ರಾಜ್ಯ
ಭಾರತ್ ಬದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ
ಬೆಂಗಳೂರು,ಸೆ,೨೭: ಕೇಂದ್ರಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಆದರೆ ಬೆಂಗಳೂರಿನಲ್ಲಿ ಎಂದಿನಂತೆ ಕೆ.ಆರ್ ಮಾರುಕಟ್ಟೆಯಲ್ಲಿ ಇತ್ತು ಮಾರುಕಟ್ಟೆಯ ವ್ಯವಹಾರದಲ್ಲಿಯಾವುದೇ ಏರು ಪೇರು ಆಗಲಿಲ್ಲ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿತ್ತು. ಬಿಎಂಟಿಸಿ ಚಾಲಕರು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ…