ರಾಜ್ಯ
ವಚನ ಸಾಹಿತ್ಯ ಬೆಳಕಿಗೆ ತಂದವರು ಹಳಕಟ್ಟಿ;ಎಂ.ಬಿ.ಪಾಟೀಲ್
ವಿಜಯಪುರ ,ಜು,02: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು ಡಾ.ಫ.ಗು.ಹಳಕಟ್ಟಿವರು ಎಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಹೇಳಿದರು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ತ ಬಿ.ಎಲ್.ಡಿ.ಇ ಸಂಸ್ಥೆ ಆವರಣದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು, ಬಸವಣ್ಣ ಹಾಗೂ ಬಸವಾದಿ ಶರಣರು ಬರೆದಂತದಹ ವಚನ ಕಟ್ಟುಗಳು ಕಲ್ಯಾಣ ಕ್ರಾಂತಿಯ ನಂತರ ಮಠ-ಮಂದಿರಗಳಲ್ಲಿ, ಗುಡಿ-ಗುಂಡಾರಗಳಲ್ಲಿ, ಅಂಗಡಿ-ಮನೆಗಳಲ್ಲಿ, ಅಲ್ಲಲ್ಲಿ ಜಗುಲಿಗಳಲ್ಲಿ ಇದ್ದವು. ವಕೀಲಿ ವೃತ್ತಿಯ ನಿಮಿತ್ತ…