ರಾಜ್ಯ
ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ
ಬೆಂಗಳೂರು,ಜ,29:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ.…