Browsing: ರಾಜ್ಯ

ರಾಜ್ಯ

ಕಲ್ಯಾಣ ಕರ್ನಾಟಕ ಭಾಗದ 20 ಸಾವಿರ ನೇರನೇಮಕಾತಿಗೆ ಬದ್ದ; ಸಿಎಂ

ಬೆಂಗಳೂರು,ಸೆ,24: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು 10 ದಿನದೊಳಗೆ ರಚಿಸಿ , 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಅಲ್ಲದೆ ಕಾಯಂ ಕಾರ್ಯದರ್ಶಿ ಯನ್ನು ನಿಯೋಜಿಸುವ ಮೂಲಕ ಎಲ್ಲಾ ಕಾರ್ಯಗಳನ್ನು ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದ್ದಾರೆ…

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಒಡಂಬಡಿಕೆ

ಬೆಂಗಳೂರು,ಸೆ.23:ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ಹೆಕ್ಸಾಗಾನ್ ಮ್ಯಾನ್ಯುಫ್ಯಾಕ್ಚರಿಂಗ್ ಇಂಟಲಿಜೆನ್ಸ್ ಇಂಡಿಯಾ ಕಂಪೆನಿ ಜೊತೆ ಕೃಷಿ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ. ವಿಕಾಸಸೌಧದ ಸಭಾಂಗಣದಲ್ಲಿ ಹೆಕ್ಸಗಾನ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಇಟ್ಟಿದ್ದು, ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿರುವ…

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿ ಎಂ ಸೂಚನೆ

ಬೆಂಗಳೂರು, ಸೆ, 23: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ…

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ;ಸಿಎಂ

ಬೆಂಗಳೂರು,ಸೆ, 23:ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಆನ್ ಲೈನ್ ಮೂಲಕ ಒದಗಿಸುವ ವಿನೂತನ “ಗ್ರಾಮ ಸೇವಾ” ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮುಂಬರುವ ಗಣರಾಜ್ಯೋತ್ಸವ ಜನವರಿ 26 ರಿಂದ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಅಮೃತ ಗ್ರಾಮ ಪಂಚಾಯತ್ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಅಭಿವೃದ್ಧಿ ಜನರ ಸುತ್ತ ಆಗಬೇಕು; ಜನರು ಅಭಿವೃದ್ಧಿ ಸುತ್ತ ಸುತ್ತುವಂತಾಗಬಾರದು. ಈ…

ಅರ್ಚಕರಿಗೆ , ದೇವಾಲಯ ನೌಕರರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು,ಸೆ,23: ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ  ಪೂಜೆ ಸಲ್ಲಿಸುವ ಅರ್ಚಕರು  ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ  ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು…

ಮಲೆಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ,22: ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹಾದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ, ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ…

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ:ಸಿಎಂ ಸೂಚನೆ

ಬೆಂಗಳೂರು, ಸೆ. 22:ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ…

ಕೃಷ್ಣಮೇಲ್ದಂಡೆ ಯೋಜನೆ ಹಿನ್ನೀರು ಮುಳುಗಡೆ ಜಮೀನು ಮಾರ್ಗಸೂಚಿ ಪರಷ್ಕರಿಸಲು ಮನವಿ

ಬೆಂಗಳೂರು,ಸೆ, 20:ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ 524.256ಮೀ ಹಿನ್ನೀರಿನಲ್ಲಿ ಮುಳುಗಡೆಯಾಗಲಿರುವ ತಾಲೂಕಿನ ಜಮೀನಿನ ಮಾರ್ಗಸೂಚಿ ಬೆಲೆಯನ್ನು ಪರಿಷ್ಕರಣೆ ಮಾಡಬೇಕು ಎಂದು ಬಬಲೇಶ್ವರ ತಾಲೂಕಿನ ರೈತರ ನಿಯೋಗ ಇಂದು ಕಂದಾಯ ಸಚಿವ ಆರ್.ಅಶೋಕ ಅವರಿಗೆ ಮನವಿ ಸಲ್ಲಿಸಿದರು. ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದ್ದು, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ…

ಪ್ರಧಾನಿಯವರಿಂದ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ: ಸಿಎಂ ಶ್ಲಾಘನೆ

ದಾವಣಗೆರೆ, ಸೆ, 19:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಷರಶಃ ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದ್ದು, ದೇಶವನನ್ನು ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡುತ್ತಿದ್ದರು. ದೇಶಕ್ಕಾಗಿ ತ್ಯಾಗ ಮಾಡಬೇಕೆಂನ್ನುವ ಮನೋಭಾವ ಸಂಪೂರ್ಣವಾಗಿ ಮರೆತು ಹೋಗಿರುವ ಸಂದರ್ಭದಲ್ಲಿ ಇಂದು ಶ್ರೀ ನರೇಂದ್ರ ಮೋದಿಯವರು ದೇಶ ಜೋಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರ…

೩ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗಳ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವ: ಸಿಎಂ

ದಾವಣಗೆರೆ,ಸೆ,೧೯:ರಾಜ್ಯದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಮೂರು ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗಳ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದು, ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಇಲ್ಲಿನ ಪಿ.ಜಿ.ಬಡಾವಣೆಯ ಡಾ.ಎಂ.ಸಿ. ಮೋದಿ ರಸ್ತೆಯಲ್ಲಿ ೧೨೫ ಕೋಟಿ ವೆಚ್ಚದ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ (ಎಂಜಿಎನ್‌ವಿವೈ) ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಟೊಮೊಬೈಲ್ ಕ್ಷೇತ್ರಗಳಲ್ಲಿ ಕ್ಲಸ್ಟರ್‌ಗಳನ್ನು ಹೆಚ್ಚು ಮಾಡುವ ಉದ್ದೇಶವಿದ್ದು, ನಾನೇ ಈ ಬಗ್ಗೆ…

ಹ್ಯಾಪಿನೆಸ್ ಇಂಡೆಕ್ಸ್ ಆಧಾರದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾರ್ಯಕ್ರಮ: ಸಿಎಂ

ಕಲಬುರಗಿ,ಸೆ,17-ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಹ್ಯಾಪಿನೆಸ್ ಇಂಡೆಕ್ಸ್ ಆಧರಿಸಿ, ಕಾರ್ಯಕ್ರಮಗಳನ್ನು ರೂಪಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಲ್ಲಿ ತಿಳಿಸಿದರು. ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಧ್ವಜಾರೋಹಣ ಕಾರ್ಯಕ್ರಮದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಒಂದು ಕುಟುಂಬದ ಸಂತೃಪ್ತಿಯ ಮಾನದಂಡವನ್ನು ಆಧರಿಸಿ ಹ್ಯಾಪಿನೆಸ್ ಇಂಡೆಕ್ಸ್ ಅನ್ನು ನಿಗದಿ ಪಡಿಸಲಾಗುತ್ತದೆ. ಈ ಸೂಚ್ಯಂಕವನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಿದೆ. ಈ ಕುರಿತು ಯೋಜನಾ ಮಂಡಳಿಯ ಸದಸ್ಯರು ಹಾಗೂ ಇತರ…

ವೇತನ ನೀಡುವಂತೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

ಆಲಮಟ್ಟಿ,ಸೆ,17: ವಿವಿಧ ಉದ್ಯಾನಗಳಲ್ಲಿ ದಿನಗೂಲಿಗಳಾಗಿ ಕರ್ತವ್ಯನಿರ್ವಹಿಸುತ್ತಿರುವವರಿಗೆ ಕಳೆದ ೫ತಿಂಗಳಿನಿಂದ ಸಂಬಳ ನೀಡದೇ ಇರುವದರಿಂದ ಕೂಡಲೇ ವೇತನ ನೀಡುವಂತೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಸಂಯುಕ್ತ ಕೆಬಿಜೆನ್ನೆಲ್ ಆಲಮಟ್ಟಿ ಡಿ ಗ್ರುಪ್ ನೌಕರರ ಸಂಘದವತಿಯಿಂದ ಮುಖ್ಯ ಅಭಿಯಂತರರ ಕಚೇರಿಯ ಮುಂದೆ ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಅಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ, ಮಾರುಕಟ್ಟೆಯಲ್ಲಿ ನಿತ್ಯ ಬಳಸುವ ಸಾಮಗ್ರಿಗಳ ದರ ಏರಿಕೆಯಾಗುತ್ತಿದೆ ಆದ್ದರಿಂದ ದಿನಗೂಲಿ ಕಾರ್ಮಿಕರಿಗೆ ಪ್ರತಿ ತಿಂಗಳೂ ವೇತನ ನೀಡಬೇಕು ಎಂದು ಆಗ್ರಹಿಸಿದರು. ಧರಣಿ ಸ್ಥಳಕ್ಕೆ ಆಗಮಿಸಿದ ಕೆಬಿಜೆನ್ನೆಲ್ ಅರಣ್ಯ…

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭತಿ೯ಗೆ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು,ಸೆ,16: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅಚ೯ಕ, ಸಹಾಯಕ ಅಚ೯ಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭತಿ೯ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ…

ರಾಜ್ಯದ ಪ್ರಮುಖ ಜಿಲ್ಲಾ ಕೇಂದ್ರಗಳಲ್ಲಿ ವಿಮಾನನಿಲ್ದಾಣ ಹಾಗೂ ಹ್ಯಾಲಿಪ್ಯಾಡ್ ನಿರ್ಮಾಣ

ಬೆಂಗಳೂರು, ಸೆ, 15-:ಸುಲಲಿತ ವ್ಯಾಪಾರೋದ್ಯಮಕ್ಕೆ ನೆರವಾಗುವಂತೆ ರಾಜ್ಯದ ಆಯ್ದ ಜಿಲ್ಲಾ ಕೇಂದ್ರಗಳಲ್ಲಿ ವಿಮಾನ ನಿಲ್ದಾಣಗಳನ್ನು ಪ್ರಾರಂಭಿಸುವ ಚಿಂತನೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‍ಕೆಸಿಸಿಐ) ಆಯೋಜಿಸಿದ್ದ ಸಮಾರಂಭದಲ್ಲಿ ನಾನಾ ಪ್ರತಿಷ್ಠಿತ ಉದ್ಯಮದಾರರಿಗೆ `ರಫ್ತು ಶ್ರೇಷ್ಠತಾ ಪ್ರಶಸ್ತಿ’ ಪ್ರದಾನ ಮಾಡಿ ಮಂಗಳವಾರ ಅವರು ಮಾತನಾಡಿದರು. ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಸಂಬಂಧ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಿ, ಇದಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ನಡೆಸಲು…

ಆಲಮಟ್ಟಿ: ಎಲ್ಲಾ ೨೬ ಗೇಟ್ ಗಳ ಮೂಲಕ ನೀರು ಹೊರಕ್ಕೆ

ಆಲಮಟ್ಟಿ,ಸೆ,15:ಆಲಮಟ್ಟಿ ಜಲಾಶಯದ ಹರಿದು ಬರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಮುಂಜಾಗ್ರತೆಯ ಕ್ರಮವಾಗಿ ಜಲಾಶಯದ ಎಲ್ಲಾ ೨೬ ಗೇಟ್ ಗಳ ಮೂಲಕ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಗೇಟ್ ಗಳ ಮೂಲಕ ೮೦,೦೦೦ ಕ್ಯುಸೆಕ್ ಹಾಗೂ ಕೆಪಿಸಿಎಲ್ ಮೂಲಕ ೪೦,೦೦೦ ಕ್ಯುಸೆಕ್ ಸೇರಿ ಒಟ್ಟಾರೇ ೧,೨೦,೦೦೦ ಕ್ಯುಸೆಕ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. ಏಕಾಏಕಿ ಈ ಪ್ರವಾಹ ಉಂಟಾಗಿದ್ದು, ತಾತ್ಕಾಲಿಕವಾಗಿ ಒಂದೆರಡು ದಿನಗಳಲ್ಲಿ ಕಡಿಮೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿವೆ. ಸದ್ಯ ಜಲಾಶಯದ ಒಳಹರಿವು ೮೯,೦೦೦ ಕ್ಯುಸೆಕ್ ಇದ್ದು, ಜಲಾಶಯದ ಮಟ್ಟ…

ಅಡುಗೆ ಅನಿಲ ಸ್ಪೋಟ; ಸುಟ್ಟು ಕರಕಲಾದ ಸಾಮಗ್ರಿಗಳು

ಆಲಮಟ್ಟಿ,ಸೆ,15: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕ್ ಬೇನಾಳ NH ಗ್ರಾಮದಲ್ಲಿ ಅಡುಗೆ ಅನಿಲ ಸ್ಪೋಟಗೊಂಡು ಎರಡು ಲಕ್ಷ ರೂ ಮೌಲ್ಯದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಇಂದು ಬೆಳಗ್ಗೆ ಬುಡ್ಡಸಾಬ್ ಮಲ್ಲಿಕಸಾಬ್ ಗಂಜಿಹಾಳ್ ಅವರ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು  ಸ್ಪೋಟಕ್ಕೆ ಮನೆಗೆ ಬೆಂಕಿ ತಗುಲಿದ್ದು ಮನೆ ಹತ್ತಿಉರಿದಿದೆ. ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಆಗುವ ಮತ್ತಷ್ಟು ಅನಾಹುತವನ್ನು ತಡೆದಿದೆ.15 ಚೀಲ ಜೋಳ ಗೋಧಿ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ತಸಿಲ್ದಾರ್ ಸತೀಶ್…

ಎನ್.ಇ.ಪಿ ಬಗ್ಗೆ ಮುಕ್ತ ಚರ್ಚೆಗೆ ಸರ್ಕಾರ ಸಿದ್ಧ- ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆ,15: ಎನ್.ಇ.ಪಿ ( ನ್ಯೂ ಎಜುಕೇಶನ್ ಪಾಲಿಸಿ) ಬಗ್ಗೆ ಮುಕ್ತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿ.ಬಿ.ಎಂ.ಪಿ ಆಯೋಜಿಸಿದ್ದ ಭಾರತದ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ 161 ನೇ ಜಯಂತಿ ಅಂಗವಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇಂದಿನ ಕಾಲಕ್ಕೆ ತಕ್ಕ ಹಾಗೆ ಪ್ರಸ್ತುತವಾಗುವಂತೆ, ಯುವಕರಿಗೆ ಉತ್ತಮ ಭವಿಷ್ಯ ನೀಡುವಂತೆ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಸದುದ್ದೇಶವಿದೆ.…

ಸೆ. 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: 30 ಲಕ್ಷ ಲಸಿಕೆ ನೀಡುವ ಗುರಿ

ಬೆಂಗಳೂರು, ಸೆ, 14:ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.…

ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್‌ ಫರ್ನಾಂಡಿಸ್‌ ನಿಧನ

ಮಂಗಳೂರು,ಸೆ,೧೩: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್‌ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಕಳೆದ ಭಾನುವಾರ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡ ಕಾರಣ ಆಸ್ಕರ್ ಫರ್ನಾಂಡಿಸ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಅವರು ಈ ಮೊದಲು ಮನೆಯಲ್ಲಿ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರಿಂದ ತಲೆಗೆ ಏಟಾಗಿತ್ತು. ದೊಡ್ಡ…

ಮೈಸೂರು ದಸರಾ ಉತ್ಸವ; ಗಜ ಪಯಣಕ್ಕೆ ಚಾಲನೆ

ಮೈಸೂರು ಪ್ರತಿನಿಧಿ: ಬಾಲು .ಡಿ. ಮೈಸೂರು, ಸೆ, ೧೩:ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೊದಲ ಕಾರ್ಯಕ್ರಮವಾದ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಡಿನಿಂದ ನಾಡಿಗೆ ಹೊರಟ ಗಜಪಡೆ ಸಾರಥಿ ಅಭಿಮನ್ಯು ನೇತೃತ್ವದ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ನಾಗರಹೊಳೆ ವ್ಯಾಪ್ತಿಯ ಹುಣಸೂರಿನ ವೀರನಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ದಸರಾ ಆನೆಗಳಿಗೆ ಸ್ವಾಗತ ನೀಡಿದ ಅರಣ್ಯಾಧಿಕಾರಿಗಳು, ದಸರಾಗೆ…

1 31 32 33 34 35 49
error: Content is protected !!