ರಾಜ್ಯ
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ;ಸಿದ್ದರಾಮಯ್ಯ
ಬೆಂಗಳೂರು,ಡಿ,30: ‘ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆ ಗುರುವಾರ ಮತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಹೊರಬಿದ್ದಿದೆ. ಚುನಾವಣೆ ನಡೆದ 1,187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡುಬರುತ್ತದೆ. ಫಲಿತಾಂಶ ಖುಷಿ…