ರಾಜ್ಯ
ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್
ಆನೇಕಲ್, ಅ. 23-“ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್ ನ ಮುತ್ತನಲ್ಲೂರಿಗೆ ಭೇಟಿ ನೀಡಿದ್ದ ಡಿಸಿಎಂ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಈ ಭಾಗದಲ್ಲಿ ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು…

















