Browsing: ರಾಜ್ಯ

ರಾಜ್ಯ

ಕಂದಾಯ ದಾಖಲೆಗಳು ಇನ್ನೂ ಮನೆಬಾಗಿಲಿಗೆ

ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ…

12ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ:  ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

ಬೆಂಗಳೂರು,ಮಾ,10: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು. ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ…

ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ

ಚಿತ್ರದುರ್ಗ,ಮಾ,10:ಇಲ್ಲಿನ  ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ

ಬೆಂಗಳೂರು,ಮಾ,07: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡಿದರು. ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. `ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ…

ಉಕ್ರೇನ್ʼನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳಿ ನೆರವಾಗಿ;ಕದ್ರಕ್ಕೆ ಎಚ್ ಡಿ ಕೆ ಆಗ್ರಹ

ಬೆಂಗಳೂರು,ಮಾ,07: ಉಕ್ರೇನ್ ದೇಶದಿಂದ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ, ಜೀವ ಉಳಿಸಿಕೊಂಡು ರಾಜ್ಯಕ್ಕೆ ವಾಪಸ್ ಬಂದಿರುವ ಎಲ್ಲ ವಿದ್ಯಾರ್ಥಿಗಳಿಗೂ ರಾಜ್ಯ ಸರಕಾರ ಮಾನವೀಯ ದೃಷ್ಟಿಯಿಂದ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು ಕೆಲ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ. ಅವರ…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

ದೇಶದಲ್ಲೇ ವಿನೂತನ ಪು ನೀತ್ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ

ಬೆಂಗಳೂರು,ಫೆ,28: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. `ರಾಷ್ಟ್ರೀಯ ವಿಜ್ಞಾನ ದಿನ’ದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ…

ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಫೆ.28: ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಢಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಒಟ್ಟು 3972 ಕೋಟಿ ರೂಪಾಯಿ ವೆಚ್ಚದ 238 ಕಿ.ಮೀ. ಉದ್ದದ…

ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಫೆ,25: ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ…

ಸಾಮಾಜಿಕ ನ್ಯಾಯ ಪರಿಕಲ್ಪನೆ ಆರಂಭವಾಗಿದ್ದು ಬಸವಣ್ಣನ ಕಾಲದಿಂದ; ರಘುಮೂರ್ತಿ

ಚಳ್ಳಕೆರೆ, ಫೆ,24:ಸಾಮಾಜಿಕ ನ್ಯಾಯದ ಪರಿಕಲ್ಪನೆ 12ನೇ ಶತಮಾನದ ಬಸವಣ್ಣನವರಿಂದ ಲು ಪ್ರಾರಂಭವಾಗಿದೆ ಎಂದು ತಹಶಿಲ್ದಾರ ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ ಹಳ್ಳಿ ಗ್ರಾಮದಲ್ಲಿ ಸಾಮಾಜಿಕ ಪರಿಕಲ್ಪನೆಯ ದಿನಾಚರಣೆಯ ಪ್ರಾಸ್ತಾವಿಕವಾಗಿ ಮಾತನಾಡಿ ಬಸವಣ್ಣನವರಿಂದ ಡಾಕ್ಟರ್ ಬಿಆರ್ ಅಂಬೇಡ್ಕರ್ ರವರ ವರೆಗೂ ಸಮಾಜದಲ್ಲಿ ಇವತ್ತು ಸಮಾನತೆಯ ಬಗ್ಗೆ ಜಾಗೃತಿ ಉಂಟು ಮಾಡಿದರು ಸಮಾಜದಲ್ಲಿ ಶೇಕಡ ನೂರರಷ್ಟು ಪರಿವರ್ತನೆ ಕಾಣದಿರುವುದು ತುಂಬಾ ವಿಷಾದದ ಸಂಗತಿ ಎಂದರು. ಕಾರ್ಲ್ ಮಾರ್ಕ್ಸ್ ಮಾರ್ಟಿನ್ ಲೂಥರ್ ಕಿಂಗ್ ದಯಾನಂದ ಸರಸ್ವತಿ ಸ್ವಾಮಿ ವಿವೇಕಾನಂದ ಜ್ಯೋತಿ…

ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ನಿಧನ

ಬೆಂಗಳೂರು,ಫೆ.೨೨: ಮಾತಿನ ಮಲ್ಲಿ ಎಂದೇ ಕರೆಸಿಕೊಳ್ಳುತ್ತಿದ್ದ ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನಹೊಂದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು. ಬಳಿಕ ರೆಡಿಯೋ ಜಾಕಿ ವೃತ್ತಿಗೆ ವಿದಾಯ ಕೋರಿದ್ದ ಅವರು ಮನೆಯಲ್ಲೇ ಇದ್ದರೆನ್ನಲಾಗಿದೆ. ಆದರೆ ಫಿಟ್ ಆಂಡ್ ಫೈನ್ ಆಗಿದ್ದ ರಚನಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗಲೇ ನಿಧನರಾಗಿದ್ದಾರೆ. ರಚನಾಗೆ ೩೯ ವರ್ಷ ವಯಸ್ಸಾಗಿತ್ತು. ಕಳೆದ…

ಆನ್ ಲೈನ್ ಶಿಕ್ಷಣಕ್ಕೆ ಅನುಮತಿ; ನಿಯಮಾವಳಿ ಸುಧಾರಣೆಗೆ ಸಲಹೆ

ಬೆಂಗಳೂರು,ಫೆ,21: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸೋಮವಾರ ಇಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ‘ಕೋವಿಡ್ ಹಾಗೂ ಎನ್.ಇ.ಪಿ-2020 ಹಿನ್ನೆಲೆಯಲ್ಲಿ ಆನ್ ಲೈನ್ ಡಿಜಿಟಲ್ ಕಲಿಕೆ (ಒ.ಡಿ.ಎಲ್.) ಮತ್ತು ಆನ್ ಲೈನ್ ಕಲಿಕೆ (ಆನ್ ಲೈನ್ ಲರ್ನಿಂಗ್) ಉತ್ತೇಜಿಸಲು ನಿಯಮಾವಳಿಗಳಲ್ಲಿ ಗುಣಾತ್ಮಕ ಸುಧಾರಣೆ’ ಕುರಿತ ವಿಚಾರ ಸಂಕಿರಣವನ್ನು…

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ -ಶಾಲಾಕಾಲೇಜುಗಳಿಗೆ ಇಂದು ರಜೆ

ಶಿವಮೊಗ್ಗ, ಫೆ ೨೧: ನಿನ್ನೆ ರಾತ್ರಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಹಿಂದೂ ಕಾರ್ಯಕರ್ತನ ಹರ್ಷ ಎಂಬಾತನ ಮೇಲೆ ಎರಗಿ ಮನ ಬಂದಂತೆ ಕೊಚ್ಚಿ ಕೊಲೆ ಮಾಡಿದೆ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲೇ ಆಗಿದೆ. ಈ ಮೂಲಕ ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಹಿಜಾಬ್ ವಿವಾಧದ ಬೆನ್ನಲ್ಲೆ ಈ ಘಟನೆ ಸಂಭವಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು.…

ತುಂಗಾ ತಟ ಕಾಶಿ ಮಾದರಿಯಲ್ಲಿ ಅಭಿವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹರಿಹರ,ಫೆ,20: ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ದೇವಸ್ಥಾನವನ್ನು ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಿದ್ದಾರೆ. ಮುಂಚೆ ಹೋದಾಗ ದೇವಸ್ಥಾನ ಎಲ್ಲಿದೆ ಎಂದು ಹುಡುಕಬೇಕಿತ್ತು. ಇಂದು ಎಲ್ಲಾ ಘಾಟ್‍ಗಳನ್ನು ಸ್ವಚ್ಛಗೊಳಿಸಿ, ದೇವಸ್ಥಾನವನ್ನು ಭವ್ಯವಾಗಿ ಕಾಣುವಂತೆ ಮಾಡಿ ಗಂಗಾ ಆರತಿ ಮಾಡುತ್ತಿದ್ದಾರೆ. ಅದೇ ರೀತಿ ದಕ್ಷಿಣದಲ್ಲಿ ತುಂಗಭದ್ರಾ ಆರತಿ ಕಾರ್ಯಕ್ರಮ ವೈಭವವಾಗಿ ನಡೆಯಬೇಕೆಂದು ನಮ್ಮೆಲ್ಲರ ಬಯಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಶ್ರೀ ವಚನಾನಂದ ಸ್ವಾಮಿಗಳ ಮಾರ್ಗದರ್ಶನದಲ್ಲಿ ನಡೆಯುತ್ತಿದೆ.…

ಹರಿಹರದಲ್ಲಿ ತುಂಗಾ ಆರತಿ: ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿ;ಸಿಎಂ ಬೊಮ್ಮಾಯಿ

ಹರಿಹರ, ಫೆ,20: ಹರಿಹರ ಕ್ಷೇತ್ರದ ತುಂಗಭದ್ರಾ ನದಿ ತಟದಲ್ಲಿ 108 ಯೋಗ ಮಂಟಪಗಳನ್ನು ನಿರ್ಮಿಸಿ ಉತ್ತರದಲ್ಲಿ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣದಲ್ಲಿ ತುಂಗಾ ಆರತಿಯನ್ನು ಹಮ್ಮಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇದು ಉತ್ತಮ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳವಾಗಿ ಅಭಿವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹರಿಹರದ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಶ್ರೀ ವಚನಾನಂದ ಜಗದ್ಗುರುಗಳು ತುಂಗಾರತಿ ಕಾರ್ಯಕ್ರಮ ಏರ್ಪಡಿಸಲು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡು ಉತ್ತಮ ವಾತಾವರಣ ನಿರ್ಮಿಸಿದ್ದಾರೆ. ಪ್ರತಿನಿತ್ಯ ತುಂಗ ಭದ್ರೆಯ ಪೂಜೆ ನಡೆಯಲು ಅನುಕೂಲ…

ತ್ರಿಪದಿಗಳ ಮೂಲಕ ಜನಸಮೂಹಕ್ಕೆ ಅರಿವು ಮೂಡಿಸಿದ ಸರ್ಜಜ್ಞ: ರಘುಮೂರ್ತಿ

ಚಳ್ಳಕೆರೆ, ಫೆ,20:ಸರ್ವಜ್ಞ ತನ್ನ ತ್ರಿಪದಿ ಎಂಬ ಮೂರು ಸಾಲುಗಳ ಮೂಲಕ ಬದುಕಿನ ಒಳಿತ ಕೆಡುಕುಗಳ ಬಗ್ಗೆ ಮನಮುಟ್ಟುವಂತೆ ಹೇಳಿರುವುದನ್ನು ಮುನ್ನೂರು ಸಾಲುಗಳಲ್ಲಿ ಹೇಳಬಹುದಾದ–ಬರೆಯಬಹುದಾದ ಅರ್ಥವನ್ನು ತುಂಬಿದ್ದಾರೆ ಎಂದು ತಹಶೀಲ್ದರ್ ಎನ್. ರಘುಮೂರ್ತಿ ಹೇಳಿದರು . ನಗರದ ತಾಲ್ಲೂಕು ಕಚೇರಿಯ ಸಭಾಗಂಣದಲ್ಲಿ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಮತ್ತು ಕುಂಬಾರ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ತ್ರಿಪದಿ ಕವಿ ಸರ್ವಜ್ಞ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ವಜ್ಞ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲುಸುವುದರ ಮೂಲಕ ಕಾರ್ಯಕ್ರಮ ಚಾಲನೆ…

ಶಿವಾಜಿ ಆದರ್ಶಗಳನ್ನು ಮೂಗೂಡಿಸಿಕೊಳ್ಳಲು ಯುವಕರಿಗೆ ಕರೆ

ಚೆಳ್ಳಕೆರೆ,ಫೆ,19:ಶಿವಾಜಿ ಮಹಾರಾಜರು ಹಿಂದೂ ರಾಷ್ಟ್ರದ ಅಸ್ಮಿತೆಯನ್ನು ಕಾಪಾಡಿ ದಂತ ದಿಟ್ಟ ಹಾಗೂ ದೇಶಪ್ರೇಮಿ ರಾಜ ಇವರಿಗೆ ಹಿಂದೂ ರಾಷ್ಟ್ರದ ಕನಸು ಸ್ವರಾಜ್ಯ ಮತ್ತು ಸ್ವಧರ್ಮದ ಭಾವನೆಯನ್ನು ಮೈಗೂಡಿಸಿಕೊಂಡಿದ್ದ ಧೀಮಂತ ನಾಯಕ ಎಂದು ತಹಸೀಲ್ದಾರ್ ರಘು ಮೂರ್ತಿ ಹೇಳಿದರು . ತಾಲೂಕು ಕಚೇರಿಯಲ್ಲಿ ಛತ್ರಪತಿ ಶಿವಾಜಿಯವರ ಜಯಂತೋತ್ಸವ ವನ್ನು ಉದ್ಘಾಟಿಸಿ ಮಾತನಾಡಿ ಇವರು ಪರಕೀಯರ ವಿರುದ್ಧ ಹೋರಾಡುವ ಛ ಲವನ್ನು ಹೊಂದಿದ್ದರು ದೇಶದಲ್ಲಿನ ಭದ್ರತೆಗೆ ಕಂಟಕಪ್ರಾಯರಾಗಿ ದ್ದ ಔರಂಗಜೇಬ್ ಅಲ್ಲಾವುದ್ದೀನ್ ಖಿಲ್ಜಿ ಮಲ್ಲಿಕಾ ಕಾಫ್ ಮುಂತಾದವರನ್ನು ಹುಟ್ಟಡಗಿಸಿದ…

1 23 24 25 26 27 49
error: Content is protected !!