Browsing: ರಾಜ್ಯ

ರಾಜ್ಯ

23ರಿಂದ 8 ರಿಂದ 11ನೇ ಶಾಲೆಗಳ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು,ಆ,16: ಇದೇ ತಿಂಗಳ 23ರಿಂದ ಶಾಲಾ-ಕಾಲೇಜುಗಳನ್ನು ಆರಂಭ ಮಾಡಲು ಸರಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್‌ ಅವರು; 8ರಿಂದ 11ನೇ ತರಗತಿಗಳ ಭೌತಿಕ ಪಾಠಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದ್ದು, ಮಕ್ಕಳನ್ನು ಶಾಲೆಗೆ ಕಳಿಸುವಂತೆ ಪೋಷಕರನ್ನು ಕೋರಿದರು. ರಾಜ್ಯದಲ್ಲಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಅಗಸ್ಟ್ 30 ರಂದು ತಜ್ಞರ ಸಲಹಾ ಸಮಿತಿ ಜತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು…

ದೇಶಭಕ್ತಿ ಸಾರಿದ ಸಿದ್ಧಾರೂಢರು

ಬೆಂಗಳೂರು, ಆ,16″ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ಧಾರೂಢರ ಪಾತ್ರ ಅವಿಸ್ಮರಣೀಯ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ರಾಮೋಹಳ್ಳಿಯ ತಮ್ಮ ಆಶ್ರಮದಲ್ಲಿ ನಡೆದ 75 ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. 1904 ರಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಸಮ್ಮುಖದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರರ ಮಹಾ ಅಧಿವೇಶನದಲ್ಲಿ ಸಿದ್ಧಾರೂಢರು ಅಧ್ಯಕ್ಷರಾಗಿದ್ದರು. “ಜನನೀ ಜನ್ಮಭೂಮಿ ಸ್ವರ್ಗಕ್ಕಿಂತ ಶ್ರೇಷ್ಠ. ದೇಶವಿದ್ದರೆ ನಾವು ನೀವು ಧರ್ಮ ಭಾಷೆ ಮತ್ತೊಂದು. ನೆಲೆಯಿಲ್ಲದ…

ಕನಕಶ್ರೀ ಗಳಿಗೆ ಪಿತೃ ವಿಯೋಗ

ಚಿತ್ರದುರ್ಗ, ಆ,15:ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಮಹಾ ಸ್ವಾಮೀಜಿ ಅವರ ಪೂರ್ವಾಶ್ರಮದ ಪಿತೃಗಳಾದ ಪೂಜ್ಯ ಕಲಮರಹಳ್ಳಿ ಮಹಾದೇವಪ್ಪ ನವರು ಶಿವೈಕ್ಯರಾದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನೆಲೆಸಿದ್ದ ಮಹಾದೇವಪ್ಪ ಅವರು ಹೃದಯಾಘಾತದಿಂದ ಭಾನುವಾರ ಶಿವೈಕ್ಯರಾಗಿದ್ದು ಪತ್ನಿ ಜಯಮ್ಮ, ಮಕ್ಕಳಾದ ಶ್ರೀಧರ್, ಪ್ರದೀಪಕುಮಾರ್, ರೂಪ ಅವರನ್ನು ಹಾಗೂ ತಂಗಿ, ತಮ್ಮ, ಅಣ್ಣ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಸ್ವಗ್ರಾಮ ಕಲಮರಹಳ್ಳಿಯಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶ್ರೀ…

ಸ್ವಾತಂತ್ರ್ಯೋತ್ಸವದಲ್ಲಿ ನಾಡಿನ ಜನತೆಗೆ ಬಂಬರ್ ಕೊಡುಗೆ ಘೋಷಿಸಿದ ಸಿಎಂ

ಬೆಂಗಳೂರು, ಆ. ೧೫: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೊದಲ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಿದರು. ಈ ವೇಳೆ ಹನ್ನೊಂದು ಹೊಸ ಯೋಜನೆಗಳನ್ನು ಸಿಎಂ…

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

ಬೆಂಗಳೂರು, ಆ, 14:ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ,…

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ :ಸಿಎಂ

ಬೆಂಗಳೂರು, ಆ,14 : ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ನಗರದ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು, ಸ್ವಾತಂತ್ರ್ಯ ನನ್ನ ಆ ಜನ್ಮ ಸಿದ್ಧ ಹಕ್ಕು ಎಂಬ ಗೋಪಾಲ ಕೃಷ್ಣ ಗೋಖಲೆಯವರ ವೀರೋಚಿತ…

ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಬೊಮ್ಮಾಯಿ

ಬೆಂಗಳೂರು, ಆ, 14:”75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ…

ಈ ಬಾರಿ ಮಾಣಿಕ್ ಷಾ ಪೆರೇಡ್ ಗೆ ಸಾರ್ವಜನಿಕರ ಪ್ರವೇಶವಿಲ್ಲ

ಬೆಂಗಳೂರು,ಆ.13- ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ…

ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಮಂಗಳೂರು, ಆ,೧೨; ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸುವ ವೇಳೆ ಕೊರೊನಾ ನಿರ್ಲಕ್ಷ್ಯದ ಮಾತು ಹೊರಬಂದಾಗ ಸಿಎಂ ಈ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ…

ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಮಾರುಕಟ್ಟೆಗೆ

ಮೈಸೂರು,ಆ,12:ಬೆಂಗಳೂರಿನ ಸೌಖ್ಯ ನ್ಯಾಚುರಲ್ಸ್ ಫುಡ್ ಆ್ಯಂಡ್ ಬೇವರೇಜಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮಹತ್ತ್ವ ಆಯುರ್ವೇದಿಕ್ ಹೆಲ್ತಿ ಮಿಕ್ಸ್ ಅನ್ನು ಬುಧವಾರ ಮೈಸೂರಿನ ಸುತ್ತೂರು ಮಠದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು “ಸಾವಯವ ಸಿರಿಧಾನ್ಯ, ಮೊಳಕೆ ಕಟ್ಟಿದ ದ್ವಿದಳ ಧಾನ್ಯಗಳು, ಒಣ ಹಣ್ಣುಗಳು, ಖಾದ್ಯ ಬೀಜಗಳು ಹಾಗೂ ಆಯುರ್ವೇದಿಕ್ ಗಿಡಮೂಲಿಕೆಗಳಿಂದ ತಯಾರಿಸಿದ ಆರೋಗ್ಯ ಹಾಗೂ ಶಕ್ತಿವರ್ಧಕ ದ್ರಾವಣ ಇದಾಗಿದ್ದು ಯಾವುದೇ ರಾಸಾಯನಿಕ ಹಾಗೂ ಇತರೇ ಕರಬೆರಕೆ ರಹಿತವಾಗಿದೆ” ಎಂದರು. ರಾಮೋಹಳ್ಳಿಯ…

ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಹೂ ಗುಚ್ಚ,ಹಾರ – ಶಾಲು ನೀಡಲು ನಿಷೇಧಿಸಿದ ಸಿಎಂ

ಬೆಂಗಳೂರು,ಆ.೧೦: ರಾಜ್ಯ ಸರ್ಕಾರದ ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಶಾಲುಗಳನ್ನು ನಿಷೇಧಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದಲ್ಲಿಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಹೂಗುಚ್ಚ ಸ್ವೀಕರಿಸಲು ನಿರಾಕರಿಸಿದ ಮುಖ್ಯಮಂತ್ರಿ, ಇದು ಅನಾವಶ್ಯಕ ವೆಚ್ಚ. ಇನ್ನು ಮುಂದೆ ಸಭೆ-ಸಮಾರಂಭಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಚ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಈ ಸಂಪ್ರದಾಯವೇ ಬೇಡ ಎಂದು ಸೂಚಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು…

ಸುಳ್ಳು ಕೇಸ್ ವಾಪಾಸ್ ವಿಚಾರ ; ನ್ಯಾಯಲಯಗಳ ನಿರ್ದೇಶನದಂತೆ ಕ್ರಮ-ಸಿಎಂ

ಬೆಂಗಳೂರು,ಆ,೧೦: ಸುಳ್ಳು ದಾವೆಗಳ ವಾಪಸು ವಿಚಾರದಲ್ಲಿ ನ್ಯಾಯಾಲಯಗಳ ನಿರ್ದೇಶನಗಳಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು . ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರುದ್ದದ ಹಳೆಯ ಸುಳ್ಳು ಕೇಸುಗಳನ್ನು ಹಿಂಪಡೆಯಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋರಿದ್ದಾರೆ. ಬಿ.ಎಸ್. ಯಡಿಯೂರಪ್ಪ…

ಕರವೇಯಿಂದ ಕೃಷ್ಣಾಹಿನ್ನೀರಿಗೆ ಗಂಗಾಪೂಜೆ

ಆಲಮಟ್ಟಿ, ಆ,09:ಕರ್ನಾಟಕ ರಕ್ಷಣಾವೇದಿಕೆ ಆಲಮಟ್ಟಿ ಘಟಕದವತಿಯಿಂದ ತುಂಬಿದ ಕೃಷ್ಣೆಯ ಹಿನ್ನೀರಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮವು ಅಧ್ಯಕ್ಷ ಪತ್ತೆಸಾಬ ಚಾಂದ ನೇತೃತ್ವದಲ್ಲಿ ಸೋಮವಾರ ಜರುಗಿತು. ಪೂಜಾಕಾರ್ಯವನ್ನು ಗೋಪಾಲ ಧರ್ಮರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮತ್ತು ಆಲಮಟ್ಟಿ ಗ್ರಾಮಪಂಚಾಯತ ಅಧ್ಯಕ್ಷ ಮಂಜುನಾಥ ಹಿರೇಮಠ, ಚಂದ್ರಶೇಖರ ಹೆರಕಲ್, ರಸೂಲಸಾಬ ಸಿಂಧೆ, ಬಷೀರ ಮುಲ್ಲಾ, ಯಲಗೂರೇಶ ಮೇಟಿ, ಮಹಿಬೂಬ ಡೊಣೂರ, ರಫೀಕ ಅಥಣಿ, ಶಂಕರ ವಡ್ಡರ, ಸಂತೋಷ ಕನಸೆ, ಗ್ರಾ.ಪಂ.ಸದಸ್ಯ ಬಸವರಾಜ ಬಂಡಿವಡ್ಡರ, ಮಸೂಬಾ ಕಟ್ಟಿಮನಿ, ಹನಮಂತ…

47 ಕುಟುಂಬಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

ವಿಜಯಪುರ,ಆ,09: ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೊವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆಯನ್ನು ಈಡೇರಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಣೆಯನ್ನು ಸಚಿವರಾದ ಶಶಿಕಲಾ ಜೊಲ್ಲೆಯವರು ಮಾಡಿದರು. 2010 ರಿಂದ ಬಗೆ…

ರಾಜ್ಯದ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ : ಜೊಲ್ಲೆ

ವಿಜಯಪುರ,ಆ,09 : ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾಗಿ ನೇಮಕಗೊಂಡಿರುವ ಶಶಿಕಲಾ ಜೊಲ್ಲೆಯವರು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಜನತೆ ಕೊರೊನಾ ಮಹಾಮಾರಿ ಹಾಗೂ ಪ್ರವಾಹ ಸಂಕಷ್ಟದಿಂದ ಹೊರ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸದ ಮೊದಲ ಸೋಮವಾರ ಅತ್ಯಂತ ಪುಣ್ಯದ ದಿನವಾಗಿದ್ದು ಈ ದಿನ ಶಿವನ ಪೂಜೆ ಮಾಡುವ ಮೂಲಕ ಮುಜರಾಯಿ,…

ಮೇಕೆದಾಟು ಯೋಜನೆಗೆ ಶೀಘ್ರ ಕೇಂದ್ರದ ಅನುಮೋದನೆ: ಸಿಎಂ ವಿಶ್ವಾಸ

ಮೈಸೂರು, ಆ, 9: ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದಾಗ ಈ ಯೋಜನೆಗೆ ಒಪ್ಪಿಗೆ ನೀಡುವುದಾಗಿ ಭರವಸೆ ದೊರೆತಿದೆ. ಇದಕ್ಕೆ ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದು ಪೂರ್ಣಗೊಂಡ ಕೂಡಲೇ ಕೇಂದ್ರದ…

ಅಮವಾಸ್ಯೆ ಪ್ರಯುಕ್ತ ಕೃಷ್ಣಾತಟದಲ್ಲಿ ಜನವೋ ಜನ..

ಆಲಮಟ್ಟಿ,ಆ,08: ನಾಗರ ಅಮವಾಸ್ಯೆ ಜೊತೆಗೆ ರವಿವಾರವೂ ಆಗಿರುವದರಿಂದ ಪಟ್ಟಣವೂ  ಸುತ್ತಮುತ್ತಲಿನ ಸುಕ್ಷೇತ್ರ ಹಾಗೂ ಕೃಷ್ಣೆಯ ತೀರದಲ್ಲಿ ಎಲ್ಲಿ ನೋಡಿದರೂ ಜನಸ್ತೋಮವೇ ಕಾಣುತ್ತಿತ್ತು. ನಾಗರ ಅಮವಾಸ್ಯೆಯು ರವಿವಾರ ಆಗಿರುವದರಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಯ ನಾಗರಿಕರು ರವಿವಾರ ನಸುಕಿನ ಜಾವದಿಂದ ಸಂಜೆಯವರೆಗೂ ಆಲಮಟ್ಟಿಯ ಕೃಷ್ಣಾಸೇತುವೆ, ಹಿನ್ನೀರು ಪ್ರದೇಶದಲ್ಲಿರುವ ಚಂದ್ರಮ್ಮಾದೇವಸ್ಥಾನದ ಬಳಿ, ಪಾರ್ವತಿಕಟ್ಟೆ ಹಾಗೂ ಯಲಗೂರ ಬಳಿಯಕೃಷ್ಣಾ ನದಿಯ ದಡದಲ್ಲಿ ಭಕ್ತರ ದಂಡು ಪುಣ್ಯಸ್ನಾನ ಮಾಡಿದರು. ಪಟ್ಟಣಕ್ಕೆ ಆಗಮಿಸಿದ್ದ ಪ್ರವಾಸಿಗರು ತುಂಬಿ ನಿಂತಿರುವ ಕೃಷ್ಣೆಯ ಜಲನಿಧಿ, ರಾಕ್ ಉದ್ಯಾನ,…

ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಸಿದ್ದು ಒತ್ತಾಯ

ಬೆಂಗಳೂರು,ಆ,೦೮: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು. ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕು ಎಂದಿದ್ದಾರೆ. ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ನೀತಿಯನ್ನು ತರಾತುರಿಯಲ್ಲಿ…

ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ-ನಾಗರಾಜ ಗೌಡ ಆರೋಪ

ಶಿಕಾರಿಪುರ,ಆ,೦೮:ಇಲ್ಲಿನ ಪುರಸಭೆಯಲ್ಲಿ ಸಂಪೂರ್ಣ ಬಹುಮತ ವಿಲ್ಲದೇ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿದು ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ ಆರೋಪಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಬ್ಬಂದಿಗಳ ಕೊರತೆ ಇದೆ,ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ ಅವರದೇ ಸರ್ಕಾರ ಅವರೇ ಮುಖ್ಯಮಂತ್ರಿ ಶಾಸಕರು ಸಂಸದರು ಅವರ ಪಕ್ಷದವರೆ ಇದ್ದರೂ ಸಾರ್ವಜನಿಕ ರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲದೆ ಕೇವಲ ಅವರ ಪಕ್ಷದ ಕಾರ್ಯಕ್ರಮದಲ್ಲಿ…

ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಗೌರವ್ ಗುಪ್ತ

ಬೆಂಗಳೂರು,ಆ, 07: ‘ನಗರದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ’ ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದರು. ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು…

1 18 19 20 21 22 33
error: Content is protected !!