ರಾಜಕೀಯ
ಕೊರೊನಾ ಪ್ಯಾಕೇಜ್ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ;ಸಿದ್ದು
ಬೆಂಗಳೂರು,ಮೇ,19: ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ರೀತಿಯಂತಿದೆ. ಜೊತೆಗೆ ಅವೈಜ್ಞಾನಿಕ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಡ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ ನೂರಕ್ಕೆ ನೂರರಷ್ಟು ಲಾಕ್ಡೌನ್ ಜಾರಿಗೆ ತನ್ನಿ ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…