ರಾಜಕೀಯ
ಮಠಾಧೀಶರ ಬೆದರಿಕೆಗೆ ಬಿಜೆಪಿ ಬಗ್ಗೊಲ್ಲ; ಈಶ್ವರಪ್ಪ
ಬೆಂಗಳೂರು, ಆ,01: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಮಠಾಧೀಶರ ಬೆದರಿಕೆಗೆ ಬೆದರುವುದಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಎಚ್ಚರಿಸಿದ್ದಾರೆ. ವಿಜಯಪುರದಲ್ಲಿ ಭಾನುವಾರ ಮಾತನಾಡಿದ ಅವರು, ತಮ್ಮ ತಮ್ಮ ಸಮಾಜದ ಶಾಸಕರನ್ನು ಮಂತ್ರಿ ಮಾಡಿ ಎಂದು ಮಠಾಧೀಶರು ಹೇಳುವುದು ತಪ್ಪಲ್ಲ. ಆದರೆ ಶಾಸಕರು ಹೇಳುವುದು ತಪ್ಪು. ಇನ್ನೊಂದೆಡೆ ನಮ್ಮ ಸಮಾಜದ ವ್ಯಕ್ತಿಗೆ ಮಂತ್ರಿ ಮಾಡದಿದ್ದರೆ ಬಿಜೆಪಿ ಸರ್ವನಾಶ ಅಂತಾ ಹೇಳುವುದು ತಪ್ಪು ಎಂದು ಮಠಾಧೀಶರಿಗೆ ಸಲಹೆ ಮಾಡಿದರು. ಧರ್ಮ ವಿಚಾರದಲ್ಲಿ ನಾವೂ ಇದ್ದೇವೆ. ಆದರೆ ಮಠಾಧೀಶರು ಶಾಪ ಹಾಕುವ…