ಬೆಂಗಳೂರು ನಗರ
ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ
ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…