Browsing: ರಾಜಕೀಯ

ರಾಜಕೀಯ

ರಾಜ್ಯದಲ್ಲಿ ಇಂದಿನಿಂದ 3 ಹಂತದ ಒಳಮೀಸಲಾತಿ ಸಮೀಕ್ಷೆ-ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು ಮೇ 5-ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು…

ಯತ್ನಾಳ್ ಸವಾಲು ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಬೆಂಗಳೂರು, ಮೇ,02-ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿ  ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ನಾಲ್ಕು ವಿಶೇಷ ತಂಡ ರಚನೆ- ಪರಮೇಶ್ವರ್

ಬೆಂಗಳೂರು, ಮೇ,02-ರೌಡಿ ಶೀಟರ್,ಹಿಂದೂಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಆರೋಪಿಗಳ ಪತ್ತೆ 4 ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ಮಂಗಳೂರಿನಲ್ಲಿ ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಎಂಬುವವರ ಹತ್ಯೆಯಾಗಿದೆ. ನಾವು ಈಗಾಗಲೇ ಅದನ್ನು ಗಮನಿಸಿದ್ದು, ಆರೋಪಿಗಳನ್ನ ಬಂಧಿಸಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ನಾವು ಅವರನ್ನು ಕಾನೂನಿನ ವ್ಯಾಪ್ತಿಗೆ ತರಲಿದ್ದೇವೆ ಎಂದರು. ದಕ್ಷಿಣ ಕನ್ನಡದಲ್ಲಿ ನಾವು ಸಾಕಷ್ಟು ಶಾಂತಿ ಮತ್ತು ಸಾಮರಸ್ಯವನ್ನು…

ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿ

ಬೆಂಗಳೂರು, ಏ.28-ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌.ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು…

ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಆರ್‌.ಅಶೋಕ

ಬೆಂಗಳೂರು, ಏ, 28-ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ…

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ,ಏ ,28-ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ…

ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಆರ್.ಅಶೋಕ

ಬೆಂಗಳೂರು, ಏಪ್ರಿಲ್‌ 26-ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ…

ಅಭಿವೃದ್ಧಿಗೆ ನಾವು ಹಣ ಕೊಡ್ತಿದ್ದೀವಿ. ಜನ ಖುಷಿಯಾಗಿದ್ದಾರೆ. ಬಿಜೆಪಿ ಗೆ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ ಏ 27-ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ…

ಮೈಸೂರು ವಿಭಾಗದ 3647 ಕೋಟಿ42 ಲಕ್ಷದ ಕಾಮಗಾರಿಗೆ ಸಂಪುಟ ಸಭೆ ಅನುಮೋದನೆ

ಮಲೇಮಹಾದೇಶ್ವರ ಬೆಟ್ಟ,(ಮೈಸೂರು)ಏ,23-ಮೈಸೂರು ವಿಭಾಗದಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ  ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು   ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ…

ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ:ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು

ಬೆಳಗಾವಿ, ಏ, 22-:ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಅವರು ಇಂದು ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು…

ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ  ಬೊಮ್ಮಾಯಿ ಆಗ್ರಹ

ಬೆಂಗಳೂರು,ಏ,19- ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ‌ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ…

ಜಾತಿಗಣತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ನಿಖಿಲ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಏ,೧೯-ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವರದಿ ಕುರಿತು ಚರ್ಚಿಸಲು ಈ ಕೂಡಲೇ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಾತಿಗಣತಿಗೆ ಜೆಡಿಎಸ್ ವಿರೋಧ ಮಾಡೊಲ್ಲ. ಆದರೆ ಸಮೀಕ್ಷೆ ಮಾಡಿರೋ ವ್ಯವಸ್ಥೆ ಸರಿಯಿಲ್ಲ. ಹೀಗಾಗಿ ವರದಿ ಪುನರ್ ಪರಿಶೀಲನೆ ಆಗಬೇಕು. ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ವರದಿ ಬಗ್ಗೆ ಚರ್ಚೆ ಮಾಡಬೇಕು.…

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತೆ ಮುನ್ನಲೆಗೆ ಬಂದ ಚರ್ಚೆ

ಬೆಂಗಳೂರು,ಏ,೧೯- ಈಗ ಮತ್ತೆ ದಿಡೀರ್ ಅಂತ ಕೆಪೆಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ವಿಷಯಕ್ಕೆ ಚಾಲನೆ ಸಿಕ್ಕಿದೆ.ಇಬ್ಬರು ನಾಯಕರ ಎರಡು ಗಂಟೆಯ ಭೇಟೆ ಇದಕ್ಕೆ ಮುನ್ನುಡಿ ಬರೆದಂತೆ ಕಾಣುತ್ತಿದೆ. ಹೌದು ಶುಕ್ರವಾರ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಂಜಯನಗರ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಪರಸ್ಪರ ನಡೆಸಿದ ಚರ್ಚೆ ಈಗ ಮತ್ತೆ ಕೆಪಿಸಿಸಿ ಗಾದಿಯ ಚರ್ಚೆಗೆ ಮುನ್ನಡುಗಿ ಬರೆದಂತಾಗಿದೆ, ಹಿಂದುಳಿವ ಸಮುದಾಯದ ಈ ನಾಯಕರು…

ಇನ್ನು 3 ವರ್ಷ ಹೋರಾಟದ ಪರ್ವ: ವಿಜಯೇಂದ್ರ

ಕಲಬುರ್ಗಿ,ಏ,18- ಇನ್ನು 3 ವರ್ಷಗಳ ಕಾಲ ಹೋರಾಟದ ಪರ್ವ ಎಂಬುದನ್ನು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ನೆನಪಿನಲ್ಲಿ ಇಟ್ಟುಕೊಳ್ಳಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಪೂರ್ವಕ ಮನವಿ ಮಾಡಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ನಮ್ಮ ಕಾರ್ಯಕರ್ತರಿಗೆ ನೋವು, ಅವಮಾನ ಆಗುತ್ತದೋ, ಹಿಂದೂ ಕಾರ್ಯಕರ್ತರಿಗೆ ಅಪಮಾನ ಆದಾಗ ನೀವೆಲ್ಲರೂ ಒಗ್ಗಟ್ಟಿನಿಂದ, ಒಂದಾಗಿ ಹೋಗಿ ಅವರಿಗೆ ರಕ್ಷಣೆ ಕೊಡಬೇಕು ಎಂದು ಸೂಚಿಸಿದರು. ಕಾಂಗ್ರೆಸ್ಸಿನಲ್ಲಿ ರಾಜಕಾರಣ ಮಾಡಲು ಯಾವ…

ಯಾವುದೇ ನಿರ್ಣಯ ಕೈಗೊಳ್ಳದ ವಿಶೇಷ ಸಚಿವ ಸಂಪುಟ ಸಭೆ-ಜಾತಿ ಗಣತಿ ಸಭೆ ಅಪೂರ್ಣ

ಬೆಂಗಳೂರು,ಏ.೧೮- ಗುರುವಾರ ನಡೆದ ಜಾತಿಗಣತಿ ವರದಿ ಅಭಿಪ್ರಾಯ ಸಂಗ್ರಹಣೆಯ ಸಚಿವ ಸಂಪುಟ ಸಭೆಯಲ್ಲಿ ನಡೆದ ಅಸಮಾಧಾನ ಮತ್ತು ಭಾವುಕ ನುಡಿಗಳಿಂದ ಸಭೆ ಅಪೂರ್ಣವಾಗಿದ್ದು ಯಾವುದೇ ನಿರ್ಧಾರ ಕೈಗೊಳ್ಳದೆ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಇದರಿಂದ ಸದ್ಯಕ್ಕೆ ಜಾತಿ ಗಣತಿಯ ಈ ವರದಿಯು ಮಂಡನೆ ಅಷ್ಟು ಸುಲಭ ಅಲ್ಲ ಎನ್ನುವುದು ಗೊತ್ತಾಗಿದ್ದು ಇದು ಮುಂದೆ ಪಕ್ಷಕ್ಕೆ ದೊಡ್ಡ ಅಘಾತವಾಗಲಿದೆ ಎನ್ನುವ ಮಾತುಗಳು ಕೂಡ ಈ ಸಭೆಯಲ್ಲಿ ಚರ್ಚೆಯಾಗಿದ್ದು ಕೆಲವ ನಡುವೆ ಮಾತಿನ ಚಕಮುಕಿಯೂ ಆದ ಪ್ರಸಂಗ ನಡೆದಿದೆಯಂತೆ ಹಾಗಾಗಿ ಬಹುತೇಕ…

ಗಣತಿಯ ಲಾಭ ನಿಮಗೋ? ಅಥವಾ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ?-ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು,ಏ,17,ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಗಣತಿಯ ಲಾಭ ನಿಮಗೋ? ಅಥವಾ ನಿಮಗೆ ರಾಜಕೀಯ ಆಶ್ರಯ ಕೊಟ್ಟ ಕಾಂಗ್ರೆಸ್‌ ಪಕ್ಷಕ್ಕೋ? ಎಂದು ಕಾಲೆಳೆದಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಅಕ್ರಮಬದ್ಧ ಜಾತಿ ಗಣತಿ ಬಗ್ಗೆ ಜನರ ಆಕ್ರೋಶ ಸರಿ ಇದೆ. ಸುಳ್ಳುಲೆಕ್ಕ ಗೊತ್ತಿದೆ. ಕಳ್ಳಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಲೋಕಕ್ಕೆ ಕಾಣದೇ? ಗಣತಿ ಹೆಸರಿನಲ್ಲಿ ಜನರನ್ನು ಛಿದ್ರಗೊಳಿಸಿ ರಾಜ್ಯದ…

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರಿಂದ ಕೇಂದ್ರದ ವಿರುದ್ಧ ಹೋರಾಟ: ವಿಜಯೇಂದ್ರ

ಬೆಳಗಾವಿ,ಏ,16- ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ…

ರಾಜ್ಯದ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ- ವಿಜಯೇಂದ್ರ ಟೀಕೆ

ಬೆಂಗಳೂರು,ಏ,14-ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್…

ಒಕ್ಕಲಿಗರು, ಲಿಂಗಾಯತರನ್ನು ಒಡೆದಿದ್ದಾರೆ, ಮುಸ್ಲಿಂ ವೋಟ್ ಬ್ಯಾಂಕ್ ಗಾಗಿ ಮಾಡಿದ ವರದಿ- ಅಶೋಕ್ ಆರೋಪ

ಬೆಂಗಳೂರು, ಏ, 13-ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು.…

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ:ಸಿ.ಎಂ. ಸಿದ್ದರಾಮಯ್ಯ

ಬೆಳಗಾವಿ,ಏ,12-ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್…

1 5 6 7 8 9 24
error: Content is protected !!