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ.ಮುಖ್ಯಮಂತ್ರಿಗಳ ‘ಆಕ್ಷನ್’ಗೆ ಬಿಜೆಪಿಯ ಸಮಾಜಘಾತುಕ ಪಡೆಯ ‘ರಿಯಾಕ್ಷನ್’ ಹೆಚ್ಚುತ್ತಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ‘ಸರ್ಕಾರಕ್ಕೆ ಈ ಸಮಾಜ ವಿರೋಧಿ ಸಂಘಟನೆಗಳ ನಿಯಂತ್ರಣ…

ಕಟೀಲ್ ಗೆ ಸೀರೆ ಉಡಿಸಿದರೆ ಹೆಣ್ಣೂ ಅಲ್ಲಾ ಗಂಡೂ ಅಲ್ಲಾ- ಬೇಳೂರು

ಶಿವಮೊಗ್ಗ, ಅ ೨೨: ಹಾನಗಲ್,ಸಿಂಧಿಗಿ ಉಪ ಚುನಾವಣೆಯ ಪ್ರಚಾರದವೇಳೆ ನಡೆಯುತ್ತಿರುವ ನಾಯಕರುಗಳ ವ್ಯಯಕ್ತಿಕ ಹೇಳಿಕೆಗಳಿಗೆ ಈಗ ದಿಕ್ಕು ತಪ್ಪುತ್ತಿದೆ ದಿನಕ್ಕೊಬ್ಬರು ತೀರ ವೈಯಕ್ತಿಕ ಹೇಳಿಕೆಗಳ ಮೂಲಕ ಪ್ರಚಾರಕ್ಕಿಂತ ಹೆಚ್ಚಾಗಿ ವಾಗ್ದಾಳಿಗಳೇ ಮುಂದುವರೆಯುತ್ತಿವೆ. ತೀರ ಕೆಳಹಂತದ ಮಾತುಗಳಿದಿದ್ದಾರೆ. ಬಿಜೆಪಿ ಎಚ್‌ಡಿಕೆ ಕುಮಾರಸ್ವಾಮಿ ಅವರ ದ್ವಿಪತ್ನಿತ್ವದ ಬಗ್ಗೆ ಪ್ರಸ್ತಾಪ ಮಾಡಿದ್ದರೆ ಡಿಕೆಶಿ ರಮೇಶ್ ಜಾರಕಿಹೊಳಿ ಮಂಚದ ಪ್ರಸ್ತಾಪ ಮಾಡಿದ್ದರು ಕಟೀಲು ರಾಹುಲ್ ಗಾಂಧಿ ವಿರುದ್ಧ ಡ್ರಗ್ಸ್‌ಪೆಂಡರ್ ಎಂದು ಹೇಳಿದ್ದರು ಹೀಗೆ ದಿನ ಒನ್ನೊಂದು ರೀತಿಯ ಅಸಹ್ಯ ರೀತಿಯಲ್ಲಿ ಹೇಳಿಕೆಗಳು ಹರಿದು…

ಇಷ್ಟು ದಿನ ಹಾನಗಲ್ ಕಂಡಿರಲಿಲ್ವ ಸರ್ಕಾರದ ವಿರುದ್ದ ಸಿದ್ದು ಕಿಡಿ

ಹುಬ್ಬಳ್ಳಿ, ಅ,22ನಾವಣೆ ವೇಳೆ ನಾವು ಮಿಷನ್ ಹಾನಗಲ್ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ, ಇಷ್ಟು ದಿನ ಏಕೆ ಹಾನಗಲ್ ಅವರಿಗೆ ಕಂಡಿರಲಿಲ್ಲ? ಬಡವರಿಗೆ ಒಂದು ಮನೆಯಾದ್ರೂ ಕೊಟ್ಟಿದ್ದಾರಾ? ಅಭಿವೃದ್ಧಿ ಎಂದರೆ ಏನು ಗೊತ್ತಾ? ಬರೀ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲೋದು ಗೊತ್ತು ಅವರಿಗೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿಕಾರಿದರು. ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಹಾನಗಲ್ ಕ್ಷೇತ್ರಕ್ಕೆ ಏನೆಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೀನಿ ಎಂದು ಹಿಂದಿನ…

ಕೆಆರ್ ಎಸ್ ಜಲಾಶಯಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಅಧಿಕಾರಿ ಕಥೆಯನ್ನು ಬಯಲು ಮಾಡಬೇಕಾಗುತ್ತೆ; ಎಚ್ ಡಿಕೆ ಬಿಜೆಪಿಗೆ ಎಚ್ಚರಿಕೆ

ಸಿಂಧಗಿ,ಅ,21: ಬಿಜೆಪಿಯವರು ನನ್ನ ವೈಯಕ್ತಿಕ ವಿಚಾರಗಳನ್ನು ಇಲ್ಲಿಗೆ ಬಿಡುವುದು ಒಳ್ಳೆಯದು. ಇಲ್ಲವಾದರೆ ಆರ್ ಎಸ್ ಎಸ್ ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ್ತಿರುವ ಅಸಹ್ಯವನ್ನು ಎಲ್ಲವನ್ನೂ ಬಿಚ್ಚಿಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಎಚ್ಚರಿಕೆ ನೀಡಿದರು. ಸಿಂಧಗಿ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಇಂದು ಮಾಧ್ಯಮಗಳ ಜತೆ ಅವರು ಮಾತನಾಡಿದ. ಅವರುಇವತ್ತು ಬಿಜೆಪಿಯವರು ನನ್ನ ಖಾಸಗಿ ವಿಚಾರಗಳನ್ನು ಕೆದಕಿದ್ದಾರೆ. ಮತ್ತೆ ಮತ್ತೆ ಕೆದಕುತ್ತಿದ್ದಾರೆ. ಅವರಿಗೆ ನೇರವಾಗಿ ಹೇಳಲು ಬಯಸುತ್ತೇನೆ. ನಾನು ಆರ್ ಎಸ್ ಎಸ್ ಬಗ್ಗೆ…

ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ;ಎಚ್,ಡಿ.ಕೆ

ವಿಜಯಪುರ,ಅ,21: ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಸಿಂದಗಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಯಡಿಯೂರಪ್ಪ ಅವರು ಅಲ್ಪಸಂಖ್ಯಾತರರನ್ನು ಮತಕ್ಕಾಗಿ ಓಲೈಸುವ ಕೆಲಸ ಮಾಡುತ್ತಿದ್ದಾರಲ್ಲ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು. ಒಂದೆಡೆ ಮುಸ್ಲೀಮರನ್ನು ದೇಶದಿಂದಲೇ ಓಡಿಸಬೇಕು ಎಂದು ಎನ್ನುವ ಬಿಜೆಪಿ, ಇನ್ನೊಂದೆಡೆ ಅವರಿಗೆ ನಾವೂ ಸಹಾಯ ಮಾಡಿದ್ದೇವೆ. ನಮಗೆ ವೋಟು ಕೊಡಬೇಕು ಎಂದು ಕೇಳುತ್ತಿದೆ. ದ್ವಿಮುಖ ನೀತಿ…

ರಮೇಶ್ ಕುಮಾರ್ ವಿರುದ್ಧ ಸುಧಾಕರ್ ಹೇಳಿಕೆಗೆ ಸಿದ್ದು ಆಕ್ರೋಶ

ಹಾನಗಲ್,ಅ,21:ರಮೇಶ್ ಕುಮಾರ್ ನ ಜೈಲಿಗೆ ಕಳಿಸುವೆ‌ ಎನ್ನುವ ಸುಧಾಕರ್ ಹೇಳಿಕೆ  ಬಗ್ಗೆ ತೀವ್ರವಾಗಿ ತರಾಟಗೆ ತಗೆದುಕೊಂಡ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ದುಡ್ಡಿನ ಅಧಿಕಾರದ ಮದ ಇಂಥಹ ದುರಹಂಕಾರದ ವ್ಯಕ್ತಿಗಳಿಗೆ ಜನರೇ ಬುದ್ದಿ ಕಲಿಸುತ್ತಾರೆ ಎಂದರು. ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು,ಅಧಿಕಾರ ಶಾಶ್ವತ ಅಂತ ತಿಳಿದುಕೊಂಡಿದ್ದಾರೆ. ೨೦೨೩ ಕ್ಕೆ ಮನೆಗೆ ಹೋಗ್ತಾರೆ. ಆಗ‌ ಯಾರನ್ನ ಯಾರು ಜೈಲಿಗೆ ಕಳಿಸ್ತಾರೆ ಗೊತ್ತಾಗುತ್ತೆ.‌ ಅಪರಾಧ ಮಾಡಿದ್ರೆ ಮಾತ್ರ ಜೈಲಿಗೆ ಹಾಕಬಹುದುಎಂದು ಕಿಡಿಕಾರಿದರು ಯಾವಾಗ ಚರ್ಚಿಸಲು ವಿಷಯಗಳು ಇಲ್ಲವೋ ಆಗ ಅವಹೇಳನಕಾರಿ…

ಎಚ್ ಡಿಕೆ ಹಿಟ್ ಅಂಡ್ ಗಿರಾಕಿ: ಸಿದ್ದು ಲೇವಡಿ

ಹುಬ್ಬಳ್ಳಿ, ಅ,17:ಕುಮಾರಸ್ವಾಮಿ ಹಿಟ್ ಎಂಡ್ ರನ್ ಕೇಸ್ ಗಿರಾಕಿ. ಅವರು ಯಾವಾಗಲೂ ಬರೀ ಸುಳ್ಳೇ ಹೇಳೋದು ಹಾಗಾಗಿ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ನಿರ್ಧಾರ ಮಾಡಿದ್ದೇನೆ. ನಾನು ಅಲ್ಪಸಂಖ್ಯಾತರಿಗೆ ಮೋಸ ಮಾಡಿದ್ದೀನಾ ಬಿಟ್ಟಿದೀನಾ ಎಂದು ನಮ್ಮ ಪಕ್ಷದ ಅಲ್ಪಸಂಖ್ಯಾತ ನಾಯಕರು ಹೇಳ್ತಾರೆ, ನಾನು ಈ ಬಗ್ಗೆ ಮಾತನಾಡಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಕಚೇರಿಯಿಂದ ಎಲ್ಲರಿಗೂ ಪ್ರಚಾರಕ್ಕೆ ಬರುವಂತೆ ಪತ್ರ ಕಳಿಸಿದ್ದಾರೆ, ಸಿ.ಎಂ ಇಬ್ರಾಹಿಂ ಅವರಿಗೆ ಚುನಾವಣಾ ಪ್ರಚಾರಕ್ಕೆ ಬರಬೇಡಿ ಎಂದು ಯಾರೂ…

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಸಿಎಂ

ಹುಬ್ಬಳ್ಳಿ 17: ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಇಂದು ಪ್ರಚಾರ ಕೈಗೊಳ್ಳುತ್ತಿದ್ದೇನೆ. ಸಿಂದಗಿ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತೇನೆ. ಈ ಎರಡೂ ಕ್ಷೇತ್ರಗಳಲ್ಲಿ ಹೆಚ್ವಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸ ತಮಗಿದೆ ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ವಿಮಾನ‌ ನಿಲ್ದಾಣದಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸಂಗೂರು ಸಕ್ಕರೆ…

ಕೇಂದ್ರ ಸರ್ಕಾರದ ವೈಫಲ್ಯವೇ ಕಲ್ಲಿದ್ದಲು ಕೊರೆತೆಗೆ ಕಾರಣ: ಡಿ.ಕೆ.ಶಿ

ಬೆಂಗಳೂರು,ಅ,೧೨:ನನಗೆ ಬಂದಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೊಂದು ದಿನದ ಕಲ್ಲಿದ್ದಲು ಮಾತ್ರ ಇದೆ. ಇದು ರಾಜ್ಯ- ಕೇಂದ್ರ ಸರ್ಕಾರದ ವೈಫಲ್ಯ. ಕಲ್ಲಿದ್ದಲು ಕೊರತೆಗೆ ಬೇರೆ ಕಾರಣವೇನಾದರೂ ಇದೆಯೇ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆ, ವಿದ್ಯುತ್ ಕಡಿತ ವಿಚಾರವಾಗಿ ನಾನು ಕೂಡ ವಿಶ್ಲೇಷಣೆ ಮಾಡುತ್ತಿದ್ದೇನೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಅಗತ್ಯಕ್ಕಿಂತ ಹೆಚ್ಚಾಗಿ, ಅದನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದೆವು…

ಸಿಂದಗಿ ಉಪ ಚುನಾವಣೆ: ಸಿದ್ದರಾಮಯ್ಯ ಹೇಳಿಕೆಗೆ ಹೆಚ್‌ಡಿಕೆ ತಿರುಗೇಟು

ಬೆಂಗಳೂರು,ಅ,10: ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು ದಿವಂಗತ ಎಂಸಿ ಮನಗೂಳಿ ಅವರ ಅನುಕಂಪದ ಅಲೆಯಲ್ಲಿ ಅವರು ತೇಲುತ್ತಿದ್ದಾರೆಂದು ಹೇಳಿದ್ದಾರೆ. “ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ…

ಕೇಂದ್ರ ಸರ್ವಾಧಿಕಾರಿ ಧೋರಣೆ ವಿರುದ್ಧ ಖರ್ಗೆ ಆಕ್ರೋಶ

ಬೆಂಗಳೂರು, ಅ.6- ಉತ್ತರ ಪ್ರದೇಶದ ಲಖಿಂಪುರ ಖೇರಿ ದುರ್ಘಟನೆಯಲ್ಲಿ ಆರು ಮಂದಿ ರೈತರು ಮೃತಪಟ್ಟಿದ್ದು, ಸಾಂತ್ವಾನ ಹೇಳಲು ಹೋದ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಬಿಜೆಪಿ ಸರ್ಕಾರ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದು ಅವರನ್ನು ಕೀಡಲೇ ಬಿಡುಗಡೆ ಮಾಡುವಂಯೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ವಿರೋಧಿಯಾದ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಅವರಿಗೆ ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ ಆಶಿಶ್…

ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ; ಡಿ.ಕೆ. ಶಿ ಆರೋಪ

ಬೆಂಗಳೂರು,ಅ,07:ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಇದು ಆರೆಸ್ಸಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆಯಲ್ಲಿ ಆಪಾದಿಸಿದರು. ಈ…

1 8 9 10 11 12 17
error: Content is protected !!