ಬೆಂ. ಗ್ರಾಮಾಂತರ
ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ’ ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ
ಬೆಂಗಳೂರು,ಡಿ,11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಚಾಲನೆ ಕಂಡಿದ್ದ `ಜನಸೇವಕ’ ಕಾರ್ಯಕ್ರಮ ಕುರಿತಾದ ವಾರ್ಡ್ ವಾರು ಪ್ರತ್ಯೇಕ ಕಿರುಹೊತ್ತಿಗೆ ಬಿಡುಗಡೆ ಹಾಗೂ ಜನರಿಗೆ ಸಾಂಕೇತಿಕವಾಗಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.…