ರಾಜ್ಯ
ಅಸಾಧ್ಯ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಭಗೀರಥ ಪ್ರಯತ್ನದಿಂದ ಸಾಧಿಸಿದ್ದಾರೆ: ಸಿಎಂ
ಬೆಂಗಳೂರು, ಮಾ, 21: ಉಕ್ರೇನ್ ನಿಂದ ನವೀನ್ ಮೃತ ದೇಹವನ್ನು ತರುವ ಅಸಾಧ್ಯವಾದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರ ಭಗೀರಥ ಪ್ರಯತ್ನದಿಂದ ಸಾಧಿಸಿ, ಐತಿಹಾಸಿಕ ಕೆಲಸವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವೀನ್ ಮೃತದೇಹವನ್ನು ಬರಮಾಡಿಕೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉಕ್ರೇನ್ ಸುತ್ತಲಿನ ಎಲ್ಲಾ ದೇಶಗಳ ಸಂಪರ್ಕವನ್ನು ಬೆಳೆಸಿ ರಾಜತಾಂತ್ರಿಕವಾಗಿ ವಿಮಾನನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಅನುಮತಿ ಪಡೆದು ಕರೆತರಲಾಗಿದೆ. ಇಡೀ ಪ್ರಕ್ರಿಯೆ ಸಮನ್ವಯದ ಆಧಾರದ ಮೇಲೆಯೇ…