ರಾಜ್ಯ
ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಸಿ ಎಂ
ಬೆಂಗಳೂರು, ಸೆ, 03:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 60 ವರ್ಷದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ,…