ರಾಜಕೀಯ
ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿ
ಬೆಂಗಳೂರು, ಏ.28-ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು…