ರಾಜ್ಯ
31ನೇ ಜಿಲ್ಲೆಯಾಗಿ ವಿಜಯನಗರ ಅಸ್ತಿತ್ವಕ್ಕೆ
ವಿಜಯನಗರ,(ಹೊಸಪೇಟೆ),: ರಾಜ್ಯದ 31 ಜಿಲ್ಲೆಯಾಗಿ ‘ವಿಜಯನಗರ’ ಇಂದು ಅಸ್ತಿತ್ವಕ್ಕೆ ಬಂದಿದೆ. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಜಿಲ್ಲೆಯನ್ನು ಉದ್ಘಾಟಿಸಿದರು. ವಿಜಯಸ್ತಂಭ ಅನಾವರಣಗೊಳಿಸಿದ ಸಿಎಂ, ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯನಗರ ಜಿಲ್ಲೆಯಲ್ಲಿ ಸಂಸ್ಕೃತಿ, ಪುರಾತನತೆಯನ್ನು ಬಿಂಬಿಸುವ ಇತಿಹಾಸವಿದೆ. ಹಂಪಿಗೆ ಯಾತ್ರಿಗಳು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬರಬೇಕು. 643 ಕೋಟಿಯಲ್ಲಿ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ವಿಶಾಲವಾದ ಜಿಲ್ಲಾಡಳಿತ…